AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಆರ್​ಸಿಬಿ ಪ್ಲೇ ಆಫ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?: ಇಲ್ಲಿದೆ ನೋಡಿ ಲೆಕ್ಕಾಚಾರ

Royal Challengers Bangalore: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೂ 7 ಪಂದ್ಯಗಳು ಬಾಕಿ ಇದೆ. ಇದರಲ್ಲಿ ಮೂರು ಪಂದ್ಯವನ್ನು ಗೆದ್ದರೆ ಸುಲಭವಾಗಿ ಪ್ಲೇ ಆಫ್ ಟಿಕೆಟ್ ದೊರೆಯುತ್ತದೆ. ಹೀಗಾಗಿ ಕೊಹ್ಲಿ ಪಡೆ ಈ ಬಾರಿಯೂ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

IPL 2021: ಆರ್​ಸಿಬಿ ಪ್ಲೇ ಆಫ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?: ಇಲ್ಲಿದೆ ನೋಡಿ ಲೆಕ್ಕಾಚಾರ
RCB
TV9 Web
| Edited By: |

Updated on:Sep 18, 2021 | 11:13 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ (IPL 2021 Phase 2) ಎರಡನೇ ಚರಣಕ್ಕೆ ನಾಳೆ ಸೆಪ್ಟೆಂಬರ್ 19 ರಂದು ಚಾಲನೆ ಸಿಗಲಿದೆ. ಐಪಿಎಲ್ ಇತಿಹಾಸದ ಎರಡು ಬಲಿಷ್ಠ ತಂಡಗಳಾದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (MIvsCSK)​ ತಂಡಗಳ ನಡುವೆ ಕಾದಾಟ ನಡೆಯುವ ಮೂಲಕ ಟೂರ್ನಿ ಪುನರಾರಂಭಗೊಳ್ಳಲಿದೆ. ಈಗಿನ ಪಾಯಿಂಟ್ ಟೇಬಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitlas) 12 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ. ಆರ್​ಸಿಬಿ (RCB) ತಂಡ ಕೂಡ 10 ಪಾಯಿಂಟ್​ನೊಂದಿಗೆ 3ನೇ ಸ್ಥಾನ ಅಲಂಕರಿಸಿದೆ. ಮುಂಬೈ ಇಂಡಿಯನ್ಸ್ (Mumbai Indians) 8 ಅಂಕದೊಂದಿಗೆ 4ನೇ ಸ್ಥಾನದಲ್ಲಿದೆ. ಇದರಲ್ಲಿ ಪ್ಲೇ ಆಫರ್ ಲೆಕ್ಕಾಚಾರ ಹೇಗೆ ಎಂಬುದನ್ನು ನೋಡುವುದಾದರೆ…

ಪಾಯಿಂಟ್ ಟೇಬಲ್​ನಲ್ಲಿ ಟಾಪ್​ನಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನು ಆರು ಪಂದ್ಯಗಳು ಬಾಕಿ ಉಳಿದಿವೆ. ಇದರಲ್ಲಿ ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್​ಗೆ ಲಗ್ಗೆಯಿಡಲಿದೆ. ಅಲ್ಲದೆ ನಂಬರ್ ಒನ್ ಸ್ಥಾನದಲ್ಲೇ ಭದ್ರವಾಗಿ ನೆಲೆಯೂರುವ ಸಂಭವವಿದ್ದು, ಕನಿಷ್ಠ ಎರಡನೇ ಸ್ಥಾನ ಪಡೆದುಕೊಂಡರೂ ರಿಷಭ್ ಪಂತ್ ಪಡೆಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ.

ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೂಡ ಏಳು ಪಂದ್ಯಗಳು ಬಾಕಿ ಉಳಿದಿವೆ. ಇದರಲ್ಲಿ ಕೇವಲ ಮೂರು ಪಂದ್ಯಗಳನ್ನು ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಹೀಗಾದಲ್ಲಿ ಧೋನಿ ಪಡೆ ದಾಖಲೆಯ 11ನೇ ಬಾರಿ ಪ್ಲೇ ಆಫ್ ಪ್ರವೇಶಿಸಿದಂತೆ ಆಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೂ 7 ಪಂದ್ಯಗಳು ಬಾಕಿ ಇದೆ. ಇದರಲ್ಲಿ ಮೂರು ಪಂದ್ಯವನ್ನು ಗೆದ್ದರೆ ಸುಲಭವಾಗಿ ಪ್ಲೇ ಆಫ್ ಟಿಕೆಟ್ ದೊರೆಯುತ್ತದೆ. ಹೀಗಾಗಿ ಕೊಹ್ಲಿ ಪಡೆ ಈ ಬಾರಿಯೂ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಈ ಹಿಂದೆ ಸಿಎಸ್​ಕೆ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧದ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಸೋತಿದೆ.

ಮುಂಬೈ ಇಂಡಿಯನ್ಸ್​ನ ರೋಹಿತ್ ಶರ್ಮಾ ಪಡೆಗೆ ಪ್ಲೇ ಆಫ್ ಹಾದಿ ಸುಗಮವಾಗಿಲ್ಲ. ಬಾಕಿಯಿರುವ ಏಳು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲ್ಲಬೇಕಾದ ಒತ್ತಡದಲ್ಲಿದೆ. ಐಪಿಎಲ್ ಇತಿಹಾಸದಲ್ಲಿ ದಾಖಲೆಯ ಐದು ಬಾರಿ ಟ್ರೋಫಿ ಗೆದ್ದಿರುವ ಮುಂಬೈ ಈ ಬಾರಿ ಕಳಪೆ ಆರಂಭ ಪಡೆದುಕೊಂಡಿತ್ತು. ನಂತರ ಕಮ್​ಬ್ಯಾಕ್ ಮಾಡಿತ್ತು. ಆದರೆ, ಎರಡನೇ ಚರಣದಲ್ಲಿ ಯಾವರೀತಿ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ರಾಜಸ್ಥಾನ್ ರಾಯಲ್ಸ್ ಕೂಡ ಬಾಕಿಉಳಿದಿರುವ ಏಳು ಪಂದ್ಯಗಳಲ್ಲಿ 4 ಪಂದ್ಯ ಗೆದ್ದರೆ ಮಾತ್ರ ಪ್ಲೇ ಆಫ್ ಪ್ರವೇಶಿಸುವ ಅವಕಾಶವಿದೆ. ಪಂಜಾಬ್ ಕಿಂಗ್ಸ್​ಗೆ ಉಳಿದಿರುವ ಏಳು ಪಂದ್ಯಗಳಲ್ಲಿ ಐದು ಪಂದ್ಯ ಗೆಲ್ಲಬೇಕು. ಅಂತೆಯೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಲಿರುವ ಏಳು ಪಂದ್ಯಗಳಲ್ಲಿ ಐದು ಪಂದ್ಯವನ್ನು ಗೆದ್ದರೆ ಮಾತ್ರ ಪ್ಲೇ ಆಫ್ ಟಿಕೆಟ್ ದೊರೆಯಲಿದೆ. ಇತ್ತ ಸನ್​ರೈಸರ್ಸ್ ಹೈದರಾಬಾದ್ ಸ್ಥಿತಿ ತೂಗುಯ್ಯಾಲೆಯಲ್ಲಿದೆ. ಬಾಕಿ ಉಳಿದಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆದ್ದರೆ ಮಾತ್ರ ಹೈದರಾಬಾದ್ ತಂಡ ಪ್ಲೇ ಆಫ್​ಗೆ ಪ್ರವೇಶಿಸುವ ಅವಕಾಶವಿದೆ.

IPL 2021: ಐಪಿಎಲ್ 14ನೇ ಆವೃತ್ತಿ ಪುನರಾರಂಭಕ್ಕೆ ಕೇವಲ ಒಂದು ದಿನ ಬಾಕಿ: ನಿಮಗೆ ಗೊತ್ತಿರಲಿ ಈ ಸಂಗತಿಗಳು

Anil Kumble: ದ್ರಾವಿಡ್​ ಅಲ್ಲ: ಟೀಮ್ ಇಂಡಿಯಾಕ್ಕೆ ಪವರ್ ಫುಲ್ ಕೋಚ್ ಬೇಕೆಂದು ಬಿಸಿಸಿಐ ಆಫರ್ ನೀಡಿದ್ದು ಯಾರಿಗೆ ಗೊತ್ತಾ?

(IPL 2021 Phase 2: Virat Kohli RCB need to win in 3 of the 7 remaining matches to qualify for IPL 2021 Playoffs)

Published On - 11:06 am, Sat, 18 September 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು