14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಎರಡನೇ ಚರಣ ದಿನದಿಂದ ದಿನಕ್ಕೆ ರೋಚಕತೆ ಸೃಷ್ಟಿಸುತ್ತಿದೆ. ಈಗಾಗಲೇ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ. ರಿಷಭ್ ಪಂತ್ (Rishabh Pant) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಪ್ರವೇಶಿಸಿದೆ. ಇದು ಖಚಿತವಾಗಿದ್ದು ಅಧಿಕೃತವಾಗಬೇಕಷ್ಟೆ. ಸೋಮವಾರದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ರೈಸರ್ಸ್ ತಂಡ ಗೆಲುವು ಸಾಧಿಸಿದೆ. ಇದಾದ ಬಳಿಕ ಪಾಯಿಂಟ್ ಟೇಬಲ್ನಲ್ಲಿ (IPL 2021 Points Table), ಆರೆಂಜ್ ಕ್ಯಾಪ್ನಲ್ಲಿ ಕೆಲವು ಬದಲಾವಣೆಗಳಾಗಿವೆ.
ಐಪಿಎಲ್ 2021 ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ತೊಟ್ಟಿದ್ದ ಆಟಗಾರರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ್ ಧವನ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ನಿನ್ನೆಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 82 ರನ್ ಸಿಡಿಸುವ ಮೂಲಕ ಐಪಿಎಲ್ 2021 ರ 10 ಪಂದ್ಯಗಳಲ್ಲಿ 433 ರನ್ ಗಳಿಸಿ ಆರೆಂಜ್ ಕ್ಯಾಪ್ ತಮ್ಮದಾಗಿಸಿದ್ದಾರೆ. ಈ ಆವೃತ್ತಿಯಲ್ಲಿ ಇವರು 2 ಅರ್ಧಶತಕ ಮತ್ತು ಒಂದು ಶತಕ ಕೂಡ ಬಾರಿಸಿದ್ದಾರೆ.
ಎರಡನೇ ಸ್ಥಾನದಲ್ಲಿ ಶಿಖರ್ ಧವನ್ ಇದ್ದು ಇವರು 10 ಪಂದ್ಯಗಳಲ್ಲಿ 303 ರನ್ ಗಳಿಸಿದ್ದಾರೆ. ಧವನ್ ಹಿಂಭಾಗದಲ್ಲೇ ಪಂಜಾಬ್ ಕಿಂಗ್ಸ್ ನಾಯಕ ಕೆ. ಎಲ್ ರಾಹುಲ್ ಇದ್ದು ಇವರು 9 ಪಂದ್ಯಗಳಲ್ಲಿ 401 ರನ್ ಸಿಡಿಸಿದ್ದಾರೆ. ಇವರ ಖಾತೆಯಿಂದ 4 ಅರ್ಧಶತಕ ಬಂದಿದ್ದು, 18 ಸಿಕ್ಸರ್, 34 ಫೋರ್ ಬಾರಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಸಿಎಸ್ಕೆ ತಂಡದ ಫಾಫ್ ಡುಪ್ಲೆಸಿಸ್ ಇದ್ದಾರೆ. ಇವರು 10 ಪಂದ್ಯಗಳಲ್ಲಿ 394 ರನ್ ಗಳಿಸಿದ್ದಾರೆ.
ಇನ್ನೂ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿರುವ ಆಟಗಾರ ಆರ್ಸಿಬಿ ತಂಡದ ಹರ್ಷಲ್ ಪಟೇಲ್. ಇವರು 10 ಪಂದ್ಯಗಳಲ್ಲಿ 23 ವಿಕೆಟ್ ಕಬಳಿಸಿದ್ದಾರೆ. ಈ ಬಾರಿ ಒಂದು ಸಲ 5 ವಿಕೆಟ್ ಪಡೆದ ಸಾಧನೆ ಮತ್ತು ಒಂದು ಬಾರಿ ಹ್ಯಾಟ್ರಿಕ್ ವಿಕೆಟ್ ಕಿತ್ತಿದ್ದಾರೆ.
ಎರಡನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆವೇಶ್ ಖಾನ್ ಇದ್ದು ಇವರು 10 ಪಂದ್ಯಗಳಲ್ಲಿ 15 ವಿಕೆಟ್ ಕಿತ್ತಿದ್ದಾರೆ. ಮೂರನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಜಸ್ಪ್ರೀತ್ ಬುಮ್ರಾ ಅವರಿದ್ದು 10 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಸ್ ಮೊರೀಸ್ ಎಂಟು ಪಂದ್ಯಗಳಲ್ಲಿ 14 ವಿಕೆಟ್ ಕಬಳಿಸಿ 4ನೇ ಸ್ಥಾನದಲ್ಲಿದೆ.
ಇನ್ನೂ ಪಾಯಿಂಟ್ ಟೇಬಲ್ ನೋಡುವುದಾದರೆ, ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ಅಗ್ರಸ್ಥಾನಕ್ಕೇರಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.069 ನೆಟ್ರೇಟ್ನೊಂದಿಗೆ ಮೊದಲ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.711 ನೆಟ್ರೇಟ್ನೊಂದಿಗೆ ಎರಡನೇ ಸ್ಥಾನದಲ್ಲಿದೆ.
ಐಪಿಎಲ್ ಎರಡನೇ ಚರಣವನ್ನು ಕೆಟ್ಟದಾಗಿ ಪ್ರಾರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಗೆಲುವಿನ ಲಯಕ್ಕೆ ಮರಳಿಸಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಆರರಲ್ಲಿ ಗೆಲುವು ಕಂಡಿದೆ. ನಾಲ್ಕರಲ್ಲಿ ಸೋತಿದೆ. ಒಟ್ಟು 12 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.359 ನೆಟ್ರೇಟ್ನೊಂದಿಗೆ ಮೂರನೇ ಸ್ಥಾನದಲ್ಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಟ್ಟು 10 ಪಂದ್ಯಗಳನ್ನು ಆಡಿದ್ದು ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆರು ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.322 ನೆಟ್ರೇಟ್ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಇನ್ನೂ ಕೆ. ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಪ್ಲೇ ಆಫ್ಗೆ ಲಗ್ಗೆಯಿಡಲು ಹರಸಾಹಸ ಪಡುತ್ತಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಕೇವಲ 4 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.271 ನೆಟ್ರೇಟ್ನೊಂದಿಗೆ ಐದನೇ ಸ್ಥಾನದಲ್ಲಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಸಂಕಷ್ಟದಲ್ಲಿದೆ. ನಾಲ್ಕರಲ್ಲಿ ಗೆಲುವು ಕಂಡರೆ ಆರರಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.369 ನೆಟ್ರೇಟ್ನೊಂದಿಗೆ ಆರನೇ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಹಾದಿ ತುಂಬಾನೇ ಕಠಿಣವಾಗಿದೆ. ಒಟ್ಟು 10 ಪಂದ್ಯಗಳನ್ನು ಆಡಿದ್ದು ಸೋಲನ್ನು ಹೆಚ್ಚು ಕಂಡಿದೆ. ಕೇವಲ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, 6 ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.551 ನೆಟ್ರೇಟ್ನೊಂದಿಗೆ ಏಳನೇ ಸ್ಥಾನದಲ್ಲಿದೆ.
ಸನ್ರೈಸರ್ಸ್ ಹೈದಬಾದ್ ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ ಹತ್ತು ಪಂದ್ಯಗಳಲ್ಲಿ ಕೇವಲ ಎರಡರಲ್ಲಷ್ಟೆ ಗೆದ್ದಿದೆ. ಎಂಟು ಪಂದ್ಯಗಳಲ್ಲಿ ಸೋಲುಂಡಿದೆ. ಪಾಯಿಂಟ್ ಪಟ್ಟಿಯಲ್ಲಿ -0.501 ನೆಟ್ರೇಟ್ನೊಂದಿಗೆ ಕೊನೇಯ ಎಂಟನೇ ಸ್ಥಾನದಲ್ಲಿದೆ.
IPL 2021, MI vs PBKS: ಮುಂಬೈ-ಪಂಜಾಬ್ಗೆ ಮಾಡು ಇಲ್ಲವೇ ಮಡಿ ಪಂದ್ಯ: ಅಬುಧಾಬಿಯಲ್ಲಿ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷೆ
(IPl 2021 Sanju Samson overtook Shikhar Dhawan in Orange Cap Here is Purple Cap and IPL 2021 Points Table List)