AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದ ಅತೀ ದೊಡ್ಡ ಪ್ರಾಬ್ಲಂ ಏನು ಗೊತ್ತಾ?

IPL 2022: ಆರ್​ಸಿಬಿ ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್

IPL 2022: RCB ತಂಡದ ಅತೀ ದೊಡ್ಡ ಪ್ರಾಬ್ಲಂ ಏನು ಗೊತ್ತಾ?
RCB
TV9 Web
| Updated By: ಝಾಹಿರ್ ಯೂಸುಫ್|

Updated on:Mar 24, 2022 | 9:28 PM

Share

IPL 2022 ಸೀಸನ್ 15 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಲೀಗ್ ಹಂತದ ಪಂದ್ಯಗಳು ನಾಲ್ಕು ಸ್ಟೇಡಿಯಂಗಳಲ್ಲಿ ನಡೆಯುವುದರಿಂದ ಈಗಾಗಲೇ ಎಲ್ಲಾ ತಂಡಗಳು ಮುಂಬೈಗೆ ಬಂದಿಳಿವೆ. ಅದರಂತೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 20 ಪಂದ್ಯಗಳನ್ನು, ಬ್ರಬೋರ್ನ್ ಸ್ಟೇಡಿಯಂ (CCI)ನಲ್ಲಿ 15 ಪಂದ್ಯಗಳನ್ನು ಹಾಗೂ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳನ್ನು ಆಡಲಾಗುತ್ತದೆ. ಇದಲ್ಲದೆ ಪುಣೆಯ ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿನ 15 ಪಂದ್ಯಗಳು ನಡೆಯಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಪಂಜಾಬ್ ಕಿಂಗ್ಸ್ ವಿರುದ್ದ ಆಡಲಿದೆ. ಈ ಬಾರಿ ಆರ್​ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ 11 ಅನ್ನು ಹೊಂದಿದೆ ಎಂದರೆ ತಪ್ಪಾಗಲಾರದು. ಅಂದರೆ ಆರ್​ಸಿಬಿ ಆಡುವ ಬಳಗವನ್ನೇ ಟಾರ್ಗೆಟ್ ಮಾಡಿ ಆಟಗಾರರನ್ನು ಖರೀದಿಸಿದೆ. ಆದರೆ ಇದುವೇ ಆರ್​ಸಿಬಿ ಪಾಲಿಗೆ ಮುಳುವಾಗಬಹುದು. ಏಕೆಂದರೆ…

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಈ ಆಟಗಾರರಿಂದ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ ಅನ್ನು ಆಯ್ಕೆ ಮಾಡಿಕೊಂಡರೆ, ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಜೋಶ್ ಹ್ಯಾಝಲ್​ವುಡ್​, ಗ್ಲೆನ್ ಮ್ಯಾಕ್ಸ್​ವೆಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಸ್ಥಾನ ಪಡೆಯುವುದು ಖಚಿತ ಎನ್ನಬಹುದು. ಅಂದರೆ ಆರ್​ಸಿಬಿ ತಂಡದಲ್ಲಿ ಖಾಯಂ ಸದಸ್ಯರಾಗಿ ಈ 9 ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಆದರೆ ಇವರಲ್ಲಿ ಒಬ್ಬರು ಗಾಯಗೊಂಡರೆ ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದರೆ ಸಮರ್ಥ ಬದಲಿ ಆಟಗಾರನ ಕೊರತೆ ಆರ್​ಸಿಬಿ ಕಾಡುವುದು ಖಚಿತ.

ಏಕೆಂದರೆ ಈಗಾಗಲೇ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ತಂಡದ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. ಅವರ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರ ಆರ್​ಸಿಬಿ ತಂಡದಲ್ಲಿಲ್ಲ. ಶೆರ್ಫಾನ್ ರುದರ್​​ಫೊರ್ಡ್ (ವೆಸ್ಟ್ ಇಂಡೀಸ್)​, ಫಿನ್ ಅಲೆನ್ (ನ್ಯೂಜಿಲೆಂಡ್) ಇದ್ದರೂ, ಇಬ್ಬರೂ ರಾಷ್ಟ್ರೀಯ ತಂಡದಲ್ಲಿ ಆಡಿದ ಹೆಚ್ಚಿನ ಅನುಭವ ಹೊಂದಿಲ್ಲ. ಅಷ್ಟೇ ಅಲ್ಲದೆ ರಾಷ್ಟ್ರೀಯ ತಂಡದ ಖಾಯಂ ಸದಸ್ಯರೂ ಕೂಡ ಅಲ್ಲ. ರುದರ್​ಫೋರ್ಡ್ ಕೊನೆಯ ಬಾರಿ ವೆಸ್ಟ್ ಇಂಡೀಸ್​ ತಂಡದಲ್ಲಿ ಸ್ಥಾನ ಪಡೆದಿದ್ದು 2020 ರಲ್ಲಿ. ಅಂದರೆ ದೇಶೀಯ ಅಂಗಳದಲ್ಲಿ ಅವರ ಪ್ರದರ್ಶನ ಹೇಗಿದೆ ಎಂಬುದನ್ನು ಊಹಿಸಬಹುದು. ಇನ್ನು ವಿಂಡೀಸ್ ಪರ 6 ಟಿ20 ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 43 ರನ್ ಮಾತ್ರ.

ಇತ್ತ ಐಪಿಎಲ್​ನ ಅಂಕಿ ಅಂಶ ತೆಗೆದುಕೊಂಡರೂ ರುದರ್​ಫೋರ್ಡ್​ ಫ್ಲಾಪ್ ಆಟಗಾರ ಎಂಬುದು ಸ್ಪಷ್ಟ. 7 ಪಂದ್ಯಗಳಲ್ಲಿ ಒಟ್ಟು 73 ರನ್​ಗಳಿಸಷ್ಟೇ ಶಕ್ತರಾಗಿದ್ದರು. ಇನ್ನು ನ್ಯೂಜಿಲೆಂಡ್ ಪರ ಫಿನ್ ಅಲೆನ್ 6 ಪಂದ್ಯಗಳಿಂದ 156 ರನ್​ ಮಾತ್ರಗಳಿಸಿದ್ದಾರೆ. ವಿಶೇಷ ಎಂದರೆ ಅಲೆನ್ ನ್ಯೂಜಿಲೆಂಡ್ ಪರ ಆರಂಭಿಕನಾಗಿ ಆಡಿದ್ದೇ ಹೆಚ್ಚು. ಇದಾಗ್ಯೂ ದೊಡ್ಡ ಮೊತ್ತಗಳಿಸಲು ಸಾಧ್ಯವಾಗಿಲ್ಲ. ಈ ಅಂಕಿ ಅಂಶಗಳನ್ನು ಹಾಗೂ ಇಬ್ಬರು ಆಟಗಾರರ ಅನುಭವ ಗಮನಿಸಿದರೆ ಯಾವುದೇ ರೀತಿಯಲ್ಲೂ ಮ್ಯಾಕ್ಸ್​ವೆಲ್ ಸ್ಥಾನವನ್ನು ತುಂಬಲು ಸಾಧ್ಯವಾಗುವುದಿಲ್ಲ ಎನ್ನಬಹುದು.

ಮತ್ತೊಂದೆಡೆ ಜೋಶ್ ಹ್ಯಾಝಲ್​ವುಡ್ ಹಾಗೂ ಜೇಸನ್ ಬೆಹ್ರೆಡ್ರಾರ್ಫ್ ಕೂಡ ಆರ್​ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇಲ್ಲಿ ಜೋಶ್ ಹ್ಯಾಝಲ್​ವುಡ್ ಆರ್​ಸಿಬಿ ಪ್ಲೇಯಿಂಗ್ 11 ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಇದೀಗ ಹ್ಯಾಝಲ್​ವುಡ್ ಅನುಪಸ್ಥಿತಿಯಲ್ಲಿ ಅವರ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ತಂಡದಲ್ಲಿರುವ ಡೇವಿಡ್ ವಿಲ್ಲಿ ಏಷ್ಯಾ ಪಿಚ್​ಗಳಲ್ಲಿ ಆಡಿದ ಅನುಭವ ಹೊಂದಿಲ್ಲ. ಇನ್ನು ಇಂಗ್ಲೆಂಡ್ ಪರ 32 ಟಿ20 ಪಂದ್ಯಗಳಲ್ಲಿ 38 ವಿಕೆಟ್ ಪಡೆದಿದ್ದಾರೆ. ಇದಾಗ್ಯೂ ಕಳೆದ ಒಂದು ವರ್ಷದಿಂದ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಹ್ಯಾಝಲ್​ವುಡ್ ಸ್ಥಾನವನ್ನು ಸಮರ್ಥವಾಗಿ ತುಂಬಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ.

ಇದಲ್ಲದೆ ವಿರಾಟ್ ಕೊಹ್ಲಿ ಅಥವಾ ಫಾಫ್ ಡುಪ್ಲೆಸಿಸ್ ಕಾರಣಾಂತರಗಳಿಂದ ಪಂದ್ಯಗಳಿಂದ ಹೊರಗುಳಿದರೆ ಅವರ ಸ್ಥಾನ ಯಾರು ತುಂಬಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ಆರ್​ಸಿಬಿ ತಂಡದಲ್ಲಿ ಕೊಹ್ಲಿ ಸ್ಥಾನ ತುಂಬಬಲ್ಲ ಆಟಗಾರ ಬಿಡಿ, ಅವರೊಂದಿಗೆ ಟೀಮ್ ಇಂಡಿಯಾದಲ್ಲಿ ಆಡಿದ ಒಬ್ಬನೇ ಒಬ್ಬ ಆಟಗಾರ ಇಲ್ಲ. ಇನ್ನು ಡುಪ್ಲೆಸಿಸ್ ಹೊರಗುಳಿದರೆ ಅದೇ ರುದರ್​ಫೋರ್ಡ್ ಅಥವಾ ಫಿನ್ ಅಲೆನ್​ ಅವರ ಮೊರೆ ಹೋಗಬೇಕಾಗುತ್ತದೆ.

ಇನ್ನು ಸಿರಾಜ್ ಹಾಗೂ ಹರ್ಷಲ್ ಪಟೇಲ್ ವಿಷಯದಲ್ಲೂ ಇದೇ ಕತೆ. ಈ ಇಬ್ಬರು ಬೌಲರ್​ಗಳಲ್ಲಿ ಒಬ್ಬರು ಹೊರಗುಳಿದರೂ ತಂಡಕ್ಕೆ ದೊಡ್ಡ ಸಮಸ್ಯೆ ಎದುರಾಗಲಿದೆ. ಏಕೆಂದರೆ ತಂಡದಲ್ಲಿ ಕಳೆದ ಸೀಸನ್​​ನಲ್ಲಿ ನೆಟ್ ಬೌಲರ್ ಆಗಿದ್ದ ಆಕಾಶ್ ದೀಪ್ ಹಾಗೂ ಸಿದ್ದಾರ್ಥ್ ಕೌಲ್ ಇದ್ದಾರೆ. ಇದಾಗ್ಯೂ ಈ ಇಬ್ಬರು ಗೇಮ್ ಚೇಂಜರ್​ಗಳಲ್ಲ ಎಂಬುದು ಸ್ಪಷ್ಟ.

ಅಂದರೆ ಇಲ್ಲಿ ಆರ್​ಸಿಬಿ ಪ್ಲೇಯಿಂಗ್ 11 ಅನ್ನು ಟಾರ್ಗೆಟ್ ಮಾಡಿ ತಂಡವನ್ನು ಖರೀದಿಸಿ ಸಂಕಷ್ಟಕ್ಕೆ ಸಿಲುಕಿದೆ ಎನ್ನಬಹುದು. ಪ್ಲೇಯಿಂಗ್​ 11 ನಲ್ಲಿ ಸ್ಟಾರ್ ಆಟಗಾರರಿದ್ದರೂ, ಅವರು ಸ್ಥಿರ ಪ್ರದರ್ಶನ ನೀಡಲಿದ್ದಾರೆ ಎನ್ನಲಾಗುವುದಿಲ್ಲ. ಒಂದು ವೇಳೆ ಒಂದಿಬ್ಬರು ಅನುಭವಿ ಆಟಗಾರರು ವಿಫಲರಾದರೆ ತೊಂದರೆಗೆ ಸಿಲುಕಲಿದೆ. ಯಾಕೆಂದರೆ ಆರ್​ಸಿಬಿ ತಂಡದಲ್ಲಿರುವ ಅನುಜ್ ರಾವತ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಚಾಮಾ ಮಿಲಿಂದ್…ಎಲ್ಲರೂ ಅನಾನುಭವಿ ಆಟಗಾರರೇ…ಹೀಗಾಗಿ ಬದಲಿ ಆಟಗಾರನ ಸಮಸ್ಯೆ ಎದುರಾದರೆ ಆರ್​ಸಿಬಿ ತಂಡದ ಸಮತೋಲನ ತಪ್ಪಲಿದೆ. ಹೀಗಾಗಿ ಆರ್​ಸಿಬಿ ತಂಡದ ಯಾರೂ ಗಾಯಗೊಳ್ಳದಿರಲಿ ಹಾಗೂ ಎಲ್ಲಾ ಸ್ಟಾರ್ ಆಟಗಾರರು ಸ್ಥಿರ ಪ್ರದರ್ಶನ ನೀಡಲಿ ಎಂಬುದೇ ಈಗ ಅಭಿಮಾನಿಗಳ ಪ್ರಾರ್ಥನೆ.

ಆರ್​ಸಿಬಿ ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

Published On - 2:50 pm, Thu, 24 March 22

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ