IPL 2022 Auction: ನಾಳೆಯೇ ಕೊನೆಯ ದಿನ…ಐಪಿಎಲ್ ಆಸಕ್ತ ಆಟಗಾರರಿಗೆ ಡೆಡ್​ ಲೈನ್ ನೀಡಿದ ಬಿಸಿಸಿಐ

IPL 2022 Mega Auction: ಈ ತಿಂಗಳ ಒಳಗೆ ಐಪಿಎಲ್​ಗೆ ಹೆಸರು ನೋಂದಣಿ ಮಾಡಿಕೊಂಡಿರುವ ಆಟಗಾರರ ಸಂಪೂರ್ಣ ಪಟ್ಟಿ ಹೊರಬೀಳಲಿದ್ದು, ಈ ಆಟಗಾರರ ಖರೀದಿಗಾಗಿ ಬೆಂಗಳೂರಿನಲ್ಲಿ ಫೆಬ್ರವರಿ 12 ಹಾಗೂ 13 ರಂದು ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ.

IPL 2022 Auction: ನಾಳೆಯೇ ಕೊನೆಯ ದಿನ...ಐಪಿಎಲ್ ಆಸಕ್ತ ಆಟಗಾರರಿಗೆ ಡೆಡ್​ ಲೈನ್ ನೀಡಿದ ಬಿಸಿಸಿಐ
IPL 2022 Auction
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 16, 2022 | 4:54 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಗಾಗಿ (IPL 2022 Auction) ಹೆಸರು ನೋಂದಣಿ ಮಾಡಿಕೊಳ್ಳಲು ಬಿಸಿಸಿಐ ಡೆಡ್​ ಲೈನ್ ನೀಡಿದೆ. ಅದರಂತೆ ಜನವರಿ 17 ರ ಒಳಗೆ ಅಂದರೆ ನಾಳೆಯೊಳಗೆ ಎಲ್ಲಾ ಆಟಗಾರರು ತಮ್ಮ ಹೆಸರನ್ನು ನೀಡಬೇಕಾಗುತ್ತದೆ. ಈಗಾಗಲೇ ನಿಗದಿಪಡಿಸಲಾಗಿರುವ ಮೆಗಾ ಹರಾಜು ದಿನಾಂಕದಂದೇ ಬಿಡ್ಡಿಂಗ್ ನಡೆಯಲಿರುವುದನ್ನು ಬಿಸಿಸಿಐ ಖಚಿತಪಡಿಸಿದ್ದು, ಅದರಂತೆ ಫೆಬ್ರವರಿ 12 ಹಾಗೂ 13 ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ಜನವರಿ 17 ರೊಳಗೆ ಹೆಸರು ರಿಜಿಸ್ಟರ್ ಮಾಡಿಕೊಳ್ಳುವಂತೆ ಎಲ್ಲಾ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಸೂಚಿಸಿದೆ.

ಅದರಂತೆ ಈಗಾಗಲೇ ವಿದೇಶಿ ಕ್ರಿಕೆಟ್ ಮಂಡಳಿಗಳಿಗೆ ಬಿಸಿಸಿಐ ಪತ್ರ ಕಳುಹಿಸಿದ್ದು, ಹಾಗೆಯೇ ರಾಜ್ಯ ಕ್ರಿಕೆಟ್ ಸಂಘಗಳಿಗೆ ನಾಳೆಯೊಳಗೆ ಹೆಸರು ನೋಂದಣಿ ಪ್ರಕ್ರಿಯೆಯನ್ನು ಮುಗಿಸಿ, ಆಸಕ್ತ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ಇದೀಗ ಜನವರಿ 17 ರಂದು ಹೆಸರು ನೋಂದಣಿ ಮುಗಿಯಲಿದ್ದು, ಹೀಗಾಗಿ ಇನ್ನೊಂದು ವಾರದೊಳಗೆ ಐಪಿಎಲ್​ಗೆ ಹೆಸರು ನೀಡಿರುವ ಆಟಗಾರರ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ.

ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಅಧಿಕಾರಿಯೊಬ್ಬರು, ಆಟಗಾರರ ಪಟ್ಟಿಯನ್ನು ಕಳುಹಿಸಲು ನಾವು ಒಂದು ತಿಂಗಳ ಹಿಂದೆಯೇ ಎಲ್ಲಾ ಮಂಡಳಿಗಳನ್ನು ಸಂಪರ್ಕಿಸಿದ್ದೇವೆ. ಇದಕ್ಕಾಗಿ ಈಗ ಜನವರಿ 17 ರ ಗಡುವು ನೀಡಲಾಗಿದೆ. ಅದರಂತೆ ನಾಳೆಯೊಳಗೆ ಆಟಗಾರರ ಪಟ್ಟಿಯನ್ನು ಕಳುಹಿಸುತ್ತಾರೆ ಎಂದು ನಿರೀಕ್ಷಿಸುತ್ತೇವೆ. ಈ ಬಾರಿ, ನಾವು ಮೆಗಾ ಹರಾಜಿನಲ್ಲಿ 1000 ಆಟಗಾರರನ್ನು ನಿರೀಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಹೊಸ ಫ್ರಾಂಚೈಸಿಗಳಾದ ಅಹಮದಾಬಾದ್ ಮತ್ತು ಲಕ್ನೋ ತಂಡಗಳಿಗೆ ಸ್ಪೆಷಲ್ ಪಿಕ್​ ಆಯ್ಕೆಯ ಮೂಲಕ ಮೂವರು ಆಟಗಾರರನ್ನು ಆಯ್ಕೆ ಮಾಡಲು ಗಡುವು ನೀಡಲಾಗಿದ್ದು, ಅದರಂತೆ ಜನವರಿ 22 ರೊಳಗೆ ಹೊಸ ತಂಡಗಳು ಆಯ್ಕೆ ಮಾಡಲಾದ ಆಟಗಾರರ ಪಟ್ಟಿಯನ್ನು ಸಲ್ಲಿಸಲಿದೆ.

ಮತ್ತೊಂದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ತಮ್ಮ ಆಟಗಾರರಿಗೆ ಐಪಿಎಲ್ ನಿರ್ಬಂಧ ಹೇರಲಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಇದಾಗ್ಯೂ ಅಂತಹ ಯಾವುದೇ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ಇಸಿಬಿ ನಮಗೆ ಸೂಚನೆ ನೀಡಿಲ್ಲ. ಈ ಬಾರಿ ಕೂಡ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾದ ಹೆಚ್ಚಿನ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಈ ತಿಂಗಳ ಒಳಗೆ ಐಪಿಎಲ್​ಗೆ ಹೆಸರು ನೋಂದಣಿ ಮಾಡಿಕೊಂಡಿರುವ ಆಟಗಾರರ ಸಂಪೂರ್ಣ ಪಟ್ಟಿ ಹೊರಬೀಳಲಿದ್ದು, ಈ ಆಟಗಾರರ ಖರೀದಿಗಾಗಿ ಬೆಂಗಳೂರಿನಲ್ಲಿ ಫೆಬ್ರವರಿ 12 ಹಾಗೂ 13 ರಂದು ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(IPL 2022 Auction: BCCI sets Jan 17 deadline to register for IPL auction)

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ