IPL 2022 CSK vs MI Live Streaming: ಚೆನ್ನೈ ಗೆದ್ದರೆ ಪ್ಲೇ ಆಫ್ ಕನಸು ಜೀವಂತ! ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 CSK vs MI Live Streaming: ಪಾಯಿಂಟ್ಸ್ ಪಟ್ಟಿಯಲ್ಲಿ ಉಭಯ ತಂಡಗಳ ಸ್ಥಾನವನ್ನು ಗಮನಿಸಿದರೆ, ಮುಂಬೈ ತಂಡ 11 ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 9 ಪಂದ್ಯಗಳಲ್ಲಿ ಸೋಲುವ ಮೂಲಕ ಕೊನೆಯ ಸ್ಥಾನದಲ್ಲಿದ್ದರೆ, ಚೆನ್ನೈ 9 ನೇ ಸ್ಥಾನದಲ್ಲಿದೆ.

IPL 2022 CSK vs MI Live Streaming: ಚೆನ್ನೈ ಗೆದ್ದರೆ ಪ್ಲೇ ಆಫ್ ಕನಸು ಜೀವಂತ! ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
CSK vs MI
Follow us
TV9 Web
| Updated By: ಪೃಥ್ವಿಶಂಕರ

Updated on: May 11, 2022 | 4:41 PM

ಇಂಡಿಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಎರಡು ತಂಡಗಳು ಈ ವರ್ಷ ಕಳಪೆ ಪ್ರದರ್ಶನದ ಮೂಲಕ ದುಸ್ಥಿತಿಯಲ್ಲಿವೆ. ಐದು ಬಾರಿ ಐಪಿಎಲ್ ವಿಜೇತ ತಂಡ ಮುಂಬೈ ಇಂಡಿಯನ್ಸ್ (Mumbai Indians) ಈಗಾಗಲೇ ಐಪಿಎಲ್-2022 (IPL-2022) ರೇಸ್‌ನಿಂದ ಹೊರಗುಳಿದಿದೆ. ರೋಹಿತ್ ಶರ್ಮಾ (Rohit Sharma) ನಾಯಕತ್ವದ ಈ ತಂಡವು ಈ ಋತುವಿನಲ್ಲಿ ಪ್ಲೇಆಫ್ ರೇಸ್‌ನಿಂದ ಹೊರಗುಳಿದ ಮೊದಲ ತಂಡವಾಗಿದೆ. ಅದೇ ಸಮಯದಲ್ಲಿ, ನಾಲ್ಕು ಬಾರಿ ಐಪಿಎಲ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಕೂಡ ಪ್ಲೇ ಆಫ್ ರೇಸ್‌ನಿಂದ ಬಹುತೇಕ ಹೊರಗುಳಿದಿದೆ. ಇದೀಗ ಈ ಎರಡು ತಂಡಗಳು ಗುರುವಾರ ಮುಂಬೈನಲ್ಲಿ ಮುಖಾಮುಖಿಯಾಗಲಿವೆ. ಚೆನ್ನೈ ತಂಡ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಈ ಋತುವನ್ನು ಚೆನ್ನಾಗಿಯೇ ಮುಗಿಸುವುದು ಮುಂಬೈನ ಪ್ರಯತ್ನ. ಮುಂಬೈ ವಿರುದ್ಧದ ಸೋಲು ಐಪಿಎಲ್-2022 ರ ಪ್ಲೇಆಫ್ ರೇಸ್‌ನಿಂದ ಚೆನ್ನೈ ಅನ್ನು ಸಂಪೂರ್ಣವಾಗಿ ಹೊರಗಿಡುತ್ತದೆ.

ಪಾಯಿಂಟ್ಸ್ ಪಟ್ಟಿಯಲ್ಲಿ ಉಭಯ ತಂಡಗಳ ಸ್ಥಾನವನ್ನು ಗಮನಿಸಿದರೆ, ಮುಂಬೈ ತಂಡ 11 ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 9 ಪಂದ್ಯಗಳಲ್ಲಿ ಸೋಲುವ ಮೂಲಕ ಕೊನೆಯ ಸ್ಥಾನದಲ್ಲಿದ್ದರೆ, ಚೆನ್ನೈ 9 ನೇ ಸ್ಥಾನದಲ್ಲಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಈ ತಂಡವು 11 ಪಂದ್ಯಗಳಿಂದ ನಾಲ್ಕು ಗೆಲುವು ಮತ್ತು ಏಳು ಸೋಲುಗಳೊಂದಿಗೆ ಎಂಟು ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ಚೆನ್ನೈ ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸಿತ್ತು. ಅದೇ ಸಮಯದಲ್ಲಿ, ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿತು. ಈ ಋತುವಿನಲ್ಲಿ ಈ ಎರಡು ತಂಡಗಳ ಎರಡನೇ ಪಂದ್ಯ ಇದಾಗಿದೆ. ಇದಕ್ಕೂ ಮುನ್ನ ಏಪ್ರಿಲ್ 21ರಂದು ಎರಡೂ ತಂಡಗಳು ಮುಖಾಮುಖಿಯಾಗಿದ್ದು, ಮುಂಬೈ ತಂಡವನ್ನು ಚೆನ್ನೈ ಸೋಲಿಸಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವು ಗುರುವಾರ, ಮೇ 12 ರಂದು ನಡೆಯಲಿದೆ.

ಇದನ್ನೂ ಓದಿ
Image
Ravindra Jadeja: ಚೆನ್ನೈ ನಾಯಕತ್ವದಿಂದ ಕೆಳಗಿಳಿದಿದ್ದ ರವೀಂದ್ರ ಜಡೇಜಾ ಈಗ ಐಪಿಎಲ್​ನಿಂದಲೇ ಔಟ್..!
Image
RCB vs CSK Highlights, IPL 2022: ಆರ್​ಸಿಬಿ ಸಾಂಘಿಕ ಹೋರಾಟಕ್ಕೆ ಮಂಡಿಯೂರಿದ ಚೆನ್ನೈ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಚಂದಾದಾರಿಕೆಯೊಂದಿಗೆ Disney+Hotstar ನಲ್ಲಿ ನೋಡಬಹುದು.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ