IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB

IPL 2022 Auction: ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ.

IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB
ಆರ್​ಸಿಬಿ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 12, 2022 | 9:00 PM

ಐಪಿಎಲ್ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಲ್​ರೌಂಡರ್ ಶಹಬಾಜ್ ಅಹಮದ್ ಅವರನ್ನು 2.4 ಕೋಟಿಗೆ ಆರ್​ಸಿಬಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹಾಗೆಯೇ ದೆಹಲಿಯ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನುಜ್ ರಾವತ್ ಅವರನ್ನು ಕೂಡ ಆರ್​ಸಿಬಿ 3.40 ಕೋಟಿ ನೀಡಿ ಖರೀದಿಸಿದೆ.

ಇದಕ್ಕೂ ಮುನ್ನ ಆರ್​ಸಿಬಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು ಖರೀದಿಸಿತ್ತು. ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಆಡಿದ್ದ ಹ್ಯಾಝಲ್​ವುಡ್​ ಅವರನ್ನು ಈ ಬಾರಿ ಆರ್​ಸಿಬಿ 7.75 ಕೋಟಿ ನೀಡಿ ಖರೀದಿಸಿದೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಅವರನ್ನು 5.50 ಕೋಟಿ ನೀಡಿ ಆರ್​ಸಿಬಿ ತನ್ನದಾಗಿಸಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡಕ್ಕೆ ವಿಕೆಟ್ ಕೀಪರ್​ ಆಯ್ಕೆಯಾಗಿದೆ. ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ಶ್ರೀಲಂಕಾ ಆಲ್​ರೌಂಡರ್ ವನಿಂದು ಹಸರಂಗ ಅವರನ್ನು ಬರೋಬ್ಬರಿ 10.75 ಕೋಟಿ ನೀಡಿ ಖರೀದಿಸಿದೆ.

ಇನ್ನು ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ 8 ಆಟಗಾರರು ಇದ್ದಾರೆ. ಈ ಹಿಂದೆ ಆರ್​ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ. ಇದೀಗ ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಶಹಬಾಜ್ ಅಹಮದ್, ಜೋಶ್ ಹ್ಯಾಝಲ್​ವುಡ್​ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?