Hardik Pandya: ಹಾರ್ದಿಕ್ ಪಾಂಡ್ಯ ಅನ್​ಫಿಟ್​: ಈ ಬಗ್ಗೆ ಮುಂಬೈ ಇಂಡಿಯನ್ಸ್​ ಕೋಚ್ ಹೇಳಿದ್ದೇನು?

IPL 2021: ಐಪಿಎಲ್​ನ ಮೊದಲಾರ್ಧದಲ್ಲಿ ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನ ಕಳಪೆಯಾಗಿತ್ತು. ಒಂದೆಡೆ ಫಿಟ್​ನೆಸ್ ಸಮಸ್ಯೆಯ ಕಾರಣ ಬೌಲಿಂಗ್ ಮಾಡಿರಲಿಲ್ಲ.

Hardik Pandya: ಹಾರ್ದಿಕ್ ಪಾಂಡ್ಯ ಅನ್​ಫಿಟ್​: ಈ ಬಗ್ಗೆ ಮುಂಬೈ ಇಂಡಿಯನ್ಸ್​ ಕೋಚ್ ಹೇಳಿದ್ದೇನು?
Hardik Pandya
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 20, 2021 | 2:51 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ದ್ವಿತಿಯಾರ್ಧ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ (CSK)  ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ಮುಖಾಮುಖಿಯಾಗಿತ್ತು. ಆದರೆ ಈ ಪಂದ್ಯದಲ್ಲಿ ಮುಂಬೈ ಪರ ಹಾರ್ದಿಕ್ ಪಾಂಡ್ಯ (Hardik Pandya) ಕಣಕ್ಕಿಳಿದಿರಲಿಲ್ಲ. ಆಡದಿರಲು ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಿಂದ ಹೊರಗುಳಿದಿದ್ದು ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರಿತು. ಅದರಲ್ಲೂ ಪಾಂಡ್ಯ ಅವರ ಅನುಪಸ್ಥಿತಿಯು ವಿಶೇಷವಾಗಿ ಮುಂಬೈ ಇಂಡಿಯನ್ಸ್‌ನ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಮೇಲೆ ನೇರ ಪರಿಣಾಮ ಬೀರಿದೆ. ಅದರಂತೆ ಮುಂಬೈ ಇಂಡಿಯನ್ಸ್​ ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ದ 20 ರನ್​ಗಳಿಂದ ಸೋಲನುಭವಿಸಿತು. ಇದೀಗ ಮುಂದಿನ ಪಂದ್ಯದಲ್ಲಿ ಪಾಂಡ್ಯ ಕಣಕ್ಕಿಳಿಯಲಿದ್ದಾರಾ? ಅವರ ಫಿಟ್​ನೆಸ್​ ಅಪ್​ಡೇಟ್ ಏನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.

ಹಾರ್ದಿಕ್ ಪಾಂಡ್ಯ ಅವರನ್ನು ದ್ವಿತಿಯಾರ್ಧ ಆರಂಭಕ್ಕೂ ಮುನ್ನ ಪ್ಲೇಯಿಂಗ್ ಇಲೆವೆನ್​ಗೆ ಆಯ್ಕೆ ಮಾಡಲಾಗಿತ್ತು. ಆದರೆ ಅಭ್ಯಾಸದ ವೇಳೆ ಗಾಯಗೊಂಡ ಪರಿಣಾಮ ಸಿಎಸ್​ಕೆ ವಿರುದ್ದದ ಪಂದ್ಯದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಮುಂಬೈ ಇಂಡಿಯನ್ಸ್ vs ಕೋಲ್ಕತಾ ನೈಟ್ ರೈಡರ್ಸ್ ಪಂದ್ಯದಲ್ಲಿ ಪಾಂಡ್ಯ ಮರಳುವ ನಿರೀಕ್ಷೆಯಿದೆ. ಆದರೆ, ಸದ್ಯ ಅವರ ಫಿಟ್​​ನೆಸ್​ ಬಗ್ಗೆ ಪ್ರಶ್ನೆಗಳು ಎದ್ದಿವೆ. ಅದರಲ್ಲೂ ತಂಡದ ಆಲ್​ರೌಂಡರ್ ಆಗಿರುವ ಪಾಂಡ್ಯ ಐಪಿಎಲ್ 2021 ರ ಉಳಿದ ಪಂದ್ಯಗಳಲ್ಲಿ ಬೌಲಿಂಗ್ ಮಾಡುತ್ತಾರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.

ಏಕೆಂದರೆ ಮೊದಲ 7 ಪಂದ್ಯಗಳಲ್ಲಿ ಅವರು ಮುಂಬೈ ಇಂಡಿಯನ್ಸ್ ಪರ ಒಂದೇ ಒಂದು ಬೌಲ್ ಹಾಕಿರಲಿಲ್ಲ. ಇದಾಗ್ಯೂ ಆಲ್​ರೌಂಡರ್ ಸ್ಥಾನದಲ್ಲಿ ಪಾಂಡ್ಯಗೆ ಟಿ20 ವಿಶ್ವಕಪ್ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಲಾಗಿತ್ತು. ಹೀಗಾಗಿ ಅವರು ದ್ವಿತಿಯಾರ್ಧದ ವೇಳೆ ಬೌಲಿಂಗ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಮತ್ತೆ ಫಿಟ್​ನೆಸ್ ಸಮಸ್ಯೆಯಿಂದ ಜೂನಿಯರ್ ಪಾಂಡ್ಯ ಬಳಲುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮುಂಬೈ ಇಂಡಿಯನ್ಸ್ ಕೋಚ್ ಮಹೇಲ ಜಯವರ್ಧನೆ, ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಳ್ಳಲು ಸ್ವಲ್ಪ ಸಮಯ ಬೇಕು. ಇದಾಗ್ಯೂ ಗಂಭೀರ ಗಾಯವಲ್ಲ. ಮುನ್ನೆಚ್ಚರಿಕೆಯಾಗಿ ಹೆಚ್ಚುವರಿ ದಿನಗಳ ಕಾಲ ವಿಶ್ರಾಂತಿ ನೀಡಿದ್ದೇವೆ ಎಂದಿದ್ದಾರೆ. ಹಾಗಾಗಿ ಕೆಕೆಆರ್​ ವಿರುದ್ದದ ಪಂದ್ಯದಲ್ಲಿ ಅಥವಾ RCB ವಿರುದ್ದದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಬಹುದು.

ಮೊದಲ ಹಂತದಲ್ಲಿ ಪಾಂಡ್ಯ ಫ್ಲಾಪ್: ಐಪಿಎಲ್​ನ ಮೊದಲಾರ್ಧದಲ್ಲಿ ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನ ಕಳಪೆಯಾಗಿತ್ತು. ಒಂದೆಡೆ ಫಿಟ್​ನೆಸ್ ಸಮಸ್ಯೆಯ ಕಾರಣ ಬೌಲಿಂಗ್ ಮಾಡಿರಲಿಲ್ಲ. ಮತ್ತೊಂದೆಡೆ ಬ್ಯಾಟ್​ ಮೂಲಕ ರನ್​ಗಳಿಸಲು ಪಾಂಡ್ಯ ಪರದಾಡಿದ್ದರು. ಪರಿಣಾಮ ಮೊದಲ ಏಳು ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 52 ರನ್ ಮಾತ್ರ. ಇನ್ನು ಕಳೆದ ಸೀಸನ್​ ಐಪಿಎಲ್​ಗೆ ಹೋಲಿಸಿದರೆ, ಪಾಂಡ್ಯ ಯುಎಇನಲ್ಲಿ ನಡೆದ ಟೂರ್ನಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು 14 ಪಂದ್ಯಗಳಲ್ಲಿ 281 ರನ್ ಬಾರಿಸಿದ್ದರು. ಅದು ಕೂಡ 179 ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

ಇದನ್ನೂ ಓದಿ: Taliban bans IPL 2021: ಐಪಿಎಲ್ ಬ್ಯಾನ್ ಮಾಡಿದ ತಾಲಿಬಾನಿಗಳು: ಕಾರಣ ಕೇಳಿದ್ರೆ ದಂಗಾಗ್ತೀರಾ..!

ಇದನ್ನೂ ಓದಿ: IPL 2021: 5 ತಂಡಗಳಲ್ಲಿ 10 ಹೊಸ ವಿದೇಶಿ ಆಟಗಾರರು

ಇದನ್ನೂ ಓದಿ: IPL 2021: RCB ತಂಡದ ಗೇಮ್ ಚೇಂಜರ್ ಆಗಲಿದ್ದಾರೆ ಟಿಮ್ ಡೇವಿಡ್

ಇದನ್ನೂ ಓದಿ: ಗೂಗಲ್ ಬಿಗ್ ಆಫರ್: ಸ್ಮಾರ್ಟ್​ಫೋನ್ ಜೊತೆ ಕೇವಲ 1 ರೂ.ಗೆ ಸ್ಮಾರ್ಟ್​ ಸ್ಪೀಕರ್

(IPL 2021: Questions are being raised on Hardik Pandya’s fitness)

Published On - 2:49 pm, Mon, 20 September 21

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM