IPL 2021, RCB vs MI: ಆರ್​ಸಿಬಿ-ಮುಂಬೈ ನಡುವೆ ಹೈವೋಲ್ಟೇಜ್ ಪಂದ್ಯ: ಗೆಲುವಿನ ಲಯಕ್ಕೆ ಮರಳಲು ಹರಸಾಹಸ

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ ಒಟ್ಟು 28 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 17 ಪಂದ್ಯಗಳಲ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021, RCB vs MI: ಆರ್​ಸಿಬಿ-ಮುಂಬೈ ನಡುವೆ ಹೈವೋಲ್ಟೇಜ್ ಪಂದ್ಯ: ಗೆಲುವಿನ ಲಯಕ್ಕೆ ಮರಳಲು ಹರಸಾಹಸ
RCB vs MI

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2021) ಎರಡು ಪಂದ್ಯಗಳು ಜರುಗಲಿವೆ. ಈ ಪೈಕಿ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣೆಸಾಟ ನಡೆಸಲಿವೆ. ಉಭಯ ತಂಡಗಳು ಸೋಲಿನಿಂದ ಕಂಗೆಟ್ಟಿದ್ದು, ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ. ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಆರ್​ಸಿಬಿ ಒಟ್ಟು ಒಂಬತ್ತು ಪಂದ್ಯಗಳನ್ನು ಆಡಿದ್ದು ಈ ಪೈಕಿ ಐದರಲ್ಲಿ ಗೆಲುವು ಕಂಡರೆ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. 10 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೂ ಪ್ಲೇ ಆಫ್ ಪ್ರವೇಶ ಖಾತ್ರಿಪಡಿಸಿಕೊಳ್ಳುವ ಹಾದಿ ದೂರವೇ ಇದೆ. ಬೆಂಗಳೂರು ತಂಡಕ್ಕೆ ಬಾಕಿ ಇರುವುದು ಕೇವಲ ಐದು ಪಂದ್ಯಗಳು ಮಾತ್ರ. ಇದರಲ್ಲಿ ಪ್ಲೇ ಆಫ್​ಗೇರಲು ಕೊಹ್ಲಿ ಪಡೆ ಕನಿಷ್ಠ ಮೂರು ಪಂದ್ಯಗಳನ್ನಾದರೂ ಗೆಲ್ಲಲೇ ಬೇಕಿದೆ.

ಇತ್ತ ಮುಂಬೈ ಸ್ಥಿತಿ ತೀರಾ ಕಷ್ಟದಲ್ಲಿದೆ. ಆಡಿದ 9 ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಐದರಲ್ಲಿ ಸೋಲುಕಂಡು 8 ಅಂಕದೊಂದಿವೆ ಆರನೇ ಸ್ಥಾನದಲ್ಲಿದೆ. ಮುಂಬೈ ಪ್ಲೇ ಆಫ್ ಹಂತಕ್ಕೇರಲು ಈ ಪಂದ್ಯ ಮಹತ್ವದ್ದಾಗಿದೆ.

ಭಾರತದಲ್ಲಿ ನಡೆದ ಮೊದಲ ಚರಣದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಆರ್​ಸಿಬಿ ಯುಎಇನಲ್ಲಿ ಮತ್ತದೆ ಹಳೇಯ ಚಾಳಿ ಮುಂದುವರೆಸಿದೆ. ವಿರಾಟ್ ಕೊಹ್ಲಿ ಫಾರ್ಮ್​ಗೆ ಬಂದಿರುವುದು ತಂಡದ ಪ್ಲಸ್ ಪಾಯಿಂಟ್. ದೇವದತ್ ಪಡಿಕ್ಕಲ್ ಕೂಡ ಭರ್ಜರಿ ಆರಂಭ ಒದಗಿಸುತ್ತಿದ್ದಾರೆ. ಆದರೆ, ಎಬಿ ಡಿವಿಲಿಯರ್ಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ಎರಡು ಪಂದ್ಯಗಳಲ್ಲೂ ವಿಫಲರಾಗಿದ್ದಾರೆ. ಆದರೂ ಇವರು ಯಾವುದೇ ಸಂದರ್ಭದಲ್ಲಿ ಅಬ್ಬರಿಸುವ ಸಾಮರ್ಥ್ಯ ಹೊಂದಿದ್ದಾರೆ.

ಚೊಚ್ಚಲ ಐಪಿಎಲ್ ಆಡಿದ ಟಿಮ್ ಡೇವಿಡ್ ನಿರಾಸೆ ಮೂಡಿಸಿದ್ದಾರೆ. ಆದರೆ, ಇವರಿಗೆ ಮತ್ತೊಂದು ಅವಕಾಶ ಸಿಗುವ ಅಂದಾಜಿದೆ. ಆರ್​ಸಿಬಿ ಬೌಲಿಂಗ್ ವಿಭಾಗ ಮಾತ್ರ ಸುಧಾರಿಸಿಲ್ಲ. ವಾನಿಂದು ಹಸರಂಗ ಮ್ಯಾಚಿಕ್ ಯುಎಇನಲ್ಲಿ ನಡೆಯುತ್ತಿಲ್ಲ. ಹೀಗಾಗಿ ಕೈಲ್ ಜೇಮಿಸನ್ ಮತ್ತೆ ಆಡುವ ಬಳದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ.

ಇತ್ತ ಮುಂಬೈ ಬಿಗ್ ಹಿಟ್ಟರ್​ಗಳಿಂದ ಕೂಡಿದೆಯಾದರೂ ಗೆಲುವು ಕಾಣುತ್ತಿಲ್ಲ. ಇದು ಮುಂಬೈ ಇಂಡಿಯನ್ಸ್ ತಂಡ ನಿರಾಶದಾಯಕ ಪ್ರದರ್ಶನಕ್ಕೆ ಕಾರಣ ಇರಬಹುದು ಎಂದು ತರ್ಕಿಸಲಾಗಿದೆ. ಆದರೆ, ಇಂಥ ಕೆಲ ಸಂದರ್ಭಗಳಲ್ಲಿ ಮುಂಬೈ ಇಂಡಿಯನ್ಸ್ ಫೀನಿಕ್ಸ್​ನಂತೆ ಮೇಲೇರಿದ ಉದಾಹರಣೆಗಳಿವೆ. ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಸಂಪೂರ್ಣ ವಿಫಲವಾಗಿರುವುದು ತಂಡದ ಹಿನ್ನಡೆಗೆ ಪ್ರಮುಖ ಕಾರಣ. ಬೌಲಿಂಗ್​ನಲ್ಲೂ ಮುಂಬೈ ಬದಲಾವಣೆ ತರಬೇಕಾಗಿದೆ. ಹಾರ್ದಿಕ್ ಪಾಂಡ್ಯ ಈ ಬಾರಿ ಒಂದು ಪಂದ್ಯದಲ್ಲೂ ಕಣಕ್ಕಿಳಿದಿಲ್ಲ. ಇಂದಿನ ಪಂದ್ಯದಲ್ಲಿ ಇವರು ಆಡುವ ನಿರೀಕ್ಷೆ ಇದೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ ಒಟ್ಟು 28 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 17 ಪಂದ್ಯಗಳಲ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021, CSK vs KKR: ಪ್ಲೇ ಆಫ್ ಸನಿಹದಲ್ಲಿರುವ ಸಿಎಸ್​ಕೆಗೆ ಕೋಲ್ಕತ್ತಾ ಸವಾಲು: ಸೂಪರ್ ಸಂಡೇ ಪಂದ್ಯದಲ್ಲಿ ಯಾರಿಗೆ ಗೆಲುವು?

IPL 2021, Points Table: ರಾಜಸ್ಥಾನ್ ವಿರುದ್ಧ ಗೆದ್ದ ಡೆಲ್ಲಿ; ಪಾಯಿಂಟ್‌ ಪಟ್ಟಿಯಲ್ಲಿ ಅಗ್ರ 4 ರಲ್ಲಿ ಸ್ಥಾನ ಪಡೆದ ತಂಡಗಳಿವು

(IPL 2021 RCB vs MI Mumbai Indians will face Royal Challengers Bangalore on Sunday in Dubai)

Read Full Article

Click on your DTH Provider to Add TV9 Kannada