IPL 2022 Auction: ಕಿಂಗ್ಸ್ ನಡುವೆ ಭರ್ಜರಿ ಪೈಪೋಟಿ: 9 ಕೋಟಿ ಪಡೆದ ಶಾರೂಖ್ ಖಾನ್
IPL 2022 Auction: ಈ ಬಾರಿಯ ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶಾರೂಖ್ ಫ್ರಾಂಚೈಸಿಗಳ ಗಮನ ಸೆಳೆದಿದ್ದರು. ಅದರಲ್ಲೂ ಕರ್ನಾಟಕ ವಿರುದ್ದದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ರೋಚಕ ಫೈನಲ್ನಲ್ಲಿ ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ತಮಿಳುನಾಡು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜಿನಲ್ಲಿ ತಮಿಳುನಾಡಿನ ಸ್ಪೋಟಕ ಬ್ಯಾಟ್ಸ್ಮನ್ ಶಾರೂಖ್ ಖಾನ್ ಭರ್ಜರಿ ಮೊತ್ತ ಪಡೆದಿದ್ದಾರೆ. 40 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಶಾರೂಖ್ ಖರೀದಿಗೆ ಹಲವು ಫ್ರಾಂಚೈಸಿಗಳು ಪೈಪೋಟಿ ನಡೆಸಿತ್ತು. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಭರ್ಜರಿ ಪೈಪೋಟಿ ಏರ್ಪಟಿತ್ತು. ಉಭಯ ಫ್ರಾಂಚೈಸಿಗಳ ಪೈಪೋಟಿಯಿಂದಾಗಿ ಶಾರೂಖ್ ಖಾನ್ ಕಳೆದ ಸೀಸನ್ನಲ್ಲಿ ಪಡೆದ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ತಮ್ಮದಾಗಿಸಿಕೊಂಡರು. ಅದರಂತೆ ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವು 9 ಕೋಟಿ ರೂ. ನೀಡಿ ಶಾರುಖ್ ಖಾನ್ ಅವರನ್ನು ಖರೀದಿಸಿತು. ಕಳೆದ ಸೀಸನ್ನಲ್ಲಿ ಪಂಜಾಬ್ ತಂಡವು ಶಾರೂಖ್ ಅವರಿಗೆ ನೀಡಿದ ಮೊತ್ತ 5.25 ಕೋಟಿ.
ಈ ಬಾರಿಯ ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶಾರೂಖ್ ಫ್ರಾಂಚೈಸಿಗಳ ಗಮನ ಸೆಳೆದಿದ್ದರು. ಅದರಲ್ಲೂ ಕರ್ನಾಟಕ ವಿರುದ್ದದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ರೋಚಕ ಫೈನಲ್ನಲ್ಲಿ ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಅಷ್ಟೇ ಅಲ್ಲದೆ ವಿಜಯ್ ಹಜಾರೆ ಟೂರ್ನಿಯ ಸೆಮಿಫೈನಲ್ನಲ್ಲೂ ಸ್ಪೋಟಕ ಇನಿಂಗ್ಸ್ ಆಡುವ ಮೂಲಕ ತಂಡವನ್ನು ಫೈನಲ್ಗೆ ತಲುಪಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಶಾರೂಖ್ ಖಾನ್ 9 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಕಗಿಸೊ ರಬಾಡ (9.25 ಕೋಟಿ), ಜಾನಿ ಬೈರ್ಸ್ಟೋವ್ (6.75 ಕೋಟಿ), ರಾಹುಲ್ ಚಹರ್ (5.25 ಕೋಟಿ) ಅವರನ್ನು ಖರೀದಿಸಿದೆ. ಅಲ್ಲದೆ ತಂಡದಲ್ಲಿ ಮಯಾಂಕ್ ಅಗರ್ವಾಲ್ ಹಾಗೂ ಅರ್ಷದೀಪ್ ಸಿಂಗ್ ರಿಟೈನ್ ಆಗಿದ್ದಾರೆ.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: IPL 2022: ಐಪಿಎಲ್ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
(IPL 2022 Auction: Shahrukh is SOLD to Punjab Kings)