IPL 2021, RR vs CSK: ರಾಜಸ್ಥಾನ್ ಸೋತರೆ ಟೂರ್ನಿಯಿಂದ ಔಟ್: ಅಗ್ರಸ್ಥಾನ ಭದ್ರ ಪಡಿಸಲು ಚೆನ್ನೈಗೆ ಬೇಕು ಗೆಲುವು

ಉಭಯ ತಂಡಗಳು ಈವರೆಗೆ ಐಪಿಎಲ್ ಇತಿಹಾಸದಲ್ಲಿ 24 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ 9 ಮತ್ತು  ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿವೆ.

IPL 2021, RR vs CSK: ರಾಜಸ್ಥಾನ್ ಸೋತರೆ ಟೂರ್ನಿಯಿಂದ ಔಟ್: ಅಗ್ರಸ್ಥಾನ ಭದ್ರ ಪಡಿಸಲು ಚೆನ್ನೈಗೆ ಬೇಕು ಗೆಲುವು
ಮಹೇಂದ್ರ ಸಿಂಗ್ ಧೋನಿ ಅವರನ್ನು ವಿಶ್ವದ ಶ್ರೇಷ್ಠ ನಾಯಕರೆಂದು ಪರಿಗಣಿಸಲಾಗಿದೆ. ಅವರ ನಾಯಕತ್ವದಲ್ಲಿ ಭಾರತವು ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದುಕೊಂಡಿತು. ಐಪಿಎಲ್‌ನಲ್ಲಿಯೂ ಸಹ ಮಹಿ ತನ್ನ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಮೂರು ಬಾರಿ ಐಪಿಎಲ್ ವಿಜೇತರನ್ನಾಗಿಸಿದರು. ಅವರ ನಾಯಕತ್ವದಲ್ಲಿ, ಚೆನ್ನೈ ಲೀಗ್‌ಗೆ ಕಾಲಿಟ್ಟಾಗಲೆಲ್ಲಾ, ಒಮ್ಮೆ ಹೊರತುಪಡಿಸಿ, ಅವರು ಪ್ರತಿ ಬಾರಿ ಪ್ಲೇಆಫ್ ತಲುಪಿದರು. ಧೋನಿ ಅವರ ಹೆಸರಿನಲ್ಲಿ ಹಲವು ದಾಖಲೆಗಳನ್ನು ಮಾಡಿದ್ದಾರೆ. ಇಂದು ಅವರು ಐಪಿಎಲ್ -2021 ರಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆಯನ್ನು ಬರೆದುಕೊಂಡಿದ್ದಾರೆ.
Follow us
TV9 Web
| Updated By: Vinay Bhat

Updated on: Oct 02, 2021 | 8:10 AM

ಐಪಿಎಲ್ 2021 ರಲ್ಲಿ (IPl 2021) ಇಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲ ಹಣಾಹಣಿಯಲ್ಲಿ ಮುಂಬೈ-ಡೆಲ್ಲಿ (MI vs DC) ಮುಖಾಮುಖಿ ಆದರೆ, ಅನುಧಾಬಿಯ ಶೇಖ್ ಜಯೇದ್ ಕ್ರೀಡಾಂಗಣದಲ್ಲಿ ಜರುಗಲಿರುವ ಎರಡನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ (Sanju Samson) ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (RR vs CSK) ತಂಡಗಳು ಸೆಣೆಸಾಟ ನಡೆಸಲಿವೆ. ಆರ್​ಆರ್​ ತಂಡ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ. ಇಂದಿನ ಪಂದ್ಯ ಸೋತರೆ ಅದು ಅಧಿಕೃತವಾಗಲಿದೆ. ಇತ್ತ ಚೆನ್ನೈ ಈಗಾಗಲೇ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದಿದ್ದು, ತನ್ನ ಅಗ್ರಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಗೆಲ್ಲುವ ಪ್ಲಾನ್​ನಲ್ಲಿದೆ.

ಸದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ತಂಡ ಒಟ್ಟು 11 ಪಂದ್ಯಗಳನ್ನು ಆಡಿದ್ದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಒಂಬತ್ತು ಪಂದ್ಯಗಳಲ್ಲಿ ಸೋತಿದೆ. ಒಟ್ಟು 4 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.468 ನೆಟ್​ರೇಟ್​ನೊಂದಿಗೆ ಏಳನೇ ಸ್ಥಾನದಲ್ಲಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿದ್ದು 9 ಪಂದ್ಯಗಳಲ್ಲಿ ಗೆದ್ದಿದೆ. ಎರಡು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.002 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

ಚೆನ್ನೈ ತಂಡದಲ್ಲಿ ಇಂದಿನ ಪಂದ್ಯಕ್ಕೆ ಬದಲಾವಣೆ ಅನುಮಾನ. ಆರಂಭಿಕ ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್ ಪ್ರತಿ ಪಂದ್ಯದಲ್ಲಿ ಸ್ಫೋಟಕ ಆರಂಭ ಒದಗಿಸಸುತ್ತಿದ್ದಾರೆ. ಮೊಯಿನ್ ಅಲಿ, ಸುರೇಶ್ ರೈನಾ, ಎಂ. ಎಸ್ ಧೋನಿ, ಅಂಬಟಿ ರಾಯುಡು ಒಳಗೊಂಡ ಬ್ಯಾಟಿಂಗ್ ಪಡೆ ಬಲಿಷ್ಠವಾಗಿದೆ. ಬೌಲಿಂಗ್​ನಲ್ಲೀ ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಜೋಶ್ ಹ್ಯಾಜ್ಲೆವುಡ್ ಇದ್ದರೆ, ಡ್ವೇನ್ ಬ್ರಾವೋ ಮತ್ತು ಜಡೇಜಾ ತಮ್ಮ ಜವಾಬ್ದಾರಿಯನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ.

ಇತ್ತ ರಾಜಸ್ಥಾನ್ ತಂಡ ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಆರಂಭ ಪಡೆದುಕೊಂಡಿದ್ದು ಬಿಟ್ಟರೆ ಬಳಿಕ ದೀಢರ್ ಕುಸಿತ ಕಂಡಿತು. ಎವಿನ್ ಲೆವಿಸ್ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಲಯದಲ್ಲಿದ್ದಾರೆ. ಸಂಜು ಸ್ಯಾಮ್ಸನ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಆದರೆ, ನಂತರದ ಬ್ಯಾಟರ್​ಗಳಾದ ಲ್ಯಾಮ್ ಲಿವಿಂಗ್​ಸ್ಟೋನ್, ಲುಮ್ರೋರ್, ರಿಯಾನ್ ಪರಾಗ್, ರಾಹುಲ್ ತೇವಾಟಿಯ ತಂಡದಲ್ಲಿ ಕಾಣಿಕೆ ನೀಡುತ್ತಿಲ್ಲ. ಬೌಲಿಂಗ್​ನಲ್ಲಿ ಮುಸ್ತಫಿಜುರ್ ರೆಹ್ಮಾನ್, ಕಾರ್ತಿಕ್ ತ್ಯಾಗಿ ಮತ್ತು ಚೇತನ್ ಸಕರಿಯಾ ಇನ್ನಷ್ಟು ಬಲ ಹಾಕಬೇಕಿದೆ.

ಉಭಯ ತಂಡಗಳು ಈವರೆಗೆ ಐಪಿಎಲ್ ಇತಿಹಾಸದಲ್ಲಿ 24 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ 9 ಮತ್ತು  ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿವೆ.

IPL 2021, MI vs DC: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ಗೆ ಪ್ಲೇ ಆಫ್​ ತಲುಪಿರುವ ಡೆಲ್ಲಿ ಸವಾಲ್

(IPL 2021 RR vs CSK Rajasthan Royals faces a must-win game against Chennai Super Kings)

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ