IPL 2021: ರೋಚಕ ಗೆಲುವಿನ ಬೆನ್ನಲ್ಲೇ ಸಂಜು ಸ್ಯಾಮ್ಸನ್​ಗೆ 12 ಲಕ್ಷ ರೂ. ದಂಡ..!

| Updated By: ಝಾಹಿರ್ ಯೂಸುಫ್

Updated on: Sep 22, 2021 | 2:49 PM

Sanju Samson: ಇಂಡಿಯನ್ ಪ್ರಿಮಿಯರ್ ಲೀಗ್​ನ ಹೊಸ ನೀತಿ ಸಂಹಿತೆ ಪ್ರಕಾರ 20 ಓವರ್‌ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು. ಅಂದರೆ ಇನಿಂಗ್ಸ್​ವೊಂದಕ್ಕೆ 90 ನಿಮಿಷಗಳನ್ನು ನಿಗದಿಪಡಿಸಲಾಗಿದೆ.

IPL 2021: ರೋಚಕ ಗೆಲುವಿನ ಬೆನ್ನಲ್ಲೇ ಸಂಜು ಸ್ಯಾಮ್ಸನ್​ಗೆ 12 ಲಕ್ಷ ರೂ. ದಂಡ..!
Sanju Samson
Follow us on

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 32ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ ರಾಜಸ್ಥಾನ್ ರಾಯಲ್ಸ್​ ರೋಚಕ ಜಯ ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್​ ನೀಡಿದ 185 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ಗೆ​ ಅಂತಿಮ ಓವರ್​ನಲ್ಲಿ 4 ರನ್​ಗಳ ಅವಶ್ಯಕತೆಯಿತ್ತು. ಆದರೆ ಕೊನೆಯ ಓವರ್​ನಲ್ಲಿ ಕಾರ್ತಿಕ್ ತ್ಯಾಗಿ 2 ವಿಕೆಟ್​ ಹಾಗೂ ಕೇವಲ 1 ರನ್ ನೀಡುವ ಮೂಲಕ ರಾಜಸ್ಥಾನ್ ರಾಯಲ್ಸ್​ಗೆ 2 ರನ್​ಗಳ ರೋಚಕ ಜಯ ತಂದುಕೊಟ್ಟರು. ಈ ಸೂಪರ್ ಗೆಲುವಿನ ಹೊರತಾಗಿಯೂ ರಾಜಸ್ಥಾನ್ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್​​ ದಂಡಕ್ಕೆ ಗುರಿಯಾಗಿದ್ದಾರೆ.

ಹೌದು, ರಾಜಸ್ಥಾನ್ ರಾಯಲ್ಸ್​ ತಂಡವು ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ಸ್ಯಾಮ್ಸನ್ ದಂಡ ವಿಧಿಸಲಾಗಿದೆ.​ ಐಪಿಎಲ್ ನ ನೀತಿ ಸಂಹಿತೆ ಪ್ರಕಾರ ನಿಧಾನಗತಿಯ ಬೌಲಿಂಗ್ ಮಾಡಿದರೆ 12 ಲಕ್ಷ ರೂ.ದಂಡ ವಿಧಿಸಲಾಗುತ್ತದೆ. ಅದರಂತೆ ಪಂಜಾಬ್ ವಿರುದ್ದದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಪೂರ್ತಿಗೊಳಿಸಿದ ಆರ್​ಆರ್ ನಾಯಕ ಸ್ಯಾಮ್ಸನ್​ಗೆ 12 ಲಕ್ಷ ರೂ. ದಂಡ ವಿಧಿಸಿದೆ.

ಇಂಡಿಯನ್ ಪ್ರಿಮಿಯರ್ ಲೀಗ್​ನ ಹೊಸ ನೀತಿ ಸಂಹಿತೆ ಪ್ರಕಾರ 20 ಓವರ್‌ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು. ಅಂದರೆ ಇನಿಂಗ್ಸ್​ವೊಂದಕ್ಕೆ 90 ನಿಮಿಷಗಳನ್ನು ನಿಗದಿಪಡಿಸಲಾಗಿದೆ. ಅದರಂತೆ​ 90 ನಿಮಿಷಗಳಲ್ಲಿ 20 ಓವರ್​ಗಳನ್ನು ಮುಗಿಸಬೇಕು. ಈ ಹಿಂದೆ 20ನೇ ಓವರ್​ನ್ನು 90ನೇ ನಿಮಿಷದಿಂದ ಆರಂಭಿಸಲು ಅವಕಾಶ ನೀಡಲಾಗುತ್ತಿತ್ತು. ಆದರೀಗ ಒಂದು ಇನಿಂಗ್ಸ್​ಗೆ ಒಂದು ಗಂಟೆ 30 ನಿಮಿಷ ನೀಡಲಾಗುತ್ತಿದೆ. ಹಾಗೆಯೇ ಟೈಮ್-ಔಟ್​ಗಳಿಗಾಗಿ ತೆಗೆದುಕೊಂಡ ಸಮಯವನ್ನು ಕಳೆದು ಮೊದಲ ಒಂದು ಗಂಟೆಯೊಳಗೆ 14.11 ಓವರ್​ಗಳನ್ನು ಬೌಲ್ ಮಾಡಲೇಬೇಕು ಎಂಬ ನಿಯಮವಿದೆ.

ಆದರೆ ಪಂಜಾಬ್ ಕಿಂಗ್ಸ್​ ವಿರುದ್ದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡ ಹೆಚ್ಚಿನ ಸಮಯ ತೆಗೆದುಕೊಂಡಿದೆ. ಹೀಗಾಗಿ ಆರ್​ಆರ್​ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ 12 ಲಕ್ಷ ರೂ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!

ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಇದನ್ನೂ ಓದಿ: 90 ಕಿ.ಮೀ ಮೈಲೇಜ್ ನೀಡುವ ಕಡಿಮೆ ಬೆಲೆಯ ಬೈಕ್​ಗಳ ಪಟ್ಟಿ ಇಲ್ಲಿದೆ

ಇದನ್ನೂ ಓದಿ: IPL 2021: ಪ್ಲೇ ಆಫ್​ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್

(IPL 2021: Sanju Samson fined 12 lakh rs)