AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Schedule: ಐಪಿಎಲ್ ವೇಳಾಪಟ್ಟಿ ಪ್ರಕಟ: ಸೆಪ್ಟೆಂಬರ್ 19 ರಿಂದ ಚುಟುಕು ಕ್ರಿಕೆಟ್ ಕದನ ಶುರು

IPL 2021 Schedule: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿದೆ. ಅದೇ ರೀತಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಸೇರಿದಂತೆ ಶಾರ್ಜಾದಲ್ಲಿ ಒಟ್ಟು 10 ಪಂದ್ಯಗಳನ್ನು ಆಯೋಜಿಸಲಿದೆ. ಹಾಗೆಯೇ 8 ಪಂದ್ಯಗಳಿಗೆ ಅಬುಧಾಬಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

IPL 2021 Schedule: ಐಪಿಎಲ್ ವೇಳಾಪಟ್ಟಿ ಪ್ರಕಟ: ಸೆಪ್ಟೆಂಬರ್ 19 ರಿಂದ ಚುಟುಕು ಕ್ರಿಕೆಟ್ ಕದನ ಶುರು
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.
TV9 Web
| Updated By: ಝಾಹಿರ್ ಯೂಸುಫ್|

Updated on:Jul 25, 2021 | 8:29 PM

Share
IPL 2021 ಸೀಸನ್ 14ನ ದ್ವಿತಿಯಾರ್ಧದ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 19 ರಿಂದ ಟೂರ್ನಿಯ ಉಳಿದ ಪಂದ್ಯಗಳಿಗೆ ಚಾಲನೆ ಸಿಗಲಿದೆ. ಉಳಿದ 31 ಪಂದ್ಯಗಳನ್ನು ಮೂರು ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅದರಂತೆ ಶಾರ್ಜಾ, ಅಬುಧಾಬಿ ಹಾಗೂ ದುಬೈನ ಕ್ರಿಕೆಟ್ ಸ್ಟೇಡಿಯಂಲ್ಲಿ ಐಪಿಎಲ್ ಕಾದಾಟ ನಡೆಯಲಿದೆ.
ಈ ಹಿಂದಿನ ವೇಳಾಪಟ್ಟಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್ 30ನೇ ಪಂದ್ಯದ ಮೂಲಕ ಮುಖಾಮುಖಿಯಾಗಬೇಕಿತ್ತು. ಆದರೀಗ ಯುಎಇನಲ್ಲಿನ ಹೊಸ ವೇಳಾಪಟ್ಟಿಯಂತೆ ಸೆಪ್ಟೆಂಬರ್ 19 ರಂದು ಮೊದಲ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಹಾಗೆಯೇ ಅಕ್ಟೋಬರ್ 8 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ಲೀಗ್ ಹಂತದ ಅಂತಿಮ ಪಂದ್ಯ ಆಡಲಿದೆ.
ಇನ್ನು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿದೆ. ಅದೇ ರೀತಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಸೇರಿದಂತೆ ಶಾರ್ಜಾದಲ್ಲಿ ಒಟ್ಟು 10 ಪಂದ್ಯಗಳನ್ನು ಆಯೋಜಿಸಲಿದೆ. ಹಾಗೆಯೇ 8 ಪಂದ್ಯಗಳಿಗೆ ಅಬುಧಾಬಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಸೆಪ್ಟೆಂಬರ್​ 25ರಿಂದ ಡಬಲ್ ಹೆಡರ್​ಗಳು ಆರಂಭವಾಗಲಿದ್ದು, ಒಟ್ಟು ಏಳು ಡಬಲ್ ಹೆಡರ್​ಗಳು ಇರಲಿದೆ.
ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಪಂದ್ಯಗಳು ನಡೆಯಲಿದ್ದು, ಎರಡು ಪಂದಗಳಿದ್ದಾಗ ಮೊದಲ ಪಂದ್ಯವು ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ.

IPL 2021

Published On - 8:07 pm, Sun, 25 July 21