IPL 2021 RCB Schedule: ಕೊಹ್ಲಿ ಪಡೆಯ ಎದುರಾಳಿಗಳು ಯಾರು? ಇಲ್ಲಿದೆ RCBಯ ಸಂಪೂರ್ಣ ವೇಳಾಪಟ್ಟಿ

IPL Schedule: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿದೆ. ಅದೇ ರೀತಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಸೇರಿದಂತೆ ಶಾರ್ಜಾದಲ್ಲಿ ಒಟ್ಟು 10 ಪಂದ್ಯಗಳನ್ನು ಆಯೋಜಿಸಲಿದೆ.

IPL 2021 RCB Schedule: ಕೊಹ್ಲಿ ಪಡೆಯ ಎದುರಾಳಿಗಳು ಯಾರು? ಇಲ್ಲಿದೆ RCBಯ ಸಂಪೂರ್ಣ ವೇಳಾಪಟ್ಟಿ
ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ಘೋಷಿಸಿದ್ದಾರೆ. ಮುಂಬರುವ ಟಿ20 ವಿಶ್ವಕಪ್​ ಬಳಿಕ ಟ್ವೆಂಟಿ-20 ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದಾರೆ. ಇದೀಗ ಮುಂಬರುವ ಐಪಿಎಲ್​ನಲ್ಲಿ ಕೊಹ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುವುದು ಕೂಡ ಅನುಮಾನ ಎನ್ನಲಾಗಿದೆ.
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 25, 2021 | 9:54 PM

ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತಿಯಾರ್ಧದ ವೇಳಾಪಟ್ಟಿ (IPL 2021 Schedule) ಬಿಡುಗಡೆಯಾಗಿದೆ. ಸೆಪ್ಟೆಂಬರ್ 19 ರಿಂದ ಟೂರ್ನಿಯ ಉಳಿದ ಪಂದ್ಯಗಳಿಗೆ ಚಾಲನೆ ಸಿಗಲಿದ್ದು, ಮೂರು ಸ್ಟೇಡಿಯಂನಲ್ಲಿ 31 ಪಂದ್ಯಗಳು ನಡೆಯಲಿದೆ. ಅದರಂತೆ ಶಾರ್ಜಾ, ಅಬುಧಾಬಿ ಹಾಗೂ ದುಬೈನ ಕ್ರಿಕೆಟ್ ಸ್ಟೇಡಿಯಂ ಐಪಿಎಲ್​ನ ಉಳಿದ ಪಂದ್ಯಗಳಿಗೆ ಆತಿಥ್ಯವಹಿಸಲಿದೆ.

ಸೆಪ್ಟೆಂಬರ್ 19 ರಂದು ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ ಆಗಲಿದೆ. ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ನಡೆಯಲಿದೆ. ಹಾಗೆಯೇ ಲೀಗ್ ಹಂತದ ಕೊನೆಯ ಪಂದ್ಯವು ಅಕ್ಟೋಬರ್ 8 ರಂದು ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ.

ಇನ್ನು ಆರ್​ಸಿಬಿ (IPL 2021 RCB Schedule) ತಂಡವು ಸೆಪ್ಟೆಂಬರ್ 20ರ ಮೂಲಕ ಅಭಿಯಾನ ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಸೆಪ್ಟಂಬರ್ 24 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಆರ್​ಸಿಬಿ ತನ್ನ 2ನೇ ಪಂದ್ಯ ಆಡಲಿದೆ. ಸೆಪ್ಟೆಂಬರ್ 26 ರಂದು ಆರ್​ಸಿಬಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದ್ದು, ಸೆಪ್ಟೆಂಬರ್ 29 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ದ ಕೊಹ್ಲಿ ಪಡೆ ಸೆಣಸಲಿದೆ. ಇನ್ನು ಅಕ್ಟೋಬರ್ 3 ರಂದು ಪಂಜಾಬ್ ಕಿಂಗ್ಸ್ ವಿರುದ್ದ ಹಾಗೂ ಅಕ್ಟೋಬರ್ 6 ರಂದು ಸನ್​ರೈಸರ್ಸ್​ ಹೈದಾರಾದ್ ವಿರುದ್ದ ಆಡಲಿದೆ. ಇನ್ನು ಅಕ್ಟೋಬರ್ 8 ರಂದು ಡೆಲ್ಲಿ ಕ್ಯಾಪಿಟಲ್ಸ್-ಆರ್​ಸಿಬಿ ಮುಖಾಮುಖಿಯಾಗಲಿದ್ದು, ಇದರೊಂದಿಗೆ ಲೀಗ್ ಹಂತದ ಪಂದ್ಯಗಳಿಗೆ ತೆರೆ ಬೀಳಲಿದೆ. ಆರ್​ಸಿಬಿ ತಂಡವು ದುಬೈ ಮೈದಾನದಲ್ಲಿ 3 ಪಂದ್ಯಗಳನ್ನು ಹಾಗೂ ಶಾರ್ಜಾ , ಅಬುಧಾಬಿ ಮೈದಾನದಲ್ಲಿ ತಲಾ 2 ಪಂದ್ಯಗಳನ್ನು ಆಡಲಿದೆ.

ಹಾಗೆಯೇ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿದೆ. ಅದೇ ರೀತಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಸೇರಿದಂತೆ ಶಾರ್ಜಾದಲ್ಲಿ ಒಟ್ಟು 10 ಪಂದ್ಯಗಳನ್ನು ಆಯೋಜಿಸಲಿದೆ. ಇನ್ನು 8 ಪಂದ್ಯಗಳಿಗೆ ಅಬುಧಾಬಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಸೆಪ್ಟೆಂಬರ್​ 25ರಿಂದ ಡಬಲ್ ಹೆಡರ್​ಗಳು ಆರಂಭವಾಗಲಿದ್ದು, ಒಟ್ಟು ಏಳು ಡಬಲ್ ಹೆಡರ್​ಗಳು ಇರಲಿದೆ.

ಸೆಪ್ಟೆಂಬರ್ 20- KKR vs RCB- ಅಬುಧಾಬಿ (ರಾತ್ರಿ 7.30ಕ್ಕೆ)

ಸೆಪ್ಟೆಂಬರ್ 24- RCB vs CSK- ಶಾರ್ಜಾ (ರಾತ್ರಿ 7.30ಕ್ಕೆ)

ಸೆಪ್ಟೆಂಬರ್ 26- RCB vs MI- ದುಬೈ ( ರಾತ್ರಿ 7. 30ಕ್ಕೆ)

ಸೆಪ್ಟೆಂಬರ್ 29- RR vs RCB- ದುಬೈ ( ರಾತ್ರಿ 7. 30ಕ್ಕೆ)

ಅಕ್ಟೋಬರ್-3 RCB vs PBKS – ಶಾರ್ಜಾ ( ಸಂಜೆ 3.30ಕ್ಕೆ)

ಅಕ್ಟೋಬರ್-6 RCB vs SRH – ಅಬುಧಾಬಿ (ರಾತ್ರಿ 7.30ಕ್ಕೆ)

ಅಕ್ಟೋಬರ್-8 RCB vs DC – ದುಬೈ ( ರಾತ್ರಿ 7. 30ಕ್ಕೆ)

ಇದನ್ನೂ ಓದಿ: IPL 2021 Schedule: ಐಪಿಎಲ್ ವೇಳಾಪಟ್ಟಿ ಪ್ರಕಟ: ಸೆಪ್ಟೆಂಬರ್ 19 ರಿಂದ ಚುಟುಕು ಕ್ರಿಕೆಟ್ ಕದನ ಶುರು

ಇದನ್ನೂ ಓದಿ: IPL 2021: ಐಪಿಎಲ್​ ಆರಂಭಕ್ಕೂ ಮುನ್ನವೇ CSK ತಂಡದ ಬಿಗ್​ ಪ್ಲ್ಯಾನ್..!

( Ipl 2021 RCB Match Schedule)

Published On - 8:49 pm, Sun, 25 July 21