IPL 2022: ರಂಗೇರಲಿದೆ ಈ ಬಾರಿಯ ಐಪಿಎಲ್​ ಫೈನಲ್

IPL 2022: 2019 ರಲ್ಲಿ ಮೊದಲ ಬಾರಿಗೆ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿಲ್ಲ. ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಈ ಹಣವನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡಲು ಮಂಡಳಿ ನಿರ್ಧರಿಸಿತ್ತು.

IPL 2022: ರಂಗೇರಲಿದೆ ಈ ಬಾರಿಯ ಐಪಿಎಲ್​ ಫೈನಲ್
IPL 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2022 | 5:00 PM

IPL 2022: ಐಪಿಎಲ್ ಸೀಸನ್ 15 ಇಲ್ಲಿಯವರೆಗೆ ಯಾವುದೇ ಆತಂಕವಿಲ್ಲದೆ ಜರುಗಿದೆ. ಕೊರೋನಾ ಕಾರಣದಿಂದ ಈ ಬಾರಿ ನಾಲ್ಕು ಸ್ಟೇಡಿಯಂಗಳಲ್ಲಿ ಮಾತ್ರ ಟೂರ್ನಿ ನಡೆಯುತ್ತಿದೆ. ಮತ್ತೊಂದೆಡೆ ಶೇ.50 ರಷ್ಟು ಪ್ರೇಕ್ಷಕರಿಗೂ ಅವಕಾಶ ನೀಡಲಾಗಿದೆ. ಈ ಬಾರಿ ಒಟ್ಟು 10 ತಂಡಗಳಿರುವ ಕಾರಣ ಪಂದ್ಯಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಅದರಂತೆ ಟೂರ್ನಿಯಲ್ಲಿ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ. ಇನ್ನು ಫೈನಲ್​ ಪಂದ್ಯವು ಮೇ 29 ರಂದು ನಡೆಯಲಿದ್ದು, ಈ ವೇಳೆ ವಿಶೇಷ ಕಾರ್ಯಕ್ರಮ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅದರಂತೆ ಈ ಬಾರಿಯ ಐಪಿಎಲ್​ನ ಫೈನಲ್ ಡೇ ಸಮಾರೋಪ ಸಮಾರಂಭಗಳು ನಡೆಯಲಿದೆ. 2018 ರಿಂದ ಐಪಿಎಲ್​ನಲ್ಲಿ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ನಡೆಯುತ್ತಿಲ್ಲ. ಆದರೆ ಈ ವರ್ಷ ಸಮಾರೋಪ ಸಮಾರಂಭವನ್ನು ಆಯೋಜಿಸಲು ಮಂಡಳಿ ನಿರ್ಧರಿಸಿದೆ. ಇದಕ್ಕಾಗಿ ಮಂಡಳಿ ಟೆಂಡರ್‌ ಕೂಡ ಆಹ್ವಾನಿಸಿದೆ.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಪ್ರಸಕ್ತ ಸೀಸನ್​ನಲ್ಲಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿಲ್ಲ. ಇದಾಗ್ಯೂ ಅದ್ದೂರಿಯಾಗಿ ಸಮಾರೋಪ ಸಮಾರಂಭ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದರಿಂದ ಬಿಸಿಸಿಐಗೆ ಮತ್ತಷ್ಟು ಆದಾಯ ಬರಲಿದೆ. ಇದಕ್ಕಾಗಿ ಈಗಾಗಲೇ ಪ್ರಾಯೋಜಕತ್ವ ಟೆಂಡರ್ ಅನ್ನು ಕೂಡ ಆಹ್ವಾನಿಸಲಾಗಿದೆ.

ಸಮಾರೋಪ ಸಮಾರಂಭಕ್ಕೆ ಸಂಬಂಧಿಸಿದ ಟೆಂಡರ್​ಗಳನ್ನು ಏಪ್ರಿಲ್ 25 ರವರೆಗೆ ಖರೀದಿಸಬಹುದು ಎಂದು ಮಂಡಳಿಯ ಕಾರ್ಯದರ್ಶಿ ಜಯ್ ಷಾ ಬಿಡುಗಡೆ ಮಾಡಿದ್ದಾರೆ. ಟೆಂಡರ್ ಅರ್ಜಿ ಶುಲ್ಕವಾಗಿ ಒಂದು ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. ಟೆಂಡರ್‌ನಲ್ಲಿ ಭಾಗವಹಿಸುವ ಕಂಪೆನಿಗಳು ಬಿಸಿಸಿಐಗೆ ಇ-ಮೇಲ್ ಮೂಲಕ ಈ ಬಗ್ಗೆ ತಿಳಿಸಬಹುದು. ಇದಾಗ್ಯೂ ಐಪಿಎಲ್‌ನ ಫೈನಲ್​ ಪಂದ್ಯದ ಸ್ಥಳವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಆದರೆ ಈ ಬಾರಿಯ ಐಪಿಎಲ್​ನ ಕೊನೆಯ ಪಂದ್ಯವು ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಯಿದೆ.

ಪುಲ್ವಾಮಾ ದಾಳಿಯಿಂದಾಗಿ ಕಾರ್ಯಕ್ರಮ ರದ್ದು: 2019 ರಲ್ಲಿ ಮೊದಲ ಬಾರಿಗೆ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿಲ್ಲ. ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಈ ಹಣವನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡಲು ಮಂಡಳಿ ನಿರ್ಧರಿಸಿತ್ತು. 2020 ಮತ್ತು 2021 ರಲ್ಲಿ ಕೊರೋನಾ ಕಾರಣ, ಪಂದ್ಯಗಳು ಅಭಿಮಾನಿಗಳಿಲ್ಲದೆ ನಡೆದವು. ಇದೀಗ ಮತ್ತೆ ಫೈನಲ್ ದಿನದಂದು ಐಪಿಎಲ್​ನಲ್ಲಿ ರಂಗು ರಂಗಿನ ಕಾರ್ಯಕ್ರಮ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?