AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಒಬ್ಬರು ಆಸ್ಪತ್ರೆಗೆ, ಮತ್ತೊಬ್ಬರು ಇಂಜುರಿ: ಸಂಕಷ್ಟದಲ್ಲಿ CSK ತಂಡ

IPL 2022 CSK: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ.

IPL 2022: ಒಬ್ಬರು ಆಸ್ಪತ್ರೆಗೆ, ಮತ್ತೊಬ್ಬರು ಇಂಜುರಿ: ಸಂಕಷ್ಟದಲ್ಲಿ CSK ತಂಡ
IPL 2022 CSK
TV9 Web
| Edited By: |

Updated on: Apr 02, 2022 | 3:22 PM

Share

ಐಪಿಎಲ್​ ಸೀಸನ್ 15 (IPL 20220 ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡವು ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಈ ಬಾರಿ ಅತ್ಯಧಿಕ ಮೊತ್ತ ನೀಡಿ ಖರೀದಿಸಿದ ವೇಗಿ ದೀಪಕ್ ಚಹರ್ ಅವರು ಗಾಯದ ಕಾರಣ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಇತ್ತ ಗಾಯದಿಂದ ಚೇತರಿಸಿಕೊಂಡು ಅಂತಿಮ ಹಂತದಲ್ಲಿ ತಂಡವನ್ನು ಸೇರಿಕೊಂಡ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇನ್ನು ಆಡಿದ ಮೊದಲ ಎರಡೂ ಪಂದ್ಯಗಳಲ್ಲೂ ಸಿಎಸ್​ಕೆ ಸೋತಿದೆ. ಈ ಸತತ ಸೋಲಿನ ಚಿಂತೆ ಒಂದೆಡೆಯಾದರೆ, ಇದೀಗ ತಂಡದ ಇಬ್ಬರು ವಿದೇಶಿ ಆಟಗಾರರು ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಸಿಎಸ್​ಕೆ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಕ್ರಿಸ್ ಜೋರ್ಡಾನ್ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮತ್ತೊಂದೆಡೆ ವೇಗದ ಬೌಲರ್ ಆಡಮ್ ಮಿಲ್ನ್ ಕೂಡ ಗಾಯಗೊಂಡಿದ್ದಾರೆ. ಒಂದೆಡೆ ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಕ್ರಿಸ್ ಜೋರ್ಡಾನ್ ಅವರನ್ನು ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಇದೀಗ ಗಾಯಗೊಂಡಿರುವ ಆಡಮ್ ಮಿಲ್ನ್ ಭಾನುವಾರ ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ದ ಆಡುವುದಿಲ್ಲ ಎಂದು ತಿಳಿದು ಬಂದಿದೆ.

ಈಗಾಗಲೇ ಪ್ರಮುಖ ವೇಗಿ ದೀಪಕ್ ಚಹರ್ ಅವರ ಅನುಪಸ್ಥಿತಿಯಲ್ಲಿ ಸಿಎಸ್​ಕೆ ತಂಡದ ಬೌಲಿಂಗ್ ಲೈನಪ್ ಹಳಿ ತಪ್ಪಿದೆ. ಇದೀಗ ಪ್ರಮುಖ ಆಲ್​ರೌಂಡರ್ ಕ್ರಿಸ್ ಜೋರ್ಡಾನ್ ಹಾಗೂ ವೇಗಿ ಆಡಮ್ ಮಿಲ್ನ್ ಕೂಡ ಕೆಲ ಪಂದ್ಯಗಳಿಗೆ ಅಲಭ್ಯರಾಗುತ್ತಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಒಟ್ಟಿನಲ್ಲಿ ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್​ ಬ್ಯಾಕ್ ಟು ಬ್ಯಾಕ್ ಆಘಾತಗಳು ಎದುರಾಗುತ್ತಿರುವುದು ಹೊಸ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್​ ವಿರುದ್ದ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ಸಿಎಸ್​ಕೆ .

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು