AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೊರೋನಾತಂಕ: DC vs RCB ಪಂದ್ಯ ನಡೆಯುತ್ತಾ? ನಡೆಯಲ್ವಾ?

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್.

IPL 2022: ಕೊರೋನಾತಂಕ: DC vs RCB ಪಂದ್ಯ ನಡೆಯುತ್ತಾ? ನಡೆಯಲ್ವಾ?
DC vs RCB
TV9 Web
| Updated By: ಝಾಹಿರ್ ಯೂಸುಫ್|

Updated on: Apr 16, 2022 | 2:58 PM

Share

IPL 2022: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 15 ಗೆ ಕೊರೋನಾಂತಕ ಎದುರಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್​ ಅವರಲ್ಲಿ ಕೋವಿಡ್ ಸೋಂಕು ಕಂಡು ಬಂದಿದೆ. ಕೋವಿಡ್ ಟೆಸ್ಟ್ ವೇಳೆ ಕೊರೋನಾ ಪಾಸಿಟಿವ್ ಆಗಿರುವುದು ಕನ್​ಫರ್ಮ್ ಆಗಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರನ್ನು ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸಲಾಗಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ (DC vs RCB) ಇಂದು ಪಂದ್ಯವಾಡಬೇಕಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಸಿಬ್ಬಂದಿಯಲ್ಲಿ ಸೋಂಕು ಕಂಡು ಬಂದಿರುವುದು ಇದೀಗ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಎಲ್ಲಾ ಆಟಗಾರರಿಗೂ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ. ಇದೀಗ ಆಟಗಾರರ ಕೋವಿಡ್ ಟೆಸ್ಟ್ ರಿಪೋರ್ಟ್​ ನೆಗೆಟಿವ್ ಎಂದು ಬಂದಿದ್ದು, ಹೀಗಾಗಿ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಯಾವುದೇ ಆತಂಕವಿಲ್ಲದೆ ನಡೆಯಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಸೀಸನ್​ನಲ್ಲಿ ಕೆಕೆಆರ್ ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟೂರ್ನಿಯನ್ನು ಮುಂದೂಡಲಾಗಿತ್ತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಫಿಸಿಯೋ ಫರ್ಹಾರ್ಟ್ ಅವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಮತ್ತೊಮ್ಮೆ ಆತಂಕ ಎದುರಾಗಿತ್ತು. ಇದೀಗ ಆಟಗಾರರಲ್ಲಿ ಸೋಂಕು ಕಾಣಿಸಿಕೊಳ್ಳದ ಕಾರಣ ಟೂರ್ನಿ ಮುಂದುವರೆಯಲಿದೆ. ಆದರೆ ಸಂಪೂರ್ಣ ಬಯೋ ಬಬಲ್​ ಸುರಕ್ಷತೆಯೊಂದಿಗೆ ಟೂರ್ನಿ ನಡೆಸುತ್ತಿದ್ದರೂ ಮತ್ತೆ ತಂಡದ ಸಿಬ್ಬಂದಿಯಲ್ಲಿ ಸೋಂಕು ಕಂಡು ಬಂದಿರುವುದು ಹೊಸ ಚಿಂತೆಗೆ ಕಾರಣವಾಗಿದೆ.

COVID-19 ಭೀತಿ ಹಿನ್ನೆಲೆಯಲ್ಲಿ ಈ ಬಾರಿ BCCI ಮಹಾರಾಷ್ಟ್ರದಾದ್ಯಂತ ನಾಲ್ಕು ಕ್ರೀಡಾಂಗಣಗಳಲ್ಲಿ IPL 2022 ನಡೆಸುತ್ತಿದೆ. ಆದಾಗ್ಯೂ, ಪ್ಲೇ-ಆಫ್‌ ಪಂದ್ಯಗಳು ಅಹಮದಾಬಾದ್​ನಲ್ಲಿ ನಡೆಯುವ ನಿರೀಕ್ಷೆಯಿದೆ. ಮತ್ತೊಂದೆಡೆ ನಾಲ್ಕು ಸ್ಟೇಡಿಯಂಗಳಲ್ಲಿ ಪಂದ್ಯ ನಡೆಯುತ್ತಿದ್ದರೂ ಶೇ.50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಲಿ ಸ್ಟೇಡಿಯಂನಲ್ಲಿ ಮುಂದಿನ ಪಂದ್ಯಗಳು ನಡೆಯುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಐಪಿಎಲ್​ ಆರಂಭವಾಗಿ 26 ಪಂದ್ಯಗಳು ಮುಗಿದರೂ ಕೊರೋನಾಂತಕ ಮಾತ್ರ ದೂರವಾಗಿಲ್ಲ ಎಂಬುದು ಸ್ಪಷ್ಟ.

ಡೆಲ್ಲಿ ಕ್ಯಾಪಿಟಲ್ಸ್ (DC)​: ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅಶ್ವಿನ್ ಹೆಬ್ಬಾರ್, ಅಶ್ವಿನ್ ಹೆಬ್ಬಾರ್ , ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಲುಂಗಿ ಎನ್‌ಗಿಡಿ, ಟಿಮ್ ಸೀಫರ್ಟ್, ಪ್ರವೀಣ್ ದುಬೆ, ರೋವ್‌ಮನ್ ಪೊವೆಲ್, ಲಲಿತ್ ಯಾದವ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?