IPL 2021: ಪಂಜಾಬ್ ತಂಡದಲ್ಲಿ 3 ಬದಲಾವಣೆ; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಐಪಿಎಲ್ 2021 ರ 37 ನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಅವರ ಸನ್ ರೈಸರ್ಸ್ ಹೈದರಾಬಾದ್ ತಂಡವು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಎದುರಿಸುತ್ತಿದೆ. ಪಂಜಾಬ್ ಪ್ರಸ್ತುತ ಒಂಬತ್ತು ಪಂದ್ಯಗಳಿಂದ ಮೂರು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, ಸನ್ ರೈಸರ್ಸ್ ಎಂಟು ಪಂದ್ಯಗಳಲ್ಲಿ ಕೇವಲ ಒಂದು ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಪಂದ್ಯವನ್ನು ಗೆಲ್ಲುವುದು ಎರಡೂ ತಂಡಗಳಿಗೆ ಮುಖ್ಯವಾಗಿದೆ, ಇಲ್ಲದಿದ್ದರೆ ಪ್ಲೇಆಫ್‌ ಬಾಗಿಲುಗಳು ಎರಡು ತಂಡಕ್ಕೆ […]

IPL 2021: ಪಂಜಾಬ್ ತಂಡದಲ್ಲಿ 3 ಬದಲಾವಣೆ; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್
Edited By:

Updated on: Sep 25, 2021 | 7:20 PM

ಐಪಿಎಲ್ 2021 ರ 37 ನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಅವರ ಸನ್ ರೈಸರ್ಸ್ ಹೈದರಾಬಾದ್ ತಂಡವು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಎದುರಿಸುತ್ತಿದೆ. ಪಂಜಾಬ್ ಪ್ರಸ್ತುತ ಒಂಬತ್ತು ಪಂದ್ಯಗಳಿಂದ ಮೂರು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ, ಸನ್ ರೈಸರ್ಸ್ ಎಂಟು ಪಂದ್ಯಗಳಲ್ಲಿ ಕೇವಲ ಒಂದು ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಪಂದ್ಯವನ್ನು ಗೆಲ್ಲುವುದು ಎರಡೂ ತಂಡಗಳಿಗೆ ಮುಖ್ಯವಾಗಿದೆ, ಇಲ್ಲದಿದ್ದರೆ ಪ್ಲೇಆಫ್‌ ಬಾಗಿಲುಗಳು ಎರಡು ತಂಡಕ್ಕೆ ಮುಚ್ಚಲ್ಪಡುತ್ತವೆ. ಈ ಕಾರಣದಿಂದಾಗಿ, ಇಬ್ಬರೂ ನಾಯಕರು ತಮ್ಮ ಅತ್ಯುತ್ತಮ ಆಡುವ XI ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಶಾರ್ಜಾದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಪಂಜಾಬ್‌ನಲ್ಲಿ ಮೂರು ಬದಲಾವಣೆಗಳಾಗಿವೆ ಮತ್ತು ಹೈದರಾಬಾದ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನಾಥನ್ ಎಲ್ಲಿಸ್ ಪಂಜಾಬ್ ಪರ ಪಾದಾರ್ಪಣೆ ಮಾಡಿದ್ದಾರೆ. ಇಂದು ಅಲೆನ್, ಪೊರೆಲ್ ಮತ್ತು ರಶೀದ್ ಅವರ ಸ್ಥಾನಕ್ಕೆ ಕ್ರಿಸ್ ಗೇಲ್, ಆಲಿಸ್ ಮತ್ತು ರವಿ ವಿಷ್ಣೋಯ್ ಬಂದಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್
ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಕೇದಾರ್ ಜಾಧವ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್

ಕಿಂಗ್ಸ್ ಇಲೆವೆನ್ ಪಂಜಾಬ್
ಕೆಎಲ್ ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಏಡನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಹರಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ನಾಥನ್ ಎಲ್ಲಿಸ್