ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್ ಮೆಗಾ ಹರಾಜಿಗಾಗಿ (IPL 2022 Auction) ಭರ್ಜರಿ ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳ ಅಧಿಕಾರಿಗಳು ಮೆಗಾ ಹರಾಜಿಗಾಗಿ ಕಾರ್ಯತಂತ್ರಗಳನ್ನು ಆರಂಭಿಸಿದೆ. ಅದರಂತೆ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ನ ಮೆಗಾ ಹರಾಜು ಬೆಂಗಳೂರಿನಲ್ಲಿ ನಡೆಯಲಿದೆ. ಫೆಬ್ರವರಿ 12 ಮತ್ತು 13 ರಂದು 2 ದಿನಗಳ ಕಾಲ ನಡೆಯಲಿರುವ ಈ ಹರಾಜಿನಲ್ಲಿ 590 ಆಟಗಾರರ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಈ ಬಾರಿ ಯಾರಿಗೆ ಅವಕಾಶ ಸಿಗಲಿದೆ? ಯಾರಿಗೆ ಅದೃಷ್ಟ ಕೈತಪ್ಪಲಿದೆ ಕಾದು ನೋಡಬೇಕಿದೆ.
ಈಗಾಗಲೇ ಹತ್ತು ಫ್ರಾಂಚೈಸಿಗಳು ಕೆಲವು ಆಟಗಾರರನ್ನು ಉಳಿಸಿಕೊಂಡಿವೆ. ಹೀಗೆ ರಿಟೈನ್ ಪ್ರಕ್ರಿಯೆ ಮುಗಿಸಿದ ಬಳಿಕ ಪಂಜಾಬ್ ಕಿಂಗ್ಸ್ ಅತೀ ಹೆಚ್ಚು ಮೊತ್ತವನ್ನು ಹೊಂದಿದೆ. ಅದರಂತೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು 72 ಕೋಟಿಗಳೊಂದಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ 68 ಕೋಟಿ ರೂ., ರಾಜಸ್ಥಾನ ರಾಯಲ್ಸ್ 62 ಕೋಟಿ ರೂ., ಲಕ್ನೋ ತಂಡ 59 ಕೋಟಿ ರೂ., ಅಹಮದಾಬಾದ್ 52 ಕೋಟಿ ರೂ. ಹೊಂದಿದೆ. ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ 48 ಕೋಟಿ ಹರಾಜು ಮೊತ್ತ ಹೊಂದಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಬಳಿ 47.50 ಕೋಟಿ ರೂ. ಇದೆ.
ನೇರ ಪ್ರಸಾರ ಯಾವುದರಲ್ಲಿ?
IPL 2022 ಮೆಗಾ ಹರಾಜಿನ ಮೊದಲ ದಿನ ಅಂದರೆ ಫೆಬ್ರವರಿ 12 ರಂದು 161 ಆಟಗಾರರು ಬಿಡ್ಡಿಂಗ್ ನಡೆಯಲಿದೆ ಎಂದು ವರದಿಯಾಗಿದೆ. ಈ ಮೆಗಾ ಹರಾಜು ಪ್ರಕ್ರಿಯೆಯ ನೇರ ಪ್ರಸಾರ ಬೆಳಗ್ಗೆ 11 ಗಂಟೆಯಿಂದ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು. ಮಧ್ಯಾಹ್ನ 12 ಗಂಟೆಯಿಂದ ಆಟಗಾರರ ಹರಾಜು ಪ್ರಕ್ರಿಯೆ ಆರಂಭವಾಗಲಿದೆ.
ಮಾರ್ಕ್ಯೂ ಪ್ಲೇಯರ್ ಲೀಸ್ಟ್:
ಮೆಗಾ ಹರಾಜಿನ ಮೊದಲ ಸುತ್ತಿನಲ್ಲಿ 10 ಮಾರ್ಕ್ಯೂ ಆಟಗಾರರ ಬಿಡ್ ನಡೆಯಲಿದೆ. 2 ಕೋಟಿ ಮೂಲ ಬೆಲೆ ಹೊಂದಿರುವ 10 ಸ್ಟಾರ್ ಆಟಗಾರರಿಗಾಗಿ 10 ತಂಡಗಳ ಬಿಡ್ಡಿಂಗ್ ನಡೆಸಲಿದೆ. ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ಯಾಟ್ ಕಮಿನ್ಸ್, ಕ್ವಿಂಟನ್ ಡಿ ಕಾಕ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಕಗಿಸೊ ರಬಾಡ, ಫಾಫ್ ಡು ಪ್ಲೆಸಿಸ್ ಮತ್ತು ಮೊಹಮ್ಮದ್ ಶಮಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: Yuzvendra Chahal: ವಿಕೆಟ್ಗಳ ಶತಕ ಪೂರೈಸಿದ ಚಹಾಲ್
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!