ಐಪಿಎಲ್ ಸೀಸನ್ 15 ನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun tendulkar ) ಲಕ್ನೋ ಸೂಪರ್ ಜೈಂಟ್ಸ್ (LSG vs MI) ವಿರುದ್ದದ ಪಂದ್ಯದಲ್ಲಿ ಪಾದರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಇದನ್ನು ಪುಷ್ಠೀಕರಿಸುವಂತೆ ಮುಂಬೈ ಇಂಡಿಯನ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಸಣ್ಣ ಸುಳಿವೊಂದನ್ನು ನೀಡಿದ್ದರು. ಇದಕ್ಕೆ ಅರ್ಜುನ್ ತೆಂಡೂಲ್ಕರ್ ಸಹೋದರಿ ಸಾರಾ ತೆಂಡೂಲ್ಕರ್ (Sara tendulkar) ಕೂಡ ಹಾರ್ಟ್ ಎಮೋಜಿ ಹಾಕಿ ಖುಷಿ ವ್ಯಕ್ತಪಡಿಸಿದ್ದರು. ಆದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದರೂ ಅರ್ಜುನ್ಗೆ ಅವಕಾಶ ನೀಡಲಾಗಿಲ್ಲ.
ಈ ಬಾರಿ ಮುಂಬೈ ಇಂಡಿಯನ್ಸ್ ತಂಡವು ಅರ್ಜುನ್ ತೆಂಡೂಲ್ಕರ್ ಅವರನ್ನು 30 ಲಕ್ಷ ರೂ. ನೀಡಿ ಖರೀದಿಸಿದೆ. ಅಲ್ಲದೆ ಕಳೆದ ಸೀಸನ್ನಲ್ಲು ಅರ್ಜುನ್ ಮುಂಬೈ ತಂಡದಲ್ಲಿದ್ದರು. ಇದಾಗ್ಯೂ ಆಡುವ ಅವಕಾಶ ದೊರೆತಿರಲಿಲ್ಲ. ಈ ಬಾರಿ ಸತತ 5 ಸೋಲುಂಡಿರುವ ಕಾರಣ ಮುಂಬೈ ಇಂಡಿಯನ್ಸ್ ತಂಡದಲ್ಲಿ ಬದಲಾವಣೆ ಕಂಡು ಬರಲಿದೆ ಎನ್ನಲಾಗಿತ್ತು. ಅದರಲ್ಲೂ ಯುವ ಆಲ್ರೌಂಡರ್ ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ನೀಡಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ರೋಹಿತ್ ಶರ್ಮಾ ಪ್ಲೇಯಿಂಗ್ 11 ಘೋಷಿಸಿದಾಗ ಅದರಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ಹೆಸರಿರಲಿಲ್ಲ. ಹೀಗಾಗಿ ಜೂನಿಯರ್ ತೆಂಡೂಲ್ಕರ್ ಪಾದರ್ಪಣೆಗಾಗಿ ಸಚಿನ್ ಅಭಿಮಾನಿಗಳು ಮತ್ತಷ್ಟು ದಿನಗಳು ಕಾಯಬೇಕಾಗಿ ಬರಬಹುದು. ಅದರಂತೆ ಐಪಿಎಲ್ನ 26ನೇ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್
ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?