Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: RCB ತಂಡಕ್ಕೆ ಎಂಟ್ರಿ ಕೊಟ್ಟ ಸಿಡಿಲಬ್ಬರದ ಬ್ಯಾಟ್ಸ್​ಮನ್

IPL 2022 Auction: ಇದಕ್ಕೂ ಮುನ್ನ ಆರ್​ಸಿಬಿ ಮೊದಲ ದಿನದ ಹರಾಜಿನಲ್ಲಿ ಫಾಫ್​ ಡುಪ್ಲೆಸಿಸ್​ಗೆ 7 ಕೋಟಿ ನೀಡಿದರೆ, ಹರ್ಷಲ್ ಪಟೇಲ್​ ಅವರನ್ನು 10.75 ಕೋಟಿಗೆ ಖರೀದಿಸಿದೆ.

IPL 2022 Auction: RCB ತಂಡಕ್ಕೆ ಎಂಟ್ರಿ ಕೊಟ್ಟ ಸಿಡಿಲಬ್ಬರದ ಬ್ಯಾಟ್ಸ್​ಮನ್
Finn Allen
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 13, 2022 | 4:11 PM

ಐಪಿಎಲ್ ಮೆಗಾ ಹರಾಜಿನ ಎರಡನೇ ದಿನದ ಬಿಡ್ಡಿಂಗ್​ನಲ್ಲಿ ಆರ್​ಸಿಬಿ ಇಬ್ಬರು ಆಟಗಾರರನ್ನು ಖರೀದಿಸಿದೆ. ಮೊದಲ ದಿನದಲ್ಲಿ 8 ಆಟಗಾರರನ್ನು ಖರೀದಿಸಿದ್ದ ಆರ್​ಸಿಬಿ 2ನೇ ದಿನ ಹೆಚ್ಚಿನ ಬಿಡ್ಡಿಂಗ್ ನಡೆಸಿರಲಿಲ್ಲ. ಇದಾಗ್ಯೂ 2ನೇ ಹಂತದ ಸುತ್ತಿನಲ್ಲಿ ಆರ್​ಸಿಬಿ ಇಬ್ಬರು ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಅದರಂತೆ ಮೊದಲು 22 ವರ್ಷದ ಯುವ ಆಲ್​ರೌಂಡರ್ ಮಹಿಪಾಲ್ ಲೋಮ್ರರ್​ ಅವರನ್ನು 95 ಲಕ್ಷ ರೂ. ನೀಡಿ ಖರೀದಿಸಿದೆ. ಇದರ ಬೆನ್ನಲ್ಲೇ ನ್ಯೂಜಿಲೆಂಡ್​ನ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಫಿನ್ ಅಲೆನ್ ಅವರನ್ನೂ ಕೂಡ ಆರ್​ಸಿಬಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಅಲೆನ್ ಈ ಹಿಂದೆ ಆರ್​ಸಿಬಿ ತಂಡದಲ್ಲಿ ಬದಲಿ ಆಟಗಾರನಾಗಿ ಕಾಣಿಸಿಕೊಂಡಿದ್ದರು. ಇದೀಗ 80 ಲಕ್ಷ ರೂ.ಗೆ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ನ್ಯೂಜಿಲೆಂಡ್​ನ ಸೂಪರ್ ಸ್ಮ್ಯಾಶ್ ಲೀಗ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ಅಲೆನ್ ಇದೀಗ ಆರ್​ಸಿಬಿ ತಂಡದ ಪಾಲಾಗಿದ್ದಾರೆ. ಈ ಬಾರಿಯ ಸೂಪರ್ ಸ್ಮ್ಯಾಶ್ ಲೀಗ್​ನಲ್ಲಿ ಅಲೆನ್ 11 ಇನ್ನಿಂಗ್ಸ್‌ಗಳಲ್ಲಿ 200ರ ಸ್ಟ್ರೈಕ್ ರೇಟ್‌ನಲ್ಲಿ 280 ರನ್ ಬಾರಿಸಿದ್ದರು. ಇದೀಗ ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಕಾರಣ ಫಿನ್ ಅಲೆನ್ ಮತ್ತೊಮ್ಮೆ ಆರ್​ಸಿಬಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಆರ್​ಸಿಬಿ ಮೊದಲ ದಿನದ ಹರಾಜಿನಲ್ಲಿ ಫಾಫ್​ ಡುಪ್ಲೆಸಿಸ್​ಗೆ 7 ಕೋಟಿ ನೀಡಿದರೆ, ಹರ್ಷಲ್ ಪಟೇಲ್​ ಅವರನ್ನು 10.75 ಕೋಟಿಗೆ ಖರೀದಿಸಿದೆ. ಅಲ್ಲದೆ ವನಿಂದು ಹಸರಂಗ ಅವರಿಗೆ 10.75 ಕೋಟಿ ನೀಡಿ ಅಚ್ಚರಿ ಮೂಡಿಸಿತ್ತು. ಇನ್ನು ದಿನೇಶ್ ಕಾರ್ತಿಕ್ ( 5.50 ಕೋಟಿ), ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನೂಜ್ ರಾವತ್​ (3.40 ಕೋಟಿ) ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು​ 7.75 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

ಇನ್ನು ಶಹಬಾಜ್ ಅಹಮದ್ ಅವರನ್ನು 2. 40 ಕೋಟಿ ರೂ.ಗೆ ಹಾಗೂ ಆಕಾಶ್ ದೀಪ್ ಅವರನ್ನು 20 ಲಕ್ಷ ರೂ.ಗೆ ಆರ್​ಸಿಬಿ ಖರೀದಿಸಿದೆ. ಅದರಂತೆ ಮೊದಲ ದಿನವೇ ಆರ್​ಸಿಬಿ ತಂಡವು ಕೇವಲ 8 ಆಟಗಾರರಿಗೆ 47 ಕೋಟಿ 75 ಲಕ್ಷ ರೂ. ಖರ್ಚು ಮಾಡಿತ್ತು. ಇದೀಗ 2ನೇ ದಿನ 95 ಲಕ್ಷ ರೂ. ನೀಡಿ ಮಹಿಪಾಲ್ ಲೋಮ್ರರರ್​ ಹಾಗೂ 80 ಲಕ್ಷ ರೂ. ನೀಡಿ ಫಿನ್ ಅಲೆನ್ ಅವರನ್ನು ಖರೀದಿಸಿದೆ. ಅದರಂತೆ ಇದೀಗ ರಿಟೈನ್ ಆಟಗಾರರು ಸೇರಿದಂತೆ ಆರ್​ಸಿಬಿ ತಂಡದಲ್ಲಿ 13 ಆಟಗಾರರಿದ್ದಾರೆ.

ಇದನ್ನೂ ಓದಿ: IPL 2022 RCB Players: Rcb ತಂಡಕ್ಕೆ ಎಂಟ್ರಿ ಕೊಟ್ಟ ಹೊಸ ಆಟಗಾರರು ಇವರೇ..!

ಇದನ್ನೂ ಓದಿ: IPL 2022 Auction: ಹರಾಜಾದ ಮತ್ತು ಹರಾಜಾಗದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿದೆ

(IPL 2022 Auction: Finn Allen Sold To RCB)

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ