IPL 2022, CSK vs KKR, LIVE Streaming: 15ನೇ ಆವೃತ್ತಿಯ ಮೊದಲ ಪಂದ್ಯದ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವು

IPL 2022, CSK vs KKR, LIVE Streaming: ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ರವೀಂದ್ರ ಜಡೇಜಾ ಕೈಯಲ್ಲಿದ್ದರೆ ಕೆಕೆಆರ್ ನಾಯಕತ್ವ ಶ್ರೇಯಸ್ ಅಯ್ಯರ್ ಕೈಯಲ್ಲಿದೆ.

IPL 2022, CSK vs KKR, LIVE Streaming: 15ನೇ ಆವೃತ್ತಿಯ ಮೊದಲ ಪಂದ್ಯದ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಪೃಥ್ವಿಶಂಕರ

Updated on: Mar 25, 2022 | 2:25 PM

ಐಪಿಎಲ್ (IPL 2022) 15ನೇ ಆವೃತ್ತಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಕಳೆದ ವರ್ಷ ನಡೆದ ಫೈನಲ್‌ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದು ಅಲ್ಲಿ ಚೆನ್ನೈ ಗೆದ್ದಿತ್ತು. ಆದಾಗ್ಯೂ, ಅಂದಿನಿಂದ ಐಪಿಎಲ್​ನಲ್ಲಿ ಬಹಳಷ್ಟು ಬದಲಾವಣೆಗಳಾಗಿದೆ. ತಂಡಗಳ ನಾಯಕರಿಂದ, ಆಟಗಾರರಿಗೆ ಸಾಕಷ್ಟು ಬದಲಾಗಿದೆ. ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ರವೀಂದ್ರ ಜಡೇಜಾ (Ravindra Jadeja) ಕೈಯಲ್ಲಿದ್ದರೆ ಕೆಕೆಆರ್ ನಾಯಕತ್ವ ಶ್ರೇಯಸ್ ಅಯ್ಯರ್ (Shreyas Iyer) ಕೈಯಲ್ಲಿದೆ.

12 ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ಮುನ್ನಡೆಸಿ, ನಾಲ್ಕು ಪ್ರಶಸ್ತಿಗಳನ್ನು ಗೆದ್ದು ಐದು ಬಾರಿ ರನ್ನರ್ ಅಪ್ ಮಾಡಿದ ನಂತರ, ಅನುಭವಿ ಮಹೇಂದ್ರ ಸಿಂಗ್ ಧೋನಿ ಅವರು ಶನಿವಾರದಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಗಿಂತ ಮೊದಲು ನಾಯಕತ್ವಕ್ಕೆ ವಿದಾಯ ಹೇಳಿದರು. ಜೊತೆಗೆ ವಿಶ್ವಾಸಾರ್ಹ ಆಟಗಾರ ರವೀಂದ್ರ ಜಡೇಜಾಗೆ ನಾಯಕತ್ವ ಹಸ್ತಾಂತರಿಸಿದರು.

ತಂಡಗಳಲ್ಲಿ ಹಲವು ಬದಲಾವಣೆ 2020 ರ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಫೈನಲ್‌ಗೆ ಕೊಂಡೊಯ್ದ ಅಯ್ಯರ್ ಅವರನ್ನು ಕಳೆದ ತಿಂಗಳು ನಡೆದ ಮೆಗಾ ಹರಾಜಿನಲ್ಲಿ 12.25 ಕೋಟಿ ರೂ.ಗೆ ಕೆಕೆಆರ್ ಖರೀದಿಸಿತ್ತು. KKR ತಂಡದ ನಿರ್ವಹಣೆಯು ಆಸ್ಟ್ರೇಲಿಯನ್ ಟೆಸ್ಟ್ ತಂಡದ ನಾಯಕ, ವೇಗದ ಬೌಲರ್ ಪ್ಯಾಟ್ ಕಮಿನ್ಸ್‌ಗಿಂತ ಅವರಿಗೆ ಆದ್ಯತೆ ನೀಡಿತು. ಕೋಲ್ಕತ್ತಾ ನೈಟ್ ರೈಡರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ 15 ರ ಮೊದಲ ಐದು ಪಂದ್ಯಗಳಲ್ಲಿ ಪಾಕಿಸ್ತಾನದ ಪ್ರವಾಸದಲ್ಲಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಮತ್ತು ಬ್ಯಾಟ್ಸ್‌ಮನ್ ಆರೋನ್ ಫಿಂಚ್ ಅವರನ್ನು ಮಿಸ್ ಮಾಡಿಕೊಳ್ಳಲಿದೆ. ಅದೇ ಸಮಯದಲ್ಲಿ ದೀಪಕ್ ಚಹಾರ್ ಮತ್ತು ಮೊಯಿನ್ ಅಲಿ ಚೆನ್ನೈ ಪರ ಆಡುತ್ತಿಲ್ಲ. ವೀಸಾ ವಿವಾದದಿಂದಾಗಿ ಮೊಯಿನ್ ಅಲಿ ತಡವಾಗಿ ಮುಂಬೈ ತಲುಪಿದರೆ, ದೀಪಕ್ ಚಾಹರ್ ಗಾಯದ ಕಾರಣ ಎನ್‌ಸಿಎ ರಿಹ್ಯಾಬ್‌ನಲ್ಲಿದ್ದಾರೆ.

ಪಂದ್ಯದ ಪೂರ್ಣ ವಿವರ ಹೀಗಿದೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಮೊದಲ IPL 2022 ಪಂದ್ಯ ಯಾವಾಗ ನಡೆಯಲಿದೆ? ಐಪಿಎಲ್ 2022 ರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವು ಮಾರ್ಚ್ 26 ರ ಶನಿವಾರದಂದು ನಡೆಯಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ IPL 2022 ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ? ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ IPL 2022 ಪಂದ್ಯವು ವಾಂಖೆಡೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಸಿಎಸ್​ಕೆ ಮತ್ತು ಕೆಕೆಆರ್​ ನಡುವಿನ ಮೊದಲ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಮೊದಲ IPL 2022 ಪಂದ್ಯವು ಸಂಜೆ 7:30 ಕ್ಕೆ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಟಾಸ್ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ IPL 2022 ಪಂದ್ಯವನ್ನು ಎಲ್ಲಿ ಲೈವ್ ಮತ್ತು ಲೈವ್ ಸ್ಟ್ರೀಮಿಂಗ್ ಪ್ರಸಾರ ಮಾಡಲಾಗುತ್ತದೆ? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಆದರೆ ಲೈವ್ ಸ್ಟ್ರೀಮಿಂಗ್ ಅನ್ನು Hotstar ನಲ್ಲಿ ವೀಕ್ಷಿಸಬೇಕಾಗುತ್ತದೆ.

ಇದನ್ನೂ ಓದಿ:MS Dhoni Quits CSK Captaincy: ಐಪಿಎಲ್​ನಲ್ಲಿ ಧೋನಿ ಯಶಸ್ಸಿಗೆ ಪ್ರಮುಖ 5 ಕಾರಣಗಳಿವು

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ