IPL 2021: ಬದಲಾವಣೆ ಮಾಡಲು ಹಿಂದೇಟು ಹಾಕಿದ ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಅಯ್ಯರ್​ಗೆ ದೊಡ್ಡ ಆಘಾತ

ಐಪಿಎಲ್‌ ಮೊದಲಾರ್ಧದಲ್ಲಿ ಡೆಲ್ಲಿ ನಿರ್ವಹಣೆ ಗಮನಾರ್ಹ ಮಟ್ಟದಲ್ಲಿದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೀಗಾಗಿ ಪಂತ್‌ ಅವರನ್ನೇ ನಾಯಕನಾಗಿ ಮುಂದುವರಿಸಲು ನಿರ್ಧರಿಸಲಾಗಿದೆ.

IPL 2021: ಬದಲಾವಣೆ ಮಾಡಲು ಹಿಂದೇಟು ಹಾಕಿದ ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಅಯ್ಯರ್​ಗೆ ದೊಡ್ಡ ಆಘಾತ
Shreyas Iyer and Rishabh Pant
Follow us
TV9 Web
| Updated By: Vinay Bhat

Updated on: Sep 17, 2021 | 10:55 AM

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ (IPL 2021) ಎರಡನೇ ಚರಣ ಆರಂಭಕ್ಕೆ ಎರಡು ದಿನಗಳಷ್ಟೆ ಬಾಕಿಯಿದೆ. ಸೆಪ್ಟೆಂಬರ್ 19 ರಂದು ಅರ್ಧತಕ್ಕೆ ನಿಂತಿದ್ದ ಐಪಿಎಲ್ 2021ಕ್ಕೆ ಯುಎಇನಲ್ಲಿ (UAE) ಮತ್ತೆ ಚಾಲನೆ ಸಿಗಲಿದೆ. ಹೀಗಿರುವಾಗ ಡೆಲ್ಲಿ ಕ್ಯಾಪಿಟಲ್ಸ್ (Delhi Capitlas) ಫ್ರಾಂಚೈಸಿ ತಂಡದ ನಾಯಕತ್ವದ ಕುರಿತು ಸ್ಪಷ್ಟನೆ ನಿಡಿದೆ. ಶ್ರೇಯಸ್‌ ಅಯ್ಯರ್‌ (Shreyas Iyer) ತಂಡಕ್ಕೆ ಮರಳಿದರೂ ರಿಷಭ್‌ ಪಂತ್‌ (Rishabh Pant) ಅವರೇ ನಾಯಕತ್ವದ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಫ್ರಾಂಚೈಸಿಯ ಸಹ ಮಾಲಕ ಪಾರ್ಥ್ ಜಿಂದಲ್‌ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಅಯ್ಯರ್​ಗೆ ದೊಡ್ಡ ಹಿನ್ನಡೆಯಾಗಿದೆ.

ಈ ಬಾರಿಯ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳ ಆರಂಭಕ್ಕೆ ಕೆಲವೇ ದಿನಗಳ ಮುನ್ನ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಇಂಗ್ಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿ ವೇಳೆ ಶ್ರೇಯಸ್‌ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಭುಜದ ಮೇಲೆ ಬಲವಾಗಿ ಬಿದ್ದು ಪೆಟ್ಟು ಮಾಡಿಕೊಮಡಿದ್ದರು. ಈ ಗಾಯದ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಪಡೆದ ಕಾರಣ 3 ತಿಂಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತ್ತಾಯಿತು.

ಹೀಗಾಗಿ ಮೊದಲ ಚರಣದ ಐಪಿಎಲ್‌ ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿದರು. ಜುಲೈನಲ್ಲಿ ಭಾರತ ತಂಡದ ಶ್ರೀಲಂಕಾ ಪ್ರವಾಸಕ್ಕೂ ಶ್ರೇಯಸ್‌ ಅವರನ್ನು ಆಯ್ಕೆ ಮಾಡಲಾಗಿರಲಿಲ್ಲ. ಈಗ ಟಿ20 ವಿಶ್ವಕಪ್‌ ತಂಡದ ಕಾಯ್ದಿರಿಸಿದ ಆಟಗಾರರ ಪಟ್ಟಿಯಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ.

ಹೀಗಾಗಿ ಅಯ್ಯರ್ ಅಲಭ್ಯತೆಯಿಂದಾಗಿ ರಿಷಭ್ ಪಂತ್ ತಂಡವನ್ನು ಮುನ್ನಡೆಸಿದ್ದಾರೆ. ಸಿಕ್ಕ ಜವಾಬ್ಧಾರಿಯನ್ನು ಅದ್ಭುತವಾಗಿ ನಿರ್ವಹಿಸಿದ್ದ ಪಂತ್ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಐಪಿಎಲ್‌ ಮೊದಲಾರ್ಧದಲ್ಲಿ ಡೆಲ್ಲಿ ನಿರ್ವಹಣೆ ಗಮನಾರ್ಹ ಮಟ್ಟದಲ್ಲಿದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೀಗಾಗಿ ಪಂತ್‌ ಅವರನ್ನೇ ನಾಯಕನಾಗಿ ಮುಂದುವರಿಸಲು ನಿರ್ಧರಿಸಲಾಗಿದೆ. ಶ್ರೇಯಸ್ ಐಯ್ಯರ್ ಆಟಗಾರನಾಗಿ ತಂಡದಲ್ಲಿ ಸ್ಥಾನವನ್ನು ನಿರ್ವಹಿಸಲಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳಲ್ಲಿ ಕೂಡ ಡೆಲ್ಲಿ ಅಮೋಘ ಪ್ರದರ್ಶನವನ್ನು ಮುಂದುವರಿಸಿದೆ. ಗೆಲುವಿನ ಮೇಲೆ ಗೆಲುವು ಸಾಧಿಸುತ್ತಾ ಮುನ್ನುಗ್ಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲಾರ್ಧದ ಅಂತ್ಯದಲ್ಲಿ ಅಂಕಪಟ್ಟಿಯಲ್ಲಿಯೂ ಅತ್ಯುನ್ನತ ಸಾಧನೆ ಮಾಡಿದೆ. ಸದ್ಯ ಈವರೆಗಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

IPL 2021: ದುಬೈ ಬೀಚ್​ನಲ್ಲಿ ಪತ್ನಿ ನತಾಶ, ಮಗ ಅಗಸ್ತ್ಯ ಜೊತೆ ಹಾರ್ದಿಕ್ ಪಾಂಡ್ಯ: ಇಲ್ಲಿವೆ ಫೋಟೋ

Virat Kohli: ಭಾರತ ಟಿ-20 ತಂಡದ ಉಪ ನಾಯಕನ ಪಟ್ಟಕ್ಕೆ ಮೂರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ

(IPL 2021 Rishabh Pant to lead Delhi Capitals in IPL 2021 Phase 2 delhi franchise confirmed)

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?