ಐಪಿಎಲ್ ಮೆಗಾ ಹರಾಜಿನಲ್ಲಿ ಆರ್ಸಿಬಿ ತಂಡವು ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಹಿಂದೆ ಆರ್ಸಿಬಿ ಪರ ಆಡಿದ್ದ ಆಲ್ರೌಂಡರ್ ಶಹಬಾಜ್ ಅಹಮದ್ ಅವರನ್ನು 2.4 ಕೋಟಿಗೆ ಆರ್ಸಿಬಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹಾಗೆಯೇ ದೆಹಲಿಯ ಯುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಅನುಜ್ ರಾವತ್ ಅವರನ್ನು ಕೂಡ ಆರ್ಸಿಬಿ 3.40 ಕೋಟಿ ನೀಡಿ ಖರೀದಿಸಿದೆ.
ಇದಕ್ಕೂ ಮುನ್ನ ಆರ್ಸಿಬಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಅವರನ್ನು ಖರೀದಿಸಿತ್ತು. ಕಳೆದ ಸೀಸನ್ನಲ್ಲಿ ಸಿಎಸ್ಕೆ ಪರ ಆಡಿದ್ದ ಹ್ಯಾಝಲ್ವುಡ್ ಅವರನ್ನು ಈ ಬಾರಿ ಆರ್ಸಿಬಿ 7.75 ಕೋಟಿ ನೀಡಿ ಖರೀದಿಸಿದೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಅವರನ್ನು 5.50 ಕೋಟಿ ನೀಡಿ ಆರ್ಸಿಬಿ ತನ್ನದಾಗಿಸಿಕೊಂಡಿತು. ಇದರೊಂದಿಗೆ ಆರ್ಸಿಬಿ ತಂಡಕ್ಕೆ ವಿಕೆಟ್ ಕೀಪರ್ ಆಯ್ಕೆಯಾಗಿದೆ. ಹಾಗೆಯೇ ಆಲ್ರೌಂಡರ್ಗಳ ಪಟ್ಟಿಯಲ್ಲಿ ಆರ್ಸಿಬಿ ಶ್ರೀಲಂಕಾ ಆಲ್ರೌಂಡರ್ ವನಿಂದು ಹಸರಂಗ ಅವರನ್ನು ಬರೋಬ್ಬರಿ 10.75 ಕೋಟಿ ನೀಡಿ ಖರೀದಿಸಿದೆ.
ಇನ್ನು ಓಪನರ್ಗಳ ಪಟ್ಟಿಯಲ್ಲಿ ಆರ್ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ. ಅದರಂತೆ ಇದೀಗ ಆರ್ಸಿಬಿ ತಂಡದಲ್ಲಿ 8 ಆಟಗಾರರು ಇದ್ದಾರೆ. ಈ ಹಿಂದೆ ಆರ್ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ. ಇದೀಗ ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಶಹಬಾಜ್ ಅಹಮದ್, ಜೋಶ್ ಹ್ಯಾಝಲ್ವುಡ್ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಆರ್ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: IPL 2022: ಐಪಿಎಲ್ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ