ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹೈದರಾಬಾದ್-ಪಂಜಾಬ್: ಸೋತರೆ ಬಹುತೇಕ ಟೂರ್ನಿಯಿಂದ ಔಟ್

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 17 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ 12 ಪಂದ್ಯಗಳಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ 5 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹೈದರಾಬಾದ್-ಪಂಜಾಬ್: ಸೋತರೆ ಬಹುತೇಕ ಟೂರ್ನಿಯಿಂದ ಔಟ್
SRH vs PBKS
Follow us
| Updated By: Vinay Bhat

Updated on: Sep 25, 2021 | 7:50 AM

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯಲ್ಲಿ (IPL 2021) ಇಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ (Kane Williamson) ನಾಯಕತ್ವದ ಸನ್​ರೈಸರ್ಸ್ ಹೈದಾರಬಾದ್ ಮತ್ತು ಕೆ. ಎಲ್ ರಾಹುಲ್ (KL Rahul) ನೇತೃತ್ವದ ಪಂಜಾಬ್ ಕಿಂಗ್ಸ್ (SRH vs PBKS) ತಂಡ ಮುಖಾಮುಖಿ ಆಗುತ್ತಿದೆ. ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ. ಈ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Sharjah Cricket Stadium) ನಡೆಯಲಿದೆ.

ಎರಡೂ ತಂಡಗಳು ಪಾಯಿಂಟ್ ಪಟ್ಟಿಯ ಕೊನೇಯ ಸ್ಥಾನದಲ್ಲಿದೆ. ಹೈದರಾಬಾದ್ ಆಡಿದ ಒಟ್ಟು 8 ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಜಯ ಸಾಧಿಸಿದ್ದು, ಉಳಿದ ಏಳು ಪಂದ್ಯಗಳಲ್ಲಿ ಸೋಲುಂಡಿದೆ. ಹೀಗಾಗಿ 2 ಅಂಕದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡ ಆಡಿದ 9 ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಆರು ಸೋಲು ಕಂಡಿದೆ. 6 ಅಂಕದೊಂದಿಗೆ 7ನೇ ಸ್ಥಾನದಲ್ಲಿದೆ.

ಪಂಜಾಬ್ ತಂಡ ಗೆಲುವಿಗೆ ಎಷ್ಟೇ ಪ್ರಯತ್ನ ಪಟ್ಟರೂ ಕೊನೇಯ ಕ್ಷಣದಲ್ಲಿ ಎಡವುತ್ತಿದೆ. ಕಳೆದ ಆರ್​ಆರ್​ ವಿರುದ್ಧದ ಪಂದ್ಯದಲ್ಲೂ ಇದೇ ತಪ್ಪನ್ನು ಮಾಡಿತು. ಆರಂಭಿಕರಾದ ನಾಯಕ ಕೆ. ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಉತ್ತಮ ಆರಂಭದ ನಡುವೆಯೂ ಮಧ್ಯಮ ಕ್ರಮಾಂಕದ ನಿಸ್ತೇಜ ನಿರ್ವಹಣೆಯಿಂದ ಪಂಜಾಬ್ ಸೋಲು ಕಂಡಿತು.

ಪಂಜಾಬ್ ಪರ ಕಳೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಕಣಕ್ಕಿಳಿಯಲಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಇವರನ್ನು ಆಡಿಸುವ ಸಂಭವವಿದೆ. ಆ್ಯಡಂ ಮರ್ಕ್ರಮ್ ಮತ್ತು ನಿಕೋಲಸ್ ಪೂರನ್ ಜವಾಬ್ದಾರಿಯುತ ಆಟ ಪ್ರದರ್ಶಿಸಬೇಕಿದೆ. ಬೌಲಿಂಗ್​ನಲ್ಲಿ ಮೊಹಮ್ಮದ್ ಶಮಿಗೆ ಇತರೆ ಬೌಲರ್​ಗಳು ಸಾಥ್ ನೀಡಬೇಕಿದೆ.

ಇತ್ತ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸುಲಭವಾಗಿ ಶರಣಾಗಿದ್ದ ಸನ್‌ರೈಸರ್ಸ್‌ ಬಳಗ ಪುಟಿದೇಳುವ ಹಂಬಲದಲ್ಲಿದೆ. ಸನ್‌ರೈಸರ್ಸ್‌ ಈ ಪಂದ್ಯದಲ್ಲಿ ಸೋತರೆ ಪ್ರಶಸ್ತಿ ಆಸೆಯನ್ನು ಅಧಿಕೃತವಾಗಿ ಕೈಚೆಲ್ಲಲಿದೆ. ಹೀಗಾಗಿ ಡೇವಿಡ್ ವಾರ್ನರ್ ಮತ್ತು ಕೇನ್ ವಿಲಿಯಮ್ಸನ್ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ. ಮನೀಶ್ ಪಾಂಡೆ ಬ್ಯಾಟ್ ಸದ್ದು ಮಾಡದಿರುವುದು ತಂಡಕ್ಕೆ ತಲೆನೋವಾಗಿದೆ. ಕೇದರ್ ಜಾಧವ್ ಮತ್ತು ವೃದ್ದಿಮಾನ್ ಸಾಹ ಕೂಡ ತಂಡಕ್ಕೆ ಆಸರೆಯಾಗಬೇಕಿದೆ. ಬೌಲಿಂಗ್​ನಲ್ಲಿ ರಶೀದ್ ಖಾನ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಜೇಸನ್ ಹೋಲ್ಡರ್​, ಸಂದೀಪ್ ಶರ್ಮಾರಂತಹ ಅನುಭವಿಗಳ ದಂಡೇ ಇದ್ದರೂ ವೈಫಲ್ಯ ಕಾಣುತ್ತಿದೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 17 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ 12 ಪಂದ್ಯಗಳಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ 5 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

IPL 2021, DC vs RR: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಮೊದಲ ಪಂದ್ಯದಲ್ಲಿ ಡೆಲ್ಲಿ-ರಾಜಸ್ಥಾನ್ ಮುಖಾಮುಖಿ

RCB vs CSK, IPL 2021: ಕೊಹ್ಲಿಗೆ ಕೈಕೊಟ್ಟ ಬ್ಯಾಟಿಂಗ್ ವಿಭಾಗ; ಆರ್​ಸಿಬಿ ವಿರುದ್ಧ ಸುಲಭವಾಗಿ ಗೆದ್ದ ಚೆನ್ನೈ

(IPL 2021 SRH vs PBKS Sunrisers Hyderabad would take on Punjab Kings in IPL Match 37)

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ