AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಈ ಬಾರಿ ಕೂಡ ಅರ್ಜುನ್ ತೆಂಡೂಲ್ಕರ್​ಗೆ ಸಿಕ್ಕಿಲ್ಲ ಚಾನ್ಸ್​

Arjun tendulkar : ಈ ಬಾರಿ ಮುಂಬೈ ಇಂಡಿಯನ್ಸ್ ತಂಡವು ಅರ್ಜುನ್ ತೆಂಡೂಲ್ಕರ್ ಅವರನ್ನು 30 ಲಕ್ಷ ರೂ. ನೀಡಿ ಖರೀದಿಸಿದೆ. ಅಲ್ಲದೆ ಕಳೆದ ಸೀಸನ್​ನಲ್ಲು ಅರ್ಜುನ್ ಮುಂಬೈ ತಂಡದಲ್ಲಿದ್ದರು.

IPL 2022: ಈ ಬಾರಿ ಕೂಡ ಅರ್ಜುನ್ ತೆಂಡೂಲ್ಕರ್​ಗೆ ಸಿಕ್ಕಿಲ್ಲ ಚಾನ್ಸ್​
Arjun tendulkar
TV9 Web
| Edited By: |

Updated on: Apr 16, 2022 | 3:26 PM

Share

ಐಪಿಎಲ್ ಸೀಸನ್ 15 ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun tendulkar ) ಲಕ್ನೋ ಸೂಪರ್ ಜೈಂಟ್ಸ್ (LSG vs MI)​ ವಿರುದ್ದದ ಪಂದ್ಯದಲ್ಲಿ ಪಾದರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಇದನ್ನು ಪುಷ್ಠೀಕರಿಸುವಂತೆ ಮುಂಬೈ ಇಂಡಿಯನ್ಸ್ ತನ್ನ ಟ್ವಿಟರ್​ ಖಾತೆಯಲ್ಲಿ ಸಣ್ಣ ಸುಳಿವೊಂದನ್ನು ನೀಡಿದ್ದರು. ಇದಕ್ಕೆ ಅರ್ಜುನ್ ತೆಂಡೂಲ್ಕರ್ ಸಹೋದರಿ ಸಾರಾ ತೆಂಡೂಲ್ಕರ್ (Sara tendulkar)  ಕೂಡ ಹಾರ್ಟ್​ ಎಮೋಜಿ ಹಾಕಿ ಖುಷಿ ವ್ಯಕ್ತಪಡಿಸಿದ್ದರು. ಆದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದರೂ ಅರ್ಜುನ್​ಗೆ ಅವಕಾಶ ನೀಡಲಾಗಿಲ್ಲ.

ಈ ಬಾರಿ ಮುಂಬೈ ಇಂಡಿಯನ್ಸ್ ತಂಡವು ಅರ್ಜುನ್ ತೆಂಡೂಲ್ಕರ್ ಅವರನ್ನು 30 ಲಕ್ಷ ರೂ. ನೀಡಿ ಖರೀದಿಸಿದೆ. ಅಲ್ಲದೆ ಕಳೆದ ಸೀಸನ್​ನಲ್ಲು ಅರ್ಜುನ್ ಮುಂಬೈ ತಂಡದಲ್ಲಿದ್ದರು. ಇದಾಗ್ಯೂ ಆಡುವ ಅವಕಾಶ ದೊರೆತಿರಲಿಲ್ಲ. ಈ ಬಾರಿ ಸತತ 5 ಸೋಲುಂಡಿರುವ ಕಾರಣ ಮುಂಬೈ ಇಂಡಿಯನ್ಸ್ ತಂಡದಲ್ಲಿ ಬದಲಾವಣೆ ಕಂಡು ಬರಲಿದೆ ಎನ್ನಲಾಗಿತ್ತು. ಅದರಲ್ಲೂ ಯುವ ಆಲ್​ರೌಂಡರ್ ಅರ್ಜುನ್​ ತೆಂಡೂಲ್ಕರ್​ಗೆ ಅವಕಾಶ ನೀಡಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ರೋಹಿತ್ ಶರ್ಮಾ ಪ್ಲೇಯಿಂಗ್ 11 ಘೋಷಿಸಿದಾಗ ಅದರಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ಹೆಸರಿರಲಿಲ್ಲ. ಹೀಗಾಗಿ ಜೂನಿಯರ್ ತೆಂಡೂಲ್ಕರ್ ಪಾದರ್ಪಣೆಗಾಗಿ ಸಚಿನ್ ಅಭಿಮಾನಿಗಳು ಮತ್ತಷ್ಟು ದಿನಗಳು ಕಾಯಬೇಕಾಗಿ ಬರಬಹುದು. ಅದರಂತೆ ಐಪಿಎಲ್​ನ 26ನೇ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್