Nathan Ellis: ಪಂಜಾಬ್ ಕಿಂಗ್ಸ್​ನಲ್ಲಿ ದೊಡ್ಡ ಬದಲಾವಣೆ: ರಾಹುಲ್ ತಂಡ ಸೇರಿದ ಹೊಸ ಸ್ಟಾರ್ ಆಟಗಾರ

Punjab Kings: ಕ್ರಿಕೆಟ್ ಆಸ್ಟ್ರೇಲಿಯಾ ಈ ವಿಚಾರವನ್ನು ಬಹಿರಂಗ ಪಡಿಸಿದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಿದೆ. ಆಸ್ಟ್ರೇಲಿಯಾ ತಂಡದ ಯುವ ಪ್ರತಿಭೆ ನೇಥನ್‌ ಎಲ್ಲಿಸ್‌ಗೆ ಪಂಜಾಬ್‌ ಕಿಂಗ್ಸ್ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ.

Nathan Ellis: ಪಂಜಾಬ್ ಕಿಂಗ್ಸ್​ನಲ್ಲಿ ದೊಡ್ಡ ಬದಲಾವಣೆ: ರಾಹುಲ್ ತಂಡ ಸೇರಿದ ಹೊಸ ಸ್ಟಾರ್ ಆಟಗಾರ
Punjab Kings
Follow us
TV9 Web
| Updated By: Vinay Bhat

Updated on:Aug 21, 2021 | 7:13 AM

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿ (IPL 2021) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದರ ನಡುವೆ ನಿನ್ನೆ ಕ್ರಿಕೆಟ್ ಆಸ್ಟ್ರೇಲಿಯಾ ನಾಲ್ಕು ಆಟಗಾರರು ಐಪಿಎಲ್ 2021ಕ್ಕೆ ಲಭ್ಯರಿಲ್ಲ ಎಂದು ತಿಳಿಸಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಹರಾಜಿನಲ್ಲಿ 4 ಕೋಟಿ ಕೊಟ್ಟು ಖರೀದಿ ಮಾಡಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಕೇನ್ ರಿಚರ್ಡ್ಸನ್, ದಾಖಲೆ ಮೊತ್ತಕ್ಕೆ ಸೇಲ್ ಆಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಯಾಟ್ ಕಮಿನ್ಸ್, ಪಂಜಾಬ್ ಕಿಂಗ್ಸ್ ತಂಡದ ಜ್ಯೆ ರಿಚರ್ಡಸನ್ ಮತ್ತು ರಿಲೆ ಮೆರಡಿತ್ ಈ ಬಾರಿಯ ಮಿಲಿಯನ್ ಡಾಲರ್ ಟೂರ್ನಿಗೆ ಲಭ್ಯರಿಲ್ಲ.

ಕ್ರಿಕೆಟ್ ಆಸ್ಟ್ರೇಲಿಯಾ ಈ ವಿಚಾರವನ್ನು ಬಹಿರಂಗ ಪಡಿಸಿದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಿದೆ. ಆಸ್ಟ್ರೇಲಿಯಾ ತಂಡದ ಯುವ ಪ್ರತಿಭೆ ನೇಥನ್‌ ಎಲ್ಲಿಸ್‌ಗೆ ಪಂಜಾಬ್‌ ಕಿಂಗ್ಸ್ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಬಾಂಗ್ಲಾದೇಶ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ ಪದಾರ್ಪಣೆ ಪಂದ್ಯದಲ್ಲಿಯೇ ನೇಥನ್‌ ಎಲ್ಲಿಸ್ ಚೊಚ್ಚಲ ಹ್ಯಾಟ್ರಿಕ್‌ ವಿಕೆಟ್‌ ಪಡೆದಿದ್ದರು. ಆ ಮೂಲಕ ಪದಾರ್ಪಣೆ ಪಂದ್ಯದಲ್ಲಿಯೇ ಈ ಸಾಧನೆ ಮಾಡಿದ ಮೊದಲ ಬೌಲರ್‌ ಎಂಬ ದಾಖಲೆಗೆ ಪಾತ್ರರಾಗಿದ್ದರು.

ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಹಣಾಹಣಿಯಲ್ಲಿ ನಥಾನ್‌ ಎಲ್ಲಿಸ್‌, ತಮ್ಮ ಕೊನೆಯ ಮೂರು ಎಸೆತಗಳಲ್ಲಿ ಕ್ರಮವಾಗಿ ಬಾಂಗ್ಲಾದೇಶ ನಾಯಕ ಮಹ್ಮುದುಲ್ಹಾ, ಬೌಲರ್‌ಗಳಾದ ಮೆಹಡಿ ಹಸನ್ ಹಾಗೂ ಮುಸ್ತಾಫಿಝರ್‌ ರಹ್ಮನ್‌ ಅವರನ್ನು ಔಟ್‌ ಮಾಡಿ ಈ ಸಾಧನೆ ಮಾಡಿದ್ದರು. ಆ ಮೂಲಕ ಮುಂಬರುವ ಟಿ20 ವಿಶ್ವಕಪ್‌ ಆಸ್ಟ್ರೇಲಿಯಾ ತಂಡದಲ್ಲಿ ಮೀಸಲು ಆಟಗಾರನಾಗಿ ಎಲ್ಲಿಸ್‌ ಸ್ಥಾನ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಂಜಾಬ್ ಕಿಂಗ್ಸ್ ತಂಡದ ಸಿಇಒ ಸತೀಶ್ ಮೆನನ್, “ಕ್ರಿಕೆಟ್ ಆಸ್ಟ್ರೇಲಿಯಾದ ಪ್ರೆಸ್‌ ಕಾನ್ಫರೆನ್ಸ್‌ವರೆಗೂ ಜೇ ಹಾಗೂ ರಿಲೇ ಅವರ ಫಿಟ್‌ನೆಸ್ ಬಗ್ಗೆ ಮಾಹಿತಿಯಿರಲಿಲ್ಲ. ಈ ಮಾಧ್ಯಮಗೋಷ್ಠಿಯ ಬಳಿಕವೇ ನಮಗೆ ಈ ಇಬ್ಬರು ಆಟಗಾರರು ಟೂರ್ನಿಗೆ ಲಭ್ಯವಿರುವುದಿಲ್ಲ ಎಂಬುದು ತಿಳಿದುಬಂತು. ಹೀಗಾಗಿ ನಾವು ನೇಥನ್ ಎಲ್ಲಿಸ್ ಅವರೊಂದಿಗೆ ಬದಲಿ ಆಟಗಾರನಾಗಿ ಒಪ್ಪಂದವನ್ನು ಮಾಡಿಕೊಂಡಿದ್ದೇವೆ. ಇನ್ನೋರ್ವ ಬದಲಿ ಆಟಗಾರನನ್ನು ನಾವು ಸೇರ್ಪಡೆಗೊಳಿಸಬೇಕಿದ್ದು ಒಂದೆರಡು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್‌ನಲ್ಲಿಯೂ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ನೀರಸ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಟೂರ್ನಿ ಕೊರೊನಾ ವೈರಸ್‌ನ ಕಾರಣದಿಂದಾಗಿ ಮುಂದೂಡಿಕೆತಯಾಗುವ ಮುನ್ನ ಪಂಜಾಬ್ ಕಿಂಗ್ಸ್ ತಂಡ ಒಟ್ಟು 8 ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 3 ಪಂದ್ಯಗಳನ್ನು ಮಾತ್ರವೇ ಗೆದ್ದುಕೊಂಡಿದೆ. ಐದು ಪಂದ್ಯಗಳಲ್ಲಿ ಸೋಲಿನ ರುಚಿನ ಕಂಡಿದೆ.

ಕಳೆದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಅರ್ಧಭಾಗ ಅತ್ಯಂತ ಯಶಸ್ವಿಯಾಗಿತ್ತು. ಆದರೆ ಬಯೋ ಬಬಲ್​ನೊಳಗಿದ್ದ ಕೆಲ ಆಟಗಾರರಿಗೆ ಹಾಗೂ ಸಹಾಯಕ ಸಿಬ್ಬಂದಿಗೆ ಕೋವಿಡ್ 19 ದೃಢಪಟ್ಟ ಹಿನ್ನೆಲೆಯಲ್ಲಿ ಮೇ.04ರಂದು ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಸದ್ಯ ಟೂರ್ನಿಯ ಮುಂದಿನ ಭಾಗ ಯುಎಇ ನಲ್ಲಿ ನಡೆಯಲಿದೆ. ಇದೇ ಸೆಪ್ಟೆಂಬರ್ 19ರಿಂದ ಐಪಿಎಲ್ 2021 ಪುನರಾರಂಭವಾಗಲಿದೆ.

IPL 2021: ಅಸಲಿ ಪಿಕ್ಚರ್ ಅಭಿ ಬಾಕಿ ಹೈ! ಹೊಸ ಹೇರ್​ ಸ್ಟೈಲ್, ಬಣ್ಣ ಬಣ್ಣದ ಬಟ್ಟೆ.. ರಾಕ್​​ಸ್ಟಾರ್ ಆದ ಧೋನಿ; ವಿಡಿಯೋ

IPL 2021: ಆರ್​ಸಿಬಿಗೆ ಬಿಗ್ ಶಾಕ್: ತಂಡದ ಸ್ಟಾರ್ ಆಟಗಾರ ಐಪಿಎಲ್ 2021 ರಿಂದಲೇ ಹೊರಕ್ಕೆ

(IPL 2021 Punjab Kings Sign Australian Cricketer Nathan Ellis for the Indian Premier League 2021)

Published On - 7:09 am, Sat, 21 August 21

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ