IPL 2022: ಐಪಿಎಲ್ ತಂಡ ಖರೀದಿಸಿದ ಬೆಟ್ಟಿಂಗ್ ಕಂಪೆನಿ: ಹೊಸ ಫ್ರಾಂಚೈಸಿ ಬದಲಾಗುವ ಸಾಧ್ಯತೆ

IPL 2022 Controversy: 2013ರ ಐಪಿಎಲ್​ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಹಗರಣದಿಂದಾಗಿ ವೀಕ್ಷಕರು ಟೂರ್ನಿಯ ಬಗ್ಗೆ ನಂಬಿಕೆ ಕಳೆದುಕೊಂಡಿದ್ದರು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್‌ ತಂಡಗಳನ್ನು ಎರಡು ವರ್ಷಗಳ ಕಾಲ ನಿಷೇಧಿಸಲಾಗಿತ್ತು.

IPL 2022: ಐಪಿಎಲ್ ತಂಡ ಖರೀದಿಸಿದ ಬೆಟ್ಟಿಂಗ್ ಕಂಪೆನಿ: ಹೊಸ ಫ್ರಾಂಚೈಸಿ ಬದಲಾಗುವ ಸಾಧ್ಯತೆ
IPL 2022 Controversy
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 27, 2021 | 3:55 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ನಲ್ಲಿ (IPL 2022) ಒಟ್ಟು 10 ತಂಡಗಳು ಕಾಣಿಸಿಕೊಳ್ಳಲಿದೆ. ಪ್ರಸ್ತುತ ಇರುವ 8 ತಂಡಗಳ ಜೊತೆಗೆ ಅಹಮದಾಬಾದ್ ಹಾಗೂ ಲಕ್ನೋ ತಂಡಗಳು ಸೇರ್ಪಡೆಯಾಗಿದೆ. 7,090 ಕೋಟಿ ರೂ. ನೀಡಿ ಲಕ್ನೋ ಫ್ರಾಂಚೈಸ್​ ಅನ್ನು RPSG ಗ್ರೂಪ್ ತನ್ನದಾಗಿಸಿಕೊಂಡಿದೆ. ಹಾಗೆಯೇ CVC ಕ್ಯಾಪಿಟಲ್ ಪಾರ್ಟ್ನರ್ಸ್​ ಅಹಮದಾಬಾದ್ ಫ್ರಾಂಚೈಸ್ ಅನ್ನು 5625 ಕೋಟಿ ರೂ. ನೀಡಿ ಖರೀದಿಸಿದೆ. ಆದರೆ ಈ ಬಿಡ್ಡಿಂಗ್ ಬೆನ್ನಲ್ಲೇ ಇದೀಗ ವಿವಾದವೊಂದು ಹುಟ್ಟಿಕೊಂಡಿದೆ. CVC ಕ್ಯಾಪಿಟಲ್ ಪಾರ್ಟ್ನರ್ಸ್, ಬೆಟ್ಟಿಂಗ್ ಕಂಪನಿಗಳೊಂದಿಗೆ ನೇರ ಸಂಪರ್ಕ ಹೊಂದಿದೆ. ಕಂಪೆನಿಯು ಬೆಟ್ಟಿಂಗ್ ಮತ್ತು ಜೂಜಾಟದ ಕಂಪನಿಗಳಲ್ಲಿ ಭಾರಿ ಹೂಡಿಕೆ ಮಾಡಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಇದೇ ಕಂಪೆನಿಯು ಐಪಿಎಲ್​ ತಂಡದ ಮಾಲಕತ್ವ ಪಡೆದಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಏಕೆಂದರೆ 2013ರ ಐಪಿಎಲ್​ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಹಗರಣದಿಂದಾಗಿ ವೀಕ್ಷಕರು ಟೂರ್ನಿಯ ಬಗ್ಗೆ ನಂಬಿಕೆ ಕಳೆದುಕೊಂಡಿದ್ದರು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್‌ ತಂಡಗಳನ್ನು ಎರಡು ವರ್ಷಗಳ ಕಾಲ ನಿಷೇಧಿಸಲಾಗಿತ್ತು. ಇದೀಗ ಬೆಟ್ಟಿಂಗ್​ ಅನ್ನೇ ವ್ಯವಹಾರ ಮಾಡಿರುವ CVC ಕ್ಯಾಪಿಟಲ್ ಪಾರ್ಟ್ನರ್ಸ್​ ಹೊಸ ತಂಡವನ್ನು ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಸಿವಿಸಿ ಕ್ಯಾಪಿಟಲ್‌ನ ವ್ಯವಹಾರ ಚಟುವಟಿಕೆಗಳ ಬಗ್ಗೆ ಬಿಸಿಸಿಐ ಗಮನ ಸೆಳೆಯಲಾಗಿತ್ತು. ಹರಾಜಿಗೂ ಮುನ್ನ ದೀರ್ಘ “ಪರಿಶೀಲನಾ ಹಂತದಲ್ಲಿ” ಇವುಗಳನ್ನು ಬಿಸಿಸಿಐ ಗಮನಿಸದಿರುವುದು ಅಚ್ಚರಿಯನ್ನು ಉಂಟು ಮಾಡಿದೆ ಎಂದು ಬಿಡ್ಡಿಂಗ್ ಸಂಬಂಧಿಸಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಬಿಸಿಸಿಐ ಉಪಾಧ್ಯಕ್ಷ ಲಲಿತ್ ಮೋದಿ, ಬೆಟ್ಟಿಂಗ್ ಕಂಪನಿಗಳೇ ಐಪಿಎಲ್ ತಂಡಗಳನ್ನು ಖರೀದಿಸಬಹುದು ಎಂದು ನಾನು ಭಾವಿಸುತ್ತೇನೆ. ಹೊಸ ನಿಯಮ ಜಾರಿಯಾಗಬೇಕು. ನಿಸ್ಸಂಶಯವಾಗಿ, ಅರ್ಹ ಬಿಡ್​ದಾರರು ದೊಡ್ಡ ಬೆಟ್ಟಿಂಗ್ ಕಂಪನಿಯನ್ನು ಹೊಂದಿದ್ದಾರೆ. ಮುಂದೆ ಏನಾಗಲಿದೆ? ಇಂತಹ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಏನು ಮಾಡಬಹುದು? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಬಿಸಿಸಿಐ ಐಪಿಎಲ್ ಅನ್ನು ಬೆಟ್ಟಿಂಗ್ ಕಂಪೆನಿಗಳಿಗೆ ವಹಿಸುತ್ತಿದೆ ಎಂದು ಲಲಿತ್ ಮೋದಿ ಚಾಟಿ ಬೀಸಿದ್ದಾರೆ.

CVC ಕ್ಯಾಪಿಟಲ್ ಪಾರ್ಟ್ನರ್ಸ್ ಖಾಸಗಿ ಇಕ್ವಿಟಿ ಮತ್ತು ಹೂಡಿಕೆ ಸಲಹಾ ಸಂಸ್ಥೆಯಾಗಿದ್ದು, ಯುರೋಪಿಯನ್ ಮತ್ತು ಏಷ್ಯಾದ ಅನೇಕ ಬೆಟ್ಟಿಂಗ್ ಹಾಗೂ ಜೂಜಾಟ ಕಂಪೆನಿಗಳು ಹೂಡಿಕೆಯನ್ನು ಮಾಡಿದೆ. ಇದೀಗ ಕಂಪೆನಿಯ ಬೆಟ್ಟಿಂಗ್ ವ್ಯವಹಾರ ವಿಚಾರ ಬಿಸಿಸಿಐಗೆ ಹೊಸ ತಲೆನೋವುಂಟು ಮಾಡಿದೆ. ಅತ್ತ ಅದಾನಿ ಗ್ರೂಪ್ ಕೂಡ ಬಿಸಿಸಿಐ ಮುಂದಿನ ನಡೆಯೇನು ಎಂಬುದನ್ನು ಎದುರು ನೋಡುತ್ತಿದೆ ಎಂದು ಉನ್ನತ ಮೂಲವೊಂದು ತಿಳಿಸಿದೆ. ಏಕೆಂದರೆ ಸಿವಿಸಿ ಕಂಪೆನಿಯ ಫ್ರಾಂಚೈಸಿಯನ್ನು ತಿರಸ್ಕರಿಸಿದರೆ ಮತ್ತೊಮ್ಮೆ ತಂಡದ ಬಿಡ್ಡಿಂಗ್​ಗಾಗಿ ಅದಾನಿ ಗ್ರೂಪ್ ಎದುರು ನೋಡುತ್ತಿದೆ.

ಇನ್ನು ಬಿಸಿಸಿಐ ಮೇಲಧಿಕಾರಿಗಳು ಸಿವಿಸಿ ಕ್ಯಾಪಿಟಲ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಕಾನೂನು ಸಮಸ್ಯೆ ಇದೆಯೇ ಎಂಬುದನ್ನು ತಿಳಿದುಕೊಳ್ಳಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಹೊಸ ತಂಡಗಳ ಸೇರ್ಪಡೆಯೊಂದಿಗೆ ಇದೀಗ ವಿವಾದ ಕೂಡ ಶುರುವಾಗಿದ್ದು, ಅದರಂತೆ ಬಿಸಿಸಿಐ ಅಹಮದಾಬಾದ್ ಫ್ರಾಂಚೈಸಿಯನ್ನು CVC ಕ್ಯಾಪಿಟಲ್ ಪಾರ್ಟ್ನರ್ಸ್​ಗೆ ವಹಿಸಲಿದೆಯಾ ಅಥವಾ ಸಿವಿಸಿಯನ್ನು ಕೈಬಿಟ್ಟು ಮತ್ತೊಮ್ಮೆ ಹರಾಜು ನಡೆಸಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: T20 World Cup 2021: ನ್ಯೂಜಿಲೆಂಡ್ ತಂಡಕ್ಕೆ ಬಿಗ್ ಶಾಕ್: ವಿಶ್ವಕಪ್​ನಿಂದ ಪ್ರಮುಖ ಆಟಗಾರ ಹೊರಕ್ಕೆ

ಇದನ್ನೂ ಓದಿ: T20 World Cup 2021: ಟಿ20 ರ‍್ಯಾಂಕಿಂಗ್‌​ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?

ಇದನ್ನೂ ಓದಿ: T20 World Cup 2021: 90 ಕೆ.ಜಿ ವಿಕೆಟ್ ಕೀಪರ್: ಅದ್ಭುತ ಕ್ಯಾಚ್​ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಶಹಝಾದ್

(IPL 2022 Controversy: CVC Capital Under Scanner For Links With Betting Companies)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್