IPL 2022: ಇದುವೇ RCB ತಂಡದ ದೊಡ್ಡ ಪ್ರಾಬ್ಲಂ..!
IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್.
IPL 2022: ಐಪಿಎಲ್ ಸೀಸನ್ 15 ನಲ್ಲಿ ಆರ್ಸಿಬಿ (RCB) ತಂಡವು 6 ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳು ಎಂದರೆ ತಪ್ಪಾಗಲಾರದು. ಅದರಲ್ಲೂ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್ ಹಾಗೂ ದಿನೇಶ್ ಕಾರ್ತಿಕ್ ಮಧ್ಯಮ ಕ್ರಮಾಂಕದಲ್ಲಿ ಉತ್ತಮವಾಗಿ ಆಡ್ತಿದ್ದಾರೆ. ಆದರೆ ಸಮಸ್ಯೆ ಇರುವುದು ಆರಂಭಿಕರದ್ದು. ಏಕೆಂದರೆ ಆರಂಭಿಕರಾದ ಫಾಫ್ ಡುಪ್ಲೆಸಿಸ್ ಹಾಗೂ ಅನೂಜ್ ರಾವತ್ರಿಂದ ನಿರೀಕ್ಷಿತ ಆಟ ಮೂಡಿಬರುತ್ತಿಲ್ಲ. ಅದರಲ್ಲೂ ಅನೂಜ್ ರಾವತ್ ಕಳೆದ 6 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 125 ರನ್ ಮಾತ್ರ. ಹಾಗೆಯೇ 125 ರನ್ ಬಾರಿಸಲು ತೆಗೆದುಕೊಂಡಿದ್ದು 111 ರನ್ ಬಾಲ್ಗಳನ್ನು ಎಂಬುದು ವಿಶೇಷ. ಅಂದರೆ ಪವರ್ಪ್ಲೇನಲ್ಲಿ ಅನೂಜ್ ರಾವತ್ ಬಿರುಸಿನ ಬ್ಯಾಟಿಂಗ್ ಮಾಡ್ತಿಲ್ಲ.
ಪಂಜಾಬ್ ಕಿಂಗ್ಸ್ ವಿರುದ್ದದ ಮೊದಲ ಪಂದ್ಯದಲ್ಲಿ 21 ರನ್ಗಳಿಸಿದ್ದ ಅನೂಜ್, ಕೆಕೆಆರ್ ವಿರುದ್ದದ 2ನೇ ಪಂದ್ಯದಲ್ಲಿ ಝಿರೋಗೆ ಔಟಾಗಿದ್ದರು. ಇನ್ನು 3ನೇ ಪಂದ್ಯದಲ್ಲಿ 26 ರನ್ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದಾಗ್ಯೂ ಮುಂಬೈ ಇಂಡಿಯನ್ಸ್ ವಿರುದ್ದ ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ ಆ ಬಳಿಕ ಸಿಎಸ್ಕೆ ವಿರುದ್ದ ಕೇವಲ 12 ರನ್ಗೆ ಔಟಾಗಿದ್ದರು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮತ್ತೆ ಝಿರೋಗೆ ಔಟ್ ಆಗಿದ್ದರು.
ಅಂದರೆ ಅನೂಜ್ ರಾವತ್ 6 ಇನಿಂಗ್ಸ್ನಲ್ಲಿ ಕೇವಲ ಒಂದು ಬಾರಿ ಮಾತ್ರ 30 ಕ್ಕಿಂತ ಅಧಿಕ ರನ್ಗಳಿಸಿದ್ದಾರೆ. ಇದೀಗ ಆರ್ಸಿಬಿ ತಂಡದ ಓಪನರ್ ಅನ್ನು ಬದಲಿಸಬೇಕಿದ್ದರೂ ಭಾರತೀಯ ಆರಂಭಿಕ ಆಟಗಾರ ತಂಡದಲ್ಲಿಲ್ಲ. ಒಂದು ವೇಳೆ ಫಿನ್ ಅಲೆನ್ಗೆ ಅವಕಾಶ ನೀಡಿದ್ರೆ ಒಬ್ಬ ವಿದೇಶಿ ಆಟಗಾರನನ್ನು ಹೊರಗಿಡಬೇಕಾಗುತ್ತದೆ. ಆದರೆ ತಂಡದಲ್ಲಿರುವ ವಿದೇಶಿ ಆಟಗಾರರು ಉತ್ತಮ ಪ್ರದರ್ಶನ ನೀಡ್ತಿದ್ದಾರೆ. ಒಟ್ಟಿನಲ್ಲಿ ಅನೂಜ್ ರಾವತ್ ಸತತ ಫೇಲ್ ಆಗುತ್ತಿರುವುದು ಇದೀಗ ಆರ್ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ