IPL 2021: ಟಾಸ್ ಗೆದ್ದ ಕೊಹ್ಲಿ.. ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಆಡುವ XI ಹೀಗಿದೆ

IPL 2021: ವಿರಾಟ್ ತನ್ನ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಕೊನೆಯ ಪಂದ್ಯದಲ್ಲಿ ಅವರು ಫೀಲ್ಡಿಂಗ್ ಮಾಡಿದ ಅದೇ ತಂಡದೊಂದಿಗೆ ಕಣಕ್ಕಿಳಿದಿದ್ದಾರೆ.

IPL 2021: ಟಾಸ್ ಗೆದ್ದ ಕೊಹ್ಲಿ.. ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಆಡುವ XI ಹೀಗಿದೆ
ಕೊಹ್ಲಿ, ವಿಲಿಯಮ್ಸನ್
Follow us
TV9 Web
| Updated By: ಪೃಥ್ವಿಶಂಕರ

Updated on: Oct 06, 2021 | 7:14 PM

ಐಪಿಎಲ್ -2021 ರಲ್ಲಿ (ಐಪಿಎಲ್ 2021), ಇಂದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೇನ್ ವಿಲಿಯಮ್ಸನ್ ಅವರ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಸನ್ ರೈಸರ್ಸ್ ತಂಡ ಪ್ಲೇಆಫ್ ರೇಸ್ ನಿಂದ ಹೊರಗಿದೆ ಮತ್ತು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈಗ ಅವರ ಗುರಿ ಗೌರವ ಪೂರ್ವಕವಾಗಿ ಈ ಋತುವಿಗೆ ವಿದಾಯ ಹೇಳುವುದು. ಅದೇ ಸಮಯದಲ್ಲಿ ಬೆಂಗಳೂರು ತಂಡವು ಪ್ಲೇ ಆಫ್​ಗೆ ಅರ್ಹತೆ ಗಳಿಸಿದೆ. ಬೆಂಗಳೂರು ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತಿರುವುದು ಇದು ಸತತ ಎರಡನೇ ಸೀಸನ್ ಆಗಿದೆ. ಈಗ ಅವರು ಟಾಪ್ -2 ರಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಬುಧವಾರ ಅಬುಧಾಬಿಯಲ್ಲಿ ಉಭಯ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ವಿರಾಟ್ ತನ್ನ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಕೊನೆಯ ಪಂದ್ಯದಲ್ಲಿ ಅವರು ಫೀಲ್ಡಿಂಗ್ ಮಾಡಿದ ಅದೇ ತಂಡದೊಂದಿಗೆ ಕಣಕ್ಕಿಳಿದಿದ್ದಾರೆ.

ಸನ್ ರೈಸರ್ಸ್ ಕೂಡ ಬದಲಾವಣೆಗಳನ್ನು ಮಾಡಲಿಲ್ಲ ವಿರಾಟ್ ತಂಡದಂತೆ, ಸನ್ ರೈಸರ್ಸ್ ತಂಡ ಕೂಡ ತಮ್ಮ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ವಿಲಿಯಮ್ಸನ್ ಕೂಡ ಉಳಿಸಿಕೊಂಡಿದ್ದಾರೆ.

ಎರಡೂ ತಂಡಗಳು ಹೀಗಿವೆ: ಸನ್ ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ಕ್ಯಾಪ್ಟನ್), ಜೇಸನ್ ರಾಯ್, ವೃದ್ಧಿಮಾನ್ ಸಹಾ, ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್, ಉಮ್ರಾನ್ ಮಲಿಕ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ಕ್ಯಾಪ್ಟನ್), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಡೇನ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟೆನ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ