Virat Kohli: ಟೆಸ್ಟ್ ಪಂದ್ಯ ರದ್ದು: ವಿರಾಟ್ ಕೊಹ್ಲಿಗಾಗಿ ಮ್ಯಾಂಚೆಸ್ಟರ್​​ಗೆ ಬರಲಿದೆ ಆರ್​ಸಿಬಿಯ ವಿಶೇಷ ವಿಮಾನ

ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಫ್ರಾಂಚೈಸಿ ನಿಯೋಜಿಸಿರುವ ಪ್ರತ್ಯೇಕ ವಿಮಾನದಲ್ಲಿ ಭಾನುವಾರ ದುಬೈಗೆ ತೆರಳಲಿದ್ದಾರೆ.

Virat Kohli: ಟೆಸ್ಟ್ ಪಂದ್ಯ ರದ್ದು: ವಿರಾಟ್ ಕೊಹ್ಲಿಗಾಗಿ ಮ್ಯಾಂಚೆಸ್ಟರ್​​ಗೆ ಬರಲಿದೆ ಆರ್​ಸಿಬಿಯ ವಿಶೇಷ ವಿಮಾನ
ಮೂಲಗಳ ಪ್ರಕಾರ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಜೊತೆಯಾಗಿ ಇಂದು ಯುಎಇಗೆ ತಲುಪಿಲಿದ್ದಾರಂತೆ.
Follow us
TV9 Web
| Updated By: Vinay Bhat

Updated on: Sep 11, 2021 | 9:27 AM

ಯುಎಇನಲ್ಲಿ (UAE) ಆರಂಭವಾಗಲಿರುವ ಇಂಡಿಯನ್​ ಪ್ರೀಮಿಯರ್ ಲೀಗ್​ (IPL 2021) 14ನೇ ಆವೃತ್ತಿಯ ಎರಡನೇ ಚರಣಕ್ಕೆ ಕೇವಲ 8 ದಿನಗಳು ಮಾತ್ರ ಬಾಕಿ ಉಳಿದಿವೆ. ಸೆಪ್ಟೆಂಬರ್ 19 ರಂದು ಟೂರ್ನಿಗೆ ಮತ್ತೆ ಚಾಲನೆ ಸಿಗಲಿದ್ದು, ಕೆಲ ಆಟಗಾರರು ಈಗಾಗಲೇ ದುಬೈಗೆ ತಲುಪಿ ಅಭ್ಯಾಸ ಆರಂಭಿಸಿದ್ದರೆ, ಇನ್ನೂ ಕೆಲ ಆಟಗಾರರು ಕ್ವಾರಂಟೈನ್​ನಲ್ಲಿದ್ದಾರೆ. ಇತ್ತ ಆರ್​ಸಿಬಿ (RCB) ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಅಂತಿಮ ಐದನೇ ಟೆಸ್ಟ್ ರದ್ದಾದ ಕಾರಣ ನಿಗದಿ ಮಾಡಿದ್ದ ದಿನಾಂಕಕ್ಕಿಂತ ತುಸು ಬೇಗನೆ ದುಬೈಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

ಹೌದು, ವಿರಾಟ್ ಕೊಹ್ಲಿ ಹಾಗೂ ತಂಡ ಕೊನೆಯ ಕ್ಷಣಗಳಲ್ಲಿ ಕೋವಿಡ್-19 ಸೋಂಕು ಹರಡುವ ಆತಂಕ ವ್ಯಕ್ತಪಡಿಸಿದ್ದರಿಂದಾಗಿ ಪಂದ್ಯ ರದ್ದುಗೊಳಿಸಲು ಬಿಗಿ ಪಟ್ಟು ಹಿಡಿದಿದ್ದರಿಂದ ಇಸಿಬಿಯೊಂದಿಗೆ ಚರ್ಚಿಸಿ ಬಿಸಿಸಿಐ ಮ್ಯಾಂಚೆಸ್ಟರ್​ನಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಿದೆ. ಹೀಗಾಗಿ ಐಪಿಎಲ್​ನಲ್ಲಿ ಭಾಗವಹಿಸಲಿರುವ ಟೀಮ್ ಇಂಡಿಯಾದ ಆಟಗಾರರು ನಿಗದಿಗಿಂತ ಬೇಗನೆ ತಮ್ಮ ಐಪಿಎಲ್ ಫ್ರಾಂಚೈಸಿ ಸೇರಿಲಿದ್ದಾರೆ.

ಈ ಪೈಕಿ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಫ್ರಾಂಚೈಸಿ ನಿಯೋಜಿಸಿರುವ ಪ್ರತ್ಯೇಕ ವಿಮಾನದಲ್ಲಿ ಭಾನುವಾರ ದುಬೈಗೆ ತೆರಳಲಿದ್ದಾರೆ. ಇವರ ಜೊತೆ ಆರ್​ಸಿಬಿ ಮತ್ತೊಬ್ಬ ಪ್ರಮುಖ ಆಟಗಾರ ಮೊಹಮ್ಮದ್ ಸಿರಾಜ್ ಕೂಡ ಪ್ರಯಾಣ ಬೆಳೆಸಲಿದ್ದಾರಂತೆ.

ಇನ್ನೂ ಇಂಗ್ಲೆಂಡ್​ನಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆಟಗಾರರು ಇಂದು ದುಬೈಗೆ ಪ್ರಯಾಣ ಆರಂಭಿಸುವ ಸಾಧ್ಯತೆ ಇದ್ದು, ದುಬೈಗೆ ತಲುಪುತ್ತಿದ್ದಂತೆ ಆರು ದಿನಗಳ ಕಾಲ ಕ್ವಾರಂಟೈನ್​​ಗೊಳಗಾಗಲಿದ್ದಾರೆ. ಈ ಬಗ್ಗೆ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್​ ಮಾಹಿತಿ ನಿಡಿದ್ದಾರೆ.

ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಹಾಗೂ ಚೇತೇಶ್ವರ್ ಪೂಜಾರಾ ಮ್ಯಾಂಚೆಸ್ಟರ್​​ನಿಂದ ಶನಿವಾರ ಪ್ರಯಾಣ ಆರಂಭಿಸುವ ಸಾಧ್ಯತೆ ಇದ್ದು, ಆರು ದಿನಗಳ ಕಾಲ ಕ್ವಾರಂಟೈನ್​​ಗೊಳಗಾಗಿ ತದನಂತರ ತಂಡ ಸೇರಿಕೊಳ್ಳಲಿದ್ದಾರೆ ಎಂದು ಕಾಶಿ ವಿಶ್ವನಾಥನ್ ಹೇಳಿದ್ದಾರೆ.

ಕಳೆದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೊರೊನಾ ವೈರಸ್ ಕಾರಣದಿಂದಾಗಿ ಭಾರತದಲ್ಲಿ ಅರ್ಧದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಸದ್ಯ ಇದಕ್ಕೆ ಸೆಪ್ಟೆಂಬರ್ 19 ರಂದು ಮತ್ತೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣೆಸಾಟ ನಡೆಸಲಿವೆ.

ಇನ್ನೂ ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರ ಈ ಬಾರಿಯ ಐಪಿಎಲ್ ವೀಕ್ಷಿಸಲು ಸ್ಟೇಡಿಯಂನಲ್ಲಿ ಶೇ. 60 ರಷ್ಟು ಜನರಿಗೆ ಅವಕಾಶ ನೀಡುತ್ತಿದೆ ಎಂದು ಘೋಷಿಸಿದೆ. ಈ ಬಗ್ಗೆ ನಾವು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆ ಮಾತುಕತೆ ನಡೆಸಿ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದೆ. ಹೀಗಾಗಿ ಪ್ರೇಕ್ಷಕರ ನಡುವೆ ನಡಯಲಿರುವ ಐಪಿಎಲ್ ಸಾಕಷ್ಟು ರೋಚಕತೆ ಸೃಷ್ಟಿಸಲಿದೆ.

India vs England: ಬಿಸಿಸಿಐಗೆ ತಲೆನೋವಾದ ರೋಹಿತ್, ಜಡೇಜಾ ಸೇರಿ ಟೀಮ್ ಇಂಡಿಯಾದ 6 ಸ್ಟಾರ್ ಆಟಗಾರರು

India vs England: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ರದ್ದಾಗಲು ಕೋವಿಡ್ ಕಾರಣವಲ್ಲ: ಇಲ್ಲಿದೆ ನೋಡಿ ಅಸಲಿ ವಿಚಾರ

(IPL 2021 Virat Kohli and Mohammad Siraj fly out RCB charter flight from Manchester to Dubai)

ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು