Ipl 2022: 2 ಪಂದ್ಯಗಳಿಂದ ಡೆಲ್ಲಿ ವೇಗಿ ಔಟ್: ಆದರೂ ರಿಷಭ್ ಪಂತ್ ಫುಲ್ ಖುಷ್..!

| Updated By: ಝಾಹಿರ್ ಯೂಸುಫ್

Updated on: Mar 22, 2022 | 4:48 PM

Ipl 2022: ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ.

Ipl 2022: 2 ಪಂದ್ಯಗಳಿಂದ ಡೆಲ್ಲಿ ವೇಗಿ ಔಟ್: ಆದರೂ ರಿಷಭ್ ಪಂತ್ ಫುಲ್ ಖುಷ್..!
IPL 2022
Follow us on

ಐಪಿಎಲ್ ಸೀಸನ್ 15 ಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ನೆಟ್ಸ್​ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಈಗಾಗಲೇ ತಂಡದ ಬಹುತೇಕ ಆಟಗಾರರು ಐಪಿಎಲ್​ಗಾಗಿ ಆಗಮಿಸಿದ್ದಾರೆ. ಈ ಪಟ್ಟಿಯಲ್ಲಿ ಸೌತ್ ಆಫ್ರಿಕಾದ ವೇಗಿ ಅನ್ರಿಕ್ ನೋಕಿಯಾ ಕೂಡ ಇದ್ದಾರೆ. ಆದರೆ ಅತ್ತ ಸೌತ್ ಆಫ್ರಿಕಾ ಬಾಂಗ್ಲಾದೇಶದ ವಿರುದ್ದ ಸರಣಿ ಆಡುತ್ತಿದೆ. ಆದರೆ ಗಾಯದ ಕಾರಣ ಈ ಸರಣಿಯಿಂದ ಹೊರಗುಳಿದಿದ್ದ ಅನ್ರಿಕ್ ನೋಕಿಯಾ ಐಪಿಎಲ್​ಗಾಗಿ ಆಗಮಿಸಿದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಐಪಿಎಲ್​ಗಾಗಿ ಸೌತ್ ಆಫ್ರಿಕಾ ವೇಗಿ ಬಂದಿದ್ದರೂ ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ.

ಅನ್ರಿಕ್ ನೋಕಿಯಾ ಇನ್ನೂ ಕೂಡ ಸಂಪೂರ್ಣವಾಗಿ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಐಪಿಎಲ್​ಗೆ ಆಗಮಿಸಿ ಮೊದಲೇ ಕ್ವಾರಂಟೈನ್ ಮುಗಿಸಲು ನಿರ್ಧರಿಸಿದ್ದಾರೆ. ಆ ಬಳಿಕ ವಿಶ್ರಾಂತಿಯನ್ನು ಮುಂದುವರೆಸಿದರೂ, ಫಿಟ್​ ಆಗುತ್ತಿದ್ದಂತೆ ನೇರವಾಗಿ ಮೈದಾನಕ್ಕಿಳಿಯಬಹುದು. ಹೀಗಾಗಿ ಅನ್ರಿಕ್ ನೋಕಿಯಾ ಐಪಿಎಲ್​ ಆರಂಭಕ್ಕೂ ಮುನ್ನವೇ ಆಗಮಿಸಿ ಇಲ್ಲೇ ವಿಶ್ರಾಂತಿ ಮುಂದುವರೆಸಲಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಅನ್ರಿಕ್ ನೋಕಿಯಾ ಏಪ್ರಿಲ್ ಮೊದಲ ವಾರದವರೆಗೆ ವಿಶ್ರಾಂತಿ ಪಡೆಯಲಿದ್ದಾರೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಮಾರ್ಚ್ 27 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇನ್ನು 2ನೇ ಪಂದ್ಯವನ್ನು ಏಪ್ರಿಲ್ 2 ರಂದು ಗುಜರಾತ್ ಟೈಟನ್ಸ್ ವಿರುದ್ದ ಆಡಲಿದೆ. ಈ ಎರಡು ಪಂದ್ಯಗಳಿಗೆ ನೋಕಿಯಾ ಅಲಭ್ಯರಾಗಲಿದ್ದಾರೆ. ಇನ್ನು ಏಪ್ರಿಲ್ 7 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯದಲ್ಲಿ ನೋಕಿಯಾ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇತ್ತ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾದರೂ ಅನ್ರಿಕ್ ನೋಕಿಯಾ ಆಗಮನದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಫುಲ್ ಖುಷಿಯಾಗಿದ್ದಾರೆ. ಏಕೆಂದರೆ ಈ ಸಲ ಗಾಯದ ಕಾರಣ ನೋಕಿಯಾ ಐಪಿಎಲ್​ನಿಂದ ಹಿಂದೆ ಸರಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಬೇಗನೆ ಆಗಮಿಸಿ ತಮ್ಮ ವಿಶ್ರಾಂತಿ ವೇಳೆ ಕ್ವಾರಂಟೈನ್ ಮುಗಿಸಿ ಅನ್ರಿಕ್ ನೋಕಿಯಾ ತಂಡವನ್ನು ಕೂಡಿಕೊಳ್ಳುವ ಪ್ಲ್ಯಾನ್ ಮಾಡಿದ್ದಾರೆ. ಇದರಿಂದಾಗಿ ಕೇವಲ 2 ಪಂದ್ಯಗಳನ್ನು ತಪ್ಪಿಸಿಕೊಂಡರೂ ಉಳಿದ ಪಂದ್ಯಗಳಿಗೆ ಅನ್ರಿಕ್ ನೋಕಿಯಾ ಲಭ್ಯರಿರಲಿದ್ದಾರೆ.

ಅನ್ರಿಕ್ ನೋಕಿಯಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ 6.5 ಕೋಟಿ ರೂ.ಗೆ ಉಳಿಸಿಕೊಂಡಿತ್ತು. ನೋಕಿಯಾ ಕಳೆದ ಸೀಸನ್​ 8 ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದರು. ಹಾಗೆಯೇ 2020 ರಲ್ಲಿ 16 ಪಂದ್ಯಗಳಲ್ಲಿ 22 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು. ಹೀಗಾಗಿ ಈ ಬಾರಿ ಅನ್ರಿಕ್ ನೋಕಿಯಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಿಟೈನ್ ಮಾಡಿಕೊಂಡಿತ್ತು.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​:
ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅಶ್ವಿನ್ ಹೆಬ್ಬಾರ್, ಅಶ್ವಿನ್ ಹೆಬ್ಬಾರ್ , ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಲುಂಗಿ ಎನ್‌ಗಿಡಿ, ಟಿಮ್ ಸೀಫರ್ಟ್, ಪ್ರವೀಣ್ ದುಬೆ, ರೋವ್‌ಮನ್ ಪೊವೆಲ್, ಲಲಿತ್ ಯಾದವ್.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?