IPL 2021: ಅರ್ಧದಲ್ಲಿ ಹೋದವರಿಗಾಗಿ ಚಿಂತಿಸುವ ಅಗತ್ಯವಿಲ್ಲ! ನಮ್ಮಲ್ಲಿ ಯುವಪಡೆ ಇದೆ; ಐಪಿಎಲ್​ ಬಗ್ಗೆ ಕೊಹ್ಲಿ ಮಾತು

IPL 2021: ಲೀಗ್‌ನ ಎರಡನೇ ಹಂತದಲ್ಲಿ ಅನೇಕ ಸ್ಟಾರ್ ಆಟಗಾರರು ಗೈರುಹಾಜರಾಗುತ್ತಾರೆ. ಇದು ತಂಡಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆದಾಗ್ಯೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಆಟಗಾರರ ನಿರ್ಗಮನವು ತನ್ನ ತಂಡದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

IPL 2021: ಅರ್ಧದಲ್ಲಿ ಹೋದವರಿಗಾಗಿ ಚಿಂತಿಸುವ ಅಗತ್ಯವಿಲ್ಲ! ನಮ್ಮಲ್ಲಿ ಯುವಪಡೆ ಇದೆ; ಐಪಿಎಲ್​ ಬಗ್ಗೆ ಕೊಹ್ಲಿ ಮಾತು
ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಮೊದಲ ಪಂದ್ಯವನ್ನು ಕೆಕೆಆರ್ ವಿರುದ್ದ ಸೆಪ್ಟೆಂಬರ್ 20 ರಂದು ಆಡಲಿದೆ.
Follow us
TV9 Web
| Updated By: ಪೃಥ್ವಿಶಂಕರ

Updated on: Sep 13, 2021 | 10:01 PM

ಐಪಿಎಲ್ 2021 ರ ಎರಡನೇ ಹಂತ ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗುತ್ತದೆ. ಎರಡನೇ ಹಂತ ಆರಂಭವಾಗುವ ಮುನ್ನ ಅನೇಕ ಆಟಗಾರರು ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಲೀಗ್‌ನ ಎರಡನೇ ಹಂತದಲ್ಲಿ ಅನೇಕ ಸ್ಟಾರ್ ಆಟಗಾರರು ಗೈರುಹಾಜರಾಗುತ್ತಾರೆ. ಇದು ತಂಡಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆದಾಗ್ಯೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಆಟಗಾರರ ನಿರ್ಗಮನವು ತನ್ನ ತಂಡದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಆರ್‌ಸಿಬಿಯ ಆಡಮ್ ಜಂಪಾ, ಡೇನಿಯಲ್ ಸ್ಯಾಮ್ಸ್, ಫಿನ್ ಅಲೆನ್, ಕೇನ್ ರಿಚರ್ಡ್ಸನ್ ಮತ್ತು ವಾಷಿಂಗ್ಟನ್ ಸುಂದರ್ ವಿವಿಧ ಕಾರಣಗಳಿಂದ ಐಪಿಎಲ್ 2021 ರ ಎರಡನೇ ಹಂತದಲ್ಲಿ ಭಾಗವಹಿಸುತ್ತಿಲ್ಲ. ವಿರಾಟ್ ತಂಡವು ವನಿಂದು ಹಸರಂಗ, ದುಸ್ಮಂತ ಚಮೀರಾ, ಟಿಮ್ ಡೇವಿಡ್, ಜಾರ್ಜ್ ಗಾರ್ಟನ್ ಮತ್ತು ಆಕಾಶ್ ದೀಪ್ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ.

ಕೊಹ್ಲಿಗೆ ತನ್ನ ಸಹ ಆಟಗಾರರ ಮೇಲೆ ನಂಬಿಕೆ ಫ್ರಾಂಚೈಸಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕೊಹ್ಲಿ, ಕಳೆದ ತಿಂಗಳು ನಾನು ಎಲ್ಲರೊಂದಿಗೆ ಮಾತನಾಡಿದ್ದೇನೆ. ನಾವು ನಮ್ಮ ಕೆಲವು ಪ್ರಮುಖ ಆಟಗಾರರನ್ನು ಉನ್ನತ ಮಟ್ಟದ ಆಟಗಾರರೊಂದಿಗೆ ಬದಲಾಯಿಸಿದ್ದೇವೆ. ನಮ್ಮ ಕೆಲವು ಪ್ರಮುಖ ಆಟಗಾರರು ಖಂಡಿತವಾಗಿಯೂ ನಮ್ಮೊಂದಿಗೆ ಇರುವುದಿಲ್ಲ. ಆದರೆ ತಂಡಕ್ಕೆ ಸೇರಲಿರುವ ಆಟಗಾರರು ಕೂಡ ಅದ್ಭುತ ಪ್ರತಿಭೆಯನ್ನು ಹೊಂದಿದ್ದಾರೆ. ನಾನು ಅವರೊಂದಿಗೆ ಅಭ್ಯಾಸ ಮಾಡಲು ತುಂಬಾ ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಯುಎಇಗೆ ಮುಂಚಿತವಾಗಿ ತಲುಪುವ ಕುರಿತು ಮಾತನಾಡಿದ ಕ್ಯಾಪ್ಟನ್ ಕೊಹ್ಲಿ, ನಾವು ಬೇಗನೆ ಇಲ್ಲಿಗೆ ತಲುಪಿದ್ದು ದುರದೃಷ್ಟಕರ. ಕೋವಿಡ್ ಇರುವವರೆಗೂ ಏನು ಬೇಕಾದರೂ ಆಗಬಹುದು. ನಾವು ಇಲ್ಲಿ ಸುರಕ್ಷಿತವಾಗಿದ್ದು ಮತ್ತು ಐಪಿಎಲ್ ಆನಂದಿಸಿ ನಂತರ ಟಿ 20 ವಿಶ್ವಕಪ್ ಆಡುತ್ತೇವೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.

ಸಿರಾಜ್ ಉತ್ತಮ ಪ್ರದರ್ಶನದ ವಿಶ್ವಾಸ ಹೊಂದಿದ್ದಾರೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ಎರಡನೇ ಹಂತದ ಐಪಿಎಲ್ ಆಡಲು ದುಬೈಗೆ ಆಗಮಿಸಿದರು ಮತ್ತು ಅವರು ತಂಡದ ಜೊತೆ ಸೇರಿಕೊಂಡಿರುವುದಕ್ಕೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು. ತಂಡದೊಂದಿಗೆ ಇದು ತುಂಬಾ ಚೆನ್ನಾಗಿದೆ, ನಾವು ಅಂಕಗಳ ಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದ್ದೇವೆ. ನಾವು ಉತ್ತಮ ಆಟಗಾರರನ್ನು ಪಡೆದುಕೊಂಡಿದ್ದೇವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನನ್ನ ವೃತ್ತಿಜೀವನವು ಇಲ್ಲಿಂದ ಮುನ್ನಡೆದಿದೆ ಆದ್ದರಿಂದ ನಾನು ಹಿಂತಿರುಗಲು ತುಂಬಾ ಉತ್ಸುಕನಾಗಿದ್ದೇನೆ. ಆಸ್ಟ್ರೇಲಿಯಾ ಸರಣಿಯಲ್ಲಿ ನಾನು ಮುಂಚೂಣಿಯ ವಿಕೆಟ್ ಪಡೆದವನು, ನಾನು ಇದೇ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧನಾಗಿದ್ದೇನೆ ಎಂದಿದ್ದಾರೆ.

ಭಾನುವಾರ ದುಬೈ ತಲುಪಿದ ನಂತರ, ಕೊಹ್ಲಿ ಮತ್ತು ಸಿರಾಜ್ ಈಗ ಆರು ದಿನಗಳ ಕಾಲ ಹೋಟೆಲ್ ಕ್ವಾರಂಟೈನ್ ನಲ್ಲಿರುತ್ತಾರೆ. ಆರ್ಸಿಬಿ ಏಳು ಪಂದ್ಯಗಳಿಂದ 10 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅವರು ಸೆಪ್ಟೆಂಬರ್ 20 ರಂದು ಅಬುಧಾಬಿಯಲ್ಲಿ ಐಪಿಎಲ್ 2021 ರ ಎರಡನೇ ಹಂತದ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರಂಭಿಸಲಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್