IPL 2022 Auction: ಸ್ಪೋಟಕ ಯುವ ಬ್ಯಾಟ್ಸ್​ಮನ್​ನ​ ಖರೀದಿಸಿದ RCB

IPL 2022 Auction: ಇದಕ್ಕೂ ಮುನ್ನ ಆರ್​ಸಿಬಿ ಮೊದಲ ದಿನದ ಹರಾಜಿನಲ್ಲಿ ಫಾಫ್​ ಡುಪ್ಲೆಸಿಸ್​ಗೆ 7 ಕೋಟಿ ನೀಡಿದರೆ, ಹರ್ಷಲ್ ಪಟೇಲ್​ ಅವರನ್ನು 10.75 ಕೋಟಿಗೆ ಖರೀದಿಸಿದೆ.

IPL 2022 Auction: ಸ್ಪೋಟಕ ಯುವ ಬ್ಯಾಟ್ಸ್​ಮನ್​ನ​ ಖರೀದಿಸಿದ RCB
IPL 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 13, 2022 | 3:34 PM

ಐಪಿಎಲ್ ಮೆಗಾ ಹರಾಜಿನ ಎರಡನೇ ದಿನದ ಬಿಡ್ಡಿಂಗ್​ನಲ್ಲಿ ಆರ್​ಸಿಬಿ ಮೊದಲ ಆಟಗಾರನನ್ನು ಖರೀದಿಸಿದೆ. ಮೊದಲ ದಿನದಲ್ಲಿ 8 ಆಟಗಾರರನ್ನು ಖರೀದಿಸಿದ್ದ ಆರ್​ಸಿಬಿ 2ನೇ ದಿನ ಹೆಚ್ಚಿನ ಬಿಡ್ಡಿಂಗ್ ನಡೆಸಿರಲಿಲ್ಲ. ಇದಾಗ್ಯೂ 2ನೇ ಹಂತದ ಸುತ್ತಿನಲ್ಲಿ ಆರ್​ಸಿಬಿ 22 ವರ್ಷದ ಯುವ ಆಲ್​ರೌಂಡರ್ ಮಹಿಪಾಲ್ ಲೋಮ್ರರ್​ ಅವರನ್ನು ಖರೀದಿಸಿದೆ. ಮಹಿಪಾಲ್ ಖರೀದಿಗಾಗಿ ಆರಂಭದಿಂದಲೂ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ 95 ಲಕ್ಷ ರೂ.ಗೆ ಆರ್​ಸಿಬಿ ಮಹಿಪಾಲ್ ಲೋಮ್ರರ್​ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಆರ್​ಸಿಬಿ ತಂಡದ ಆಟಗಾರರ ಸಂಖ್ಯೆ 12ಕ್ಕೇರಿದೆ.

ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಎಡಗೈ ದಾಂಡಿಗ ಮಹಿಪಾಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 10 ಇನಿಂಗ್ಸ್​ಗಳಲ್ಲಿ ಬ್ಯಾಟ್ಸ್​ ಬೀಸಿದ್ದ ಯುವ ಆಟಗಾರ 181 ರನ್​ ಬಾರಿಸಿದ್ದರು. ಅದರಲ್ಲೂ ಒತ್ತಡ ಸಂದರ್ಭದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಇದೀಗ ಮಧ್ಯಮ ಕ್ರಮಾಂಕದ ಆಟಗಾರನಾಗಿ ಆರ್​ಸಿಬಿ ಮಹಿಪಾಲ್ ಲೋಮ್ರರ್​ ಅವರನ್ನು ಖರೀದಿಸಿದೆ.

ಇದಕ್ಕೂ ಮುನ್ನ ಆರ್​ಸಿಬಿ ಮೊದಲ ದಿನದ ಹರಾಜಿನಲ್ಲಿ ಫಾಫ್​ ಡುಪ್ಲೆಸಿಸ್​ಗೆ 7 ಕೋಟಿ ನೀಡಿದರೆ, ಹರ್ಷಲ್ ಪಟೇಲ್​ ಅವರನ್ನು 10.75 ಕೋಟಿಗೆ ಖರೀದಿಸಿದೆ. ಅಲ್ಲದೆ ವನಿಂದು ಹಸರಂಗ ಅವರಿಗೆ 10.75 ಕೋಟಿ ನೀಡಿ ಅಚ್ಚರಿ ಮೂಡಿಸಿತ್ತು. ಇನ್ನು ದಿನೇಶ್ ಕಾರ್ತಿಕ್ ( 5.50 ಕೋಟಿ), ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನೂಜ್ ರಾವತ್​ (3.40 ಕೋಟಿ) ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು​ 7.75 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

ಇನ್ನು ಶಹಬಾಜ್ ಅಹಮದ್ ಅವರನ್ನು 2. 40 ಕೋಟಿ ರೂ.ಗೆ ಹಾಗೂ ಆಕಾಶ್ ದೀಪ್ ಅವರನ್ನು 20 ಲಕ್ಷ ರೂ.ಗೆ ಆರ್​ಸಿಬಿ ಖರೀದಿಸಿದೆ. ಅಲ್ಲಿಗೆ ಮೊದಲ ದಿನವೇ ಆರ್​ಸಿಬಿ ತಂಡವು ಕೇವಲ 8 ಆಟಗಾರರಿಗೆ 47 ಕೋಟಿ 75 ಲಕ್ಷ ರೂ. ಖರ್ಚು ಮಾಡಿದೆ. ಇದೀಗ 2ನೇ ದಿನ 95 ಲಕ್ಷ ರೂ. ನೀಡಿ ಆರ್​ಸಿಬಿ ಮಹಿಪಾಲ್ ಲೋಮ್ರರರ್​ ಅವರನ್ನು ಖರೀದಿಸಿದೆ. ಅದರಂತೆ ಇದೀಗ ರಿಟೈನ್ ಆಟಗಾರರು ಸೇರಿದಂತೆ ಆರ್​ಸಿಬಿ ತಂಡದಲ್ಲಿ 12 ಆಟಗಾರರಿದ್ದಾರೆ.

ಇದನ್ನೂ ಓದಿ: IPL 2022 RCB Players: Rcb ತಂಡಕ್ಕೆ ಎಂಟ್ರಿ ಕೊಟ್ಟ ಹೊಸ ಆಟಗಾರರು ಇವರೇ..!

ಇದನ್ನೂ ಓದಿ: IPL 2022 Auction: ಹರಾಜಾದ ಮತ್ತು ಹರಾಜಾಗದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿದೆ

(IPL 2022 Auction: Mahipal Lomror Sold To RCB)

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ