IPL 2021 Teams Points Table: ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್: ಇಲ್ಲಿದೆ ಇತರೆ ತಂಡಗಳ ಅಂಕ

ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿದ್ದು 9 ಪಂದ್ಯಗಳಲ್ಲಿ ಗೆದ್ದಿದೆ. ಎರಡು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.002 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

IPL 2021 Teams Points Table: ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್: ಇಲ್ಲಿದೆ ಇತರೆ ತಂಡಗಳ ಅಂಕ
punjab kings
Follow us
TV9 Web
| Updated By: Vinay Bhat

Updated on: Oct 02, 2021 | 9:44 AM

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಎರಡನೇ ಚರಣ ಅಂತಿಮ ಹಂತಕ್ಕೆ ತಲುಪುತ್ತಿದ್ದು ಸಾಷ್ಟು ರೋಚಕತೆ ಸೃಷ್ಟಿಸುತ್ತಿದೆ. ಈಗಾಗಲೇ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಟೂರ್ನಿಯಿಂದ ಹೊರಬಿದ್ದಿದೆ. ರಿಷಭ್ ಪಂತ್ (Rishabh Pant) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಇದರ ನಡುವೆ ಶುಕ್ರವಾರ ಕೆಕೆಆರ್ ಮತ್ತು ಪಂಜಾಬ್ ಕಿಂಗ್ಸ್ (KKR vs PBKS) ನಡುವಣ ಪಂದ್ಯದಲ್ಲಿ ರಾಹುಲ್ ಪಡೆ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಪಂಜಾಬ್ ಪಾಯಿಂಟ್ (IPL 2021 Teams Points Table) ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದೆ. ಕೆಕೆಆರ್ ಸೋತ ಪರಿಣಾಮ ಪ್ಲೇ ಆಫ್ ರೇಸ್​ನಿಂದ ಹೊರಬೀಳುವ ಭೀತಿಯಲ್ಲಿದೆ.

ಸದ್ಯಕ್ಕೆ ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿದ್ದು 9 ಪಂದ್ಯಗಳಲ್ಲಿ ಗೆದ್ದಿದೆ. ಎರಡು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.002 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.711 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ.

ಐಪಿಎಲ್ ಎರಡನೇ ಚರಣವನ್ನು ಕೆಟ್ಟದಾಗಿ ಪ್ರಾರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಗೆಲುವಿನ ಲಯಕ್ಕೆ ಮರಳಿಸಿದೆ. ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿದ್ದು ಏಳರಲ್ಲಿ ಗೆಲುವು ಕಂಡಿದೆ. ನಾಲ್ಕರಲ್ಲಿ ಸೋತಿದೆ. ಒಟ್ಟು 14 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.200 ನೆಟ್​ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಟ್ಟು 12 ಪಂದ್ಯಗಳನ್ನು ಆಡಿದ್ದು ಐದು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಏಳು ಪಂದ್ಯಗಳಲ್ಲಿ ಸೋತಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.302 ನೆಟ್​ರೇಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಇನ್ನೂ ಕೆ. ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಪ್ಲೇ ಆಫ್​ ಆಸೆಯನ್ನು ಇನ್ನೂ ಜೀವಂತವಾಗಿರಿಸಿದೆ. ಈವರೆಗೆ ಒಟ್ಟು 12 ಪಂದ್ಯಗಳನ್ನು ಆಡಿದ್ದು 5 ಪಂದ್ಯಗಳನ್ನ ಗೆದ್ದಿದೆ. ಏಳು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.236 ನೆಟ್​ರೇಟ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಹಾದಿ ತುಂಬಾನೇ ಕಠಿಣವಾಗಿದೆ. ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿದ್ದು ಕೇವಲ 5 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.453 ನೆಟ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಒಟ್ಟು 11 ಪಂದ್ಯಗಳನ್ನು ಆಡಿದ್ದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಒಂಬತ್ತು ಪಂದ್ಯಗಳಲ್ಲಿ ಸೋತಿದೆ. ಒಟ್ಟು 4 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.468 ನೆಟ್​ರೇಟ್​ನೊಂದಿಗೆ ಏಳನೇ ಸ್ಥಾನದಲ್ಲಿದೆ.

ಸನ್​ರೈಸರ್ಸ್ ಹೈದಬಾದ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ 11 ಪಂದ್ಯಗಳಲ್ಲಿ ಕೇವಲ ಎರಡರಲ್ಲಷ್ಟೆ ಗೆದ್ದಿದೆ. ಎಂಟು ಪಂದ್ಯಗಳಲ್ಲಿ ಸೋಲುಂಡಿದೆ. ಪಾಯಿಂಟ್ ಪಟ್ಟಿಯಲ್ಲಿ -0.490 ನೆಟ್​ರೇಟ್​ನೊಂದಿಗೆ ಕೊನೇಯ ಎಂಟನೇ ಸ್ಥಾನದಲ್ಲಿದೆ.

KL Rahul: ಧವನ್ ಕೈಯಿಂದ ಆರೆಂಜ್ ಕ್ಯಾಪ್ ಕಿತ್ತ ಕೆ. ಎಲ್ ರಾಹುಲ್: ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

IPL 2021, RR vs CSK: ರಾಜಸ್ಥಾನ್ ಸೋತರೆ ಟೂರ್ನಿಯಿಂದ ಔಟ್: ಅಗ್ರಸ್ಥಾನ ಭದ್ರ ಪಡಿಸಲು ಚೆನ್ನೈಗೆ ಬೇಕು ಗೆಲುವು

(IPL 2021 Teams Points Table Punjab Kings jumps to number 5 in points table playoff hopes alive)

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ