RCB vs DC, IPL 2021: ಕೊನೇಯ ಲೀಗ್ ಪಂದ್ಯ: ಆರ್​ಸಿಬಿ-ಡೆಲ್ಲಿ ನಡುವೆ ಹೈವೋಲ್ಟೇಜ್ ಕದನ ನಿರೀಕ್ಷೆ

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 25 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 15 ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

RCB vs DC, IPL 2021: ಕೊನೇಯ ಲೀಗ್ ಪಂದ್ಯ: ಆರ್​ಸಿಬಿ-ಡೆಲ್ಲಿ ನಡುವೆ ಹೈವೋಲ್ಟೇಜ್ ಕದನ ನಿರೀಕ್ಷೆ
RCB vs DC
Follow us
TV9 Web
| Updated By: Vinay Bhat

Updated on: Oct 08, 2021 | 8:09 AM

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಲೀಗ್ (IPL 2021) ಪಂದ್ಯಗಳಿಗೆ ಇಂದು ತೆರೆಬೀಳಲಿದೆ. ವಿಶೇಷವಾಗಿ ಇದೇ ಮೊದಲ ಬಾರಿಗೆ ಒಂದೇ ಸಮಯದಲ್ಲಿ ಎರಡು ಪಂದ್ಯಗಳು ನಡೆಯಲಿದೆ. ಅಬುಧಾಬಿಯಲ್ಲಿ ಮುಂಬೈ ಮತ್ತು ಹೈದರಾಬಾದ್ (SRH vs MI) ಹೋರಾಟ ನಡೆಸಲಿದ್ದರೆ ದುಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಸೆಣೆಸಾಟ ನಡೆಸಲಿವೆ. ಈ ಎರಡೂ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ವಿರಾಟ್ ಕೊಹ್ಲಿ (Virat Kohli) ಪಡೆಗೆ ಕೆಲವೊಂದು ತಪ್ಪುಗಳನ್ನು ಸರಿಪಡಿಸಲು ಇದ್ದು ಉತ್ತಮ ಅವಕಾಶ. ಜೊತೆಗೆ ಪಾಯಿಂಟ್ ಪಟ್ಟಿಯಲ್ಲಿ (Point Table) ಎರಡನೇ ಸ್ಥಾನಕ್ಕೇರುವ ಅವಕಾಶ ಕೂಡ ಇದೆ. ಡೆಲ್ಲಿ ವಿರುದ್ಧ ದೊಡ್ಡ ಮೊತ್ತದಲ್ಲಿ ಗೆಲ್ಲಬೇಕಿದೆ.

ಆರ್​ಸಿಬಿ ತಂಡ ಒಟ್ಟು 13 ಪಂದ್ಯಗಳನ್ನು ಆಡಿದ್ದು ಒಂಬತ್ತು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.159 ನೆಟ್​ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಇತ್ತ ಅದ್ಭುತ ಪ್ರದರ್ಶನ ತೋರಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಟ್ಟು 13 ಪಂದ್ಯಗಳನ್ನು ಆಡಿದ್ದು ಹತ್ತು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 20 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.526 ನೆಟ್​ರೇಟ್​ನೊಂದಿಗೆ ಮೊದಲ ಅಗ್ರಸ್ಥಾನದಲ್ಲಿದೆ.

ಆರ್​ಸಿಬಿ ಕಳೆದ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು. ಎಬಿ ಡಿವಿಲಿಯರ್ಸ್ ಅಜೇಯರಾಗಿ ಉಳಿದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ದೇವದತ್ ಪಡಿಕ್ಕಲ್ ನಿಧಾನಗತಿಯ ಆಟ ತಂಡಕ್ಕೆ ಹಿನ್ನಡೆಯಾಯಿತು. ಇಂದಿನ ಪಂದ್ಯದಲ್ಲಿ ಭರ್ಜರಿ ಕಮ್​ಬ್ಯಾಕ್ ಅನ್ನು ನಿರೀಕ್ಷಿಸಲಾಗಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ಪಡಿಕ್ಕಲ್ ಮತ್ತೆ ಸ್ಫೋಟಕ ಆರಂಭ ಒದಗಿಸಬೇಕಿದೆ. ಗ್ಲೆನ್ ಮ್ಯಾಕ್ಸ್​ವೆಲ್ ಅಂತೂ ಬೊಂಬಾಟ್ ಫಾರ್ಮ್​ನಲ್ಲಿದ್ದಾರೆ. ಶ್ರೀಕರ್ ಭರತ್ ಭರತ್ ಕೂಡ ತಮ್ಮ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ.

ಡ್ಯಾನ್ ಕ್ರಿಸ್ಟಿಯನ್ ಮತ್ತು ಜಾರ್ಜ್ ಗಾರ್ಟನ್ ಅವರಿಂದ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ಬರುತ್ತಿಲ್ಲ. ಹೀಗಾಗಿ ಇವರ ಜಾಗಕ್ಕೆ ಹೊಸ ಆಟಗಾರನ ಆಯ್ಕೆಯನ್ನು ಕಾಣಬಹುದು. ಉಳಿದಂತೆ ಶಹ್ಬಾಜ್ ಅಹ್ಮದ್ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ಚಹಾಲ್ ಸ್ಪಿನ್ ಮೋಡಿ ಭರ್ಜರಿ ವರ್ಕೌಟ್ ಆಗುತ್ತಿದೆ. ಸಿರಾಜ್ ಹಾಗೂ ಹರ್ಷಲ್ ಪಟೇಲ್ ಕೂಡ ತಮ್ಮ ಕೊಡುಗೆ ನೀಡುತ್ತಿದ್ದಾರೆ.

ಇತ್ತ ಡೆಲ್ಲಿ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿದೆ. ಪೃಥ್ವಿ ಶಾ ಹಾಗೂ ಶಿಖರ್ ಧವನ್ ಉತ್ತಮ ಆರಂಭ ಒದಗಿಸುತ್ತಿದ್ದರೆ, ಮಧ್ಯಮ ಕ್ರಮಾಂಕದಲ್ಲಿ ಅಯ್ಯರ್, ಪಂತ್, ಬಿಲ್ಲಿಂಗ್ಸ್, ಹೆಟ್ಮೇರ್ ಉತ್ತಮ ಲಯದಲ್ಲಿದ್ದಾರೆ. ಅಶ್ವಿನ್ ಹಾಗೂ ಅಕ್ಷರ್ ಸ್ಪಿನ್​ನಲ್ಲಿ ಮಾರಕವಾಗಿದ್ದಾರೆ. ರಬಾಡ, ಆವೇಶ್ ಖಾನ್, ಆನ್ರಿಚ್ ನಾರ್ಟ್ಜೆ ಕೂಡ ಅಪಾಯಕಾರಿಯಾಗಿದ್ದಾರೆ.

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 25 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 15 ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021, MI vs SRH: ಐಪಿಎಲ್​ನಲ್ಲಿಂದು ಒಂದೇ ಸಮಯದಲ್ಲಿ ಎರಡು ಪಂದ್ಯ: ಮುಂಬೈ-ಎಸ್​ಆರ್​ಹೆಚ್ ಪಂದ್ಯದ ಮೇಲೆ ಎಲ್ಲರ ಕಣ್ಣು

(IPL 2021 RCB vs DC Virat Kohli Royal Challengers Bangalore takes on Rishabh Pant Delhi Capitals in Dubai on Friday)

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​