ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 (IPL 2022) ಸಿದ್ದತೆಗಳು ಆರಂಭವಾಗಿದೆ. ಮುಂದಿನ ಸೀಸನ್ಗಾಗಿ ನಡೆಯಲಿರುವ ಮೆಗಾ ಹರಾಜಿಗಾಗಿ ಬಿಸಿಸಿಐ (BCCI) ಇದೀಗ ರೂಪುರೇಷೆಗಳನ್ನು ಸಿದ್ದಪಡಿಸುತ್ತಿದೆ. ಅದರಂತೆ ಆಟಗಾರರ ರಿಟೈನ್ ನಿಯಮ, ಒಟ್ಟು ಪರ್ಸ್ ಮೊತ್ತ ಹಾಗೂ ಹರಾಜು ನೀತಿಯನ್ನು ರೂಪಿಸಿದೆ. ಇದಕ್ಕೆ ಸಂಬಂಧಿಸಿದ ಮಾಹಿತಿಯೊಂದನ್ನು ಬಿಸಿಸಿಐ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಈ ಮಾಹಿತಿಯಂತೆ ಮುಂದಿನ ಸೀಸನ್ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.
ಇಲ್ಲಿ ಒಟ್ಟು ಹರಾಜು ಮೊತ್ತವನ್ನು 90 ಕೋಟಿಗೆ ಏರಿಸಲಾಗಿದೆ. ಕಳೆದ ಸೀಸನ್ನಲ್ಲಿ ಈ ಮೊತ್ತವು 85 ಕೋಟಿ ರೂ. ಆಗಿತ್ತು. ಈ ಬಾರಿ 5 ಕೋಟಿ ರೂ. ಹೆಚ್ಚಿಸಲಾಗಿದೆ. ಪ್ರಸ್ತುತ ಇರುವ ತಂಡಗಳು ನವೆಂಬರ್ 1 ರಿಂದ 30ರೊಳಗೆ ಆಟಗಾರರ ರಿಟೈನ್ ಪಟ್ಟಿಯನ್ನು ಸಲ್ಲಿಸಬೇಕಿದೆ. ಇದಾದ ಬಳಿಕ ಉಳಿದ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಆಟಗಾರರಿಂದ ತಲಾ ಮೂವರನ್ನು ಆಯ್ಕೆ ಮಾಡುವ ಅವಕಾಶ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗೆ ಇರಲಿದೆ.
ಇನ್ನು ರಿಟೈನ್ ನಿಯಮವನ್ನೂ ಈ ಬಾರಿ ಬದಲಿಸಲಾಗಿದ್ದು, ಪ್ರಸ್ತುತ ಇರುವ 8 ತಂಡಗಳು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು. ಅದರಂತೆ ಮೂವರು ಭಾರತೀಯ ಆಟಗಾರರು + ಒಬ್ಬ ವಿದೇಶಿ ಆಟಗಾರ ಅಥವಾ ಇಬ್ಬರು ಭಾರತೀಯ ಆಟಗಾರರು + ಇಬ್ಬರು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆ ಇರಲಿದೆ. ಇನ್ನು ಹೊಸ ಫ್ರಾಂಚೈಸಿಗಳಿಗೆ ಇಬ್ಬರು ಭಾರತೀಯ ಆಟಗಾರರು+ ಒಬ್ಬ ವಿದೇಶಿ ಆಟಗಾರನನ್ನು ನೇರವಾಗಿ ಆಯ್ಕೆ ಮಾಡುವ ಅವಕಾಶ ಇರಲಿದೆ. ಇದಾಗ್ಯೂ ರೈಟ್ ಟು ಮ್ಯಾಚ್ (ಆರ್ಟಿಎಂ) ಕಾರ್ಡ್ ಆಯ್ಕೆ ಇರುವುದಿಲ್ಲ.
ಆಟಗಾರರ ರಿಟೈನ್ಗೆ ಮೊತ್ತ ನಿಗದಿ:
ಆಟಗಾರರನ್ನು ಉಳಿಸಿಕೊಳ್ಳಲು ಕೂಡ ಮೊತ್ತ ನಿಗದಿ ಮಾಡಿದೆ. ಅದರಂತೆ ಒಟ್ಟು 90 ಕೋಟಿ ಮೊತ್ತದಿಂದ ಆಟಗಾರರ ರಿಟೈನ್ಗಾಗಿ 42 ಕೋಟಿ ನೀಡಲಾಗುತ್ತದೆ. ಇಲ್ಲಿ ಒಂದು ತಂಡವು ನಾಲ್ವರನ್ನು ಉಳಿಸಿಕೊಳ್ಳಲು ಬಯಸಿದರೆ 42 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಒಂದು ವೇಳೆ ಮೂವರನ್ನು ಮಾತ್ರ ಉಳಿಸುವುದಾದರೆ 33 ಕೋಟಿ ರೂ. ನೀಡಬೇಕಾಗುತ್ತದೆ. ಇನ್ನು ಇಬ್ಬರು ಆಟಗಾರರನ್ನು ಉಳಿಸಿಕೊಂಡರೆ 24 ಕೋಟಿ. ರೂ ನೀಡಬೇಕು. ಒಂದು ವೇಳೆ ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ. ರೂ ನೀಡಬೇಕಾಗುತ್ತದೆ. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ರೂ. ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಅದರಂತೆ ಆಟಗಾರರ ರಿಟೈನ್ ವೇತನ ಮೊತ್ತ ಹೀಗಿದೆ.
4 ಆಟಗಾರರನ್ನು ಉಳಿಸಿಕೊಂಡರೆ…
ಮೊದಲ ಆಟಗಾರನಿಗೆ 16 ಕೋಟಿ ರೂ.
2ನೇ ಆಟಗಾರನಿಗೆ 12 ಕೋಟಿ ರೂ.
3ನೇ ಆಟಗಾರನಿಗೆ 8 ಕೋಟಿ ರೂ.
4ನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 42 ಕೋಟಿ ವ್ಯಯಿಸಬೇಕಾಗುತ್ತದೆ.
3 ಆಟಗಾರರನ್ನು ಉಳಿಸಿಕೊಂಡರೆ…
ಮೊದಲ ಆಟಗಾರನಿಗೆ 15 ಕೋಟಿ ರೂ.
2ನೇ ಆಟಗಾರನಿಗೆ 11 ಕೋಟಿ ರೂ.
3ನೇ ಆಟಗಾರನಿಗೆ 7 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 33 ಕೋಟಿ ರೂ. ವ್ಯಯಿಸಬೇಕು.
2 ಆಟಗಾರರನ್ನು ಉಳಿಸಿಕೊಂಡರೆ …
ಮೊದಲ ಆಟಗಾರನಿಗೆ 14 ಕೋಟಿ ರೂ.
2ನೇ ಆಟಗಾರನಿಗೆ 10 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 24 ಕೋಟಿ ರೂ. ನೀಡಬೇಕಾಗುತ್ತದೆ.
ಇನ್ನು ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ ರೂ. ನೀಡಬೇಕಾಗುತ್ತದೆ.
ಪ್ರತಿ ಫ್ರಾಂಚೈಸಿಗಳು ಎಷ್ಟು ಆಟಗಾರರನ್ನು ಉಳಿಸಿಕೊಳ್ಳೊತ್ತಾರೋ ಅದಕ್ಕನುಗುಣವಾಗಿ, ಒಟ್ಟು ಹರಾಜು ಮೊತ್ತ 90 ಕೋಟಿಯಿಂದ ಆ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ. ಉದಾಹರಣೆಗೆ ಆರ್ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ 90 ಕೋಟಿಯಿಂದ 42 ಕೋಟಿ ರೂ. ಕಡಿತ ಮಾಡಲಾಗುತ್ತದೆ. ಅದರಂತೆ ಆರ್ಸಿಬಿ ಉಳಿದಿರುವ 48 ಕೋಟಿ ರೂ. ಒಳಗೆ ಉಳಿದ ಆಟಗಾರರನ್ನು ಖರೀದಿಸಬೇಕಾಗುತ್ತದೆ.
ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
ಇದನ್ನೂ ಓದಿ: T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ
(IPL 2022: BCCI sets 90 crore as salary purse, 42 crore for maximum four retentions)