IPL 2022, CSK vs PBKS: ಕಿಂಗ್ಸ್​ಗಳ ಕದನದಲ್ಲಿ ಯಾರು ಬಲಿಷ್ಠ?

IPL 2022, CSK vs PBKS Match Preview: ಪಂಜಾಬ್ ಕಿಂಗ್ಸ್ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಅರ್ಷದೀಪ್ ಸಿಂಗ್, ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಶಾರುಖ್ ಖಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಓಡಿಯನ್ ಸ್ಮಿತ್.

IPL 2022, CSK vs PBKS: ಕಿಂಗ್ಸ್​ಗಳ ಕದನದಲ್ಲಿ ಯಾರು ಬಲಿಷ್ಠ?
IPL 2022, CSK vs PBKS Match Preview
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 02, 2022 | 6:33 PM

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪ್ರಸಕ್ತ IPL ಸೀಸನ್​ನಲ್ಲಿ ಉತ್ತಮ ಆರಂಭ ಪಡೆದಿಲ್ಲ. ರವೀಂದ್ರ ಜಡೇಜಾ ನಾಯಕತ್ವದ ಸಿಎಸ್‌ಕೆ ತಂಡ ತನ್ನ ಎರಡೂ ಆರಂಭಿಕ ಪಂದ್ಯಗಳಲ್ಲಿ ಸೋತಿದೆ. ಇದೀಗ ಏಪ್ರಿಲ್ 3 ರಂದು ಪಂಜಾಬ್ ಕಿಂಗ್ಸ್ (CSK vs PBKS) ವಿರುದ್ದ ಸಿಎಸ್​ಕೆ ಮೂರನೇ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸಿಎಸ್​ಕೆ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ. ಮತ್ತೊಂದೆಡೆ 2 ಪಂದ್ಯಗಳನ್ನು ಆಡಿರುವ ಪಂಜಾಬ್ ಕಿಂಗ್ಸ್ ಒಂದರಲ್ಲಿ ಗೆದ್ದಿದ್ದರೆ ಒಂದರಲ್ಲಿ ಸೋತಿದ್ದಾರೆ. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಪಂಜಾಬ್ ತಂಡ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಹಾದಿಗೆ ಮರಳುವ ಅನಿವಾರ್ಯತೆ ಮಯಾಂಕ್ ಅಗರ್ವಾಲ್ ಪಡೆಗಿದೆ.

ಈ ಹಿಂದಿನ ಐಪಿಎಲ್​ ಅಂಕಿ ಅಂಶಗಳನ್ನು ನೋಡುವುದಾದರೆ, ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಇದುವರೆಗೆ 25 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸಿಎಸ್‌ಕೆ 15 ಪಂದ್ಯಗಳನ್ನು ಗೆದ್ದಿದೆ. ಹಾಗೆಯೇ ಪಂಜಾಬ್ ತಂಡ 10 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇನ್ನು ಐಪಿಎಲ್ 2021 ರಲ್ಲಿ, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು.

ಇದಾಗ್ಯೂ ಈ ಬಾರಿ ಮುಂಬೈನಲ್ಲೇ ಪಂದ್ಯಗಳು ನಡೆಯುತ್ತಿರುವುದರಿಂದ ಈ ಹಿಂದಿನ ಅಂಕಿ ಅಂಶಗಳಿಗೆ ಹೆಚ್ಚಿನ ಮಹತ್ವಿಲ್ಲ ಎಂದೇ ಹೇಳಬಹುದು. ಏಕೆಂದರೆ ಕಳೆದ ಬಾರಿ ಆರೆಂಜ್ ಕ್ಯಾಪ್ ಗೆದ್ದ ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ 2 ಪಂದ್ಯಗಳಲ್ಲಿ ಕೇವಲ ಒಂದು ರನ್ ಗಳಿಸಲು ಮಾತ್ರ ಶಕ್ತರಾಗಿದ್ದಾರೆ. ಮತ್ತೊಂದೆಡೆ, ಹಿರಿಯ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಅವರಿಂದ ಕೂಡ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಇನ್ನು ಬೌಲಿಂಗ್ ಬಗ್ಗೆ ಮಾತನಾಡುವುದಾದರೆ, ವೇಗದ ಬೌಲರ್ ದೀಪಕ್ ಚಹಾರ್ ಇನ್ನೂ ಗಾಯಗೊಂಡಿದ್ದಾರೆ. ಅದೇ ಸಮಯದಲ್ಲಿ, ತುಷಾರ್ ದೇಶಪಾಂಡೆ 2 ಪಂದ್ಯಗಳಲ್ಲಿ ಕೇವಲ ಒಂದು ವಿಕೆಟ್ ಪಡೆಯಲು ಶಕ್ತರಾಗಿದ್ದಾರೆ. ಡ್ವೇನ್ ಬ್ರಾವೋ 4 ವಿಕೆಟ್ ಪಡೆದಿದ್ದಾರೆ. ರವೀಂದ್ರ ಜಡೇಜಾ ಕೂಡ ಇನ್ನೂ ವಿಕೆಟ್ ಪಡೆದಿಲ್ಲ. ಅಂದರೆ ಸಿಎಸ್​ಕೆ ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ.

ಪಂಜಾಬ್ ಕಿಂಗ್ಸ್ ಬಗ್ಗೆ ನೋಡುವುದಾದರೆ, ಮೊದಲ ಎರಡು ಪಂದ್ಯಗಳಲ್ಲಿ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಹಿರಿಯ ಬ್ಯಾಟ್ಸ್‌ಮನ್ ಶಿಖರ್ ಧವನ್ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಶ್ರೀಲಂಕಾದ ಬ್ಯಾಟ್ಸ್‌ಮನ್ ಭಾನುಕಾ ರಾಜಪಕ್ಸೆ ತಮ್ಮ ಪ್ರದರ್ಶನದಿಂದ ಎಲ್ಲರನ್ನೂ ಆಕರ್ಷಿಸಿದ್ದಾರೆ. ಇನ್ನು ಬೌಲಿಂಗ್​ನಲ್ಲಿ ಲೆಗ್ ಸ್ಪಿನ್ನರ್ ರಾಹುಲ್ ಚಹಾರ್ ಹೊರತುಪಡಿಸಿ, ಬೇರೆ ಯಾವುದೇ ಬೌಲರ್ ಇದುವರೆಗೆ ತಮ್ಮ ಛಾಪು ಮೂಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ಕೂಡ ಸಂಘಟಿತ ಪ್ರದರ್ಶನವನ್ನು ಎದುರು ನೋಡುತ್ತಿದೆ. ಅಂದರೆ ಉಭಯ ತಂಡಗಳು ಸಮಬಲ ಹೊಂದಿದ್ದು, ಹೀಗಾಗಿ ಎರಡೂ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

ಪಂಜಾಬ್ ಕಿಂಗ್ಸ್ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಅರ್ಷದೀಪ್ ಸಿಂಗ್, ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಶಾರುಖ್ ಖಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಓಡಿಯನ್ ಸ್ಮಿತ್, ರಾಜ್ ಬಾವಾ, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಜಿತೇಶ್ ಶರ್ಮಾ, ಪ್ರಭ್‌ಸಿಮ್ರಾನ್ ಸಿಂಗ್ ಇಶಾನ್ ಪೊರೆಲ್, ಸಂದೀಪ್ ಶರ್ಮಾ, ನಾಥನ್ ಎಲ್ಲಿಸ್, ಅಥರ್ವ್ ತಾಂಡೆ, ಪ್ರೇರಕ್ ಮಂಕಡ್, ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್, ವೈಭವ್ ಅರೋರಾ, ಹೃತಿಕ್ ಚಟರ್ಜಿ, ಬಾಲ್ತೇಜ್ ಧಂಡಾ, ಅಂಶ್ ಪಟೇಲ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಮೊಯಿನ್ ಅಲಿ, ಅಂಬಟಿ ರಾಯುಡು, ರಾಬಿನ್ ಉತ್ತಪ್ಪ, ಡೆವೊನ್ ಕಾನ್ವೆ, ಡ್ವೇನ್ ಬ್ರಾವೊ, ಕ್ರಿಸ್ ಜೋರ್ಡಾನ್, ಶಿವಂ ದುಬೆ, ದೀಪಕ್ ಚಹರ್, ಸಿಮಾರ್ಜಿತ್ ಸಿಂಗ್, ಡ್ವೇನ್ ಪ್ರಿಟೋರಿಯಸ್, ಆಡಮ್ ಮಿಲ್ನ್, ಮಿಚೆಲ್ ಸ್ಯಾಂಟ್ನರ್, ರಾಜವರ್ಧನ್ ಹಂಗರಗೇಕರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಮುಖೇಶ್ ಚೌಧರಿ, ಶುಭಾಂಶು ಸೇನಾಪತಿ, ಕೆ.ಎಂ.ಆಸಿಫ್, ತುಷಾರ್ ದೇಶಪಾಂಡೆ, ಸಿ.ಹರಿ ನಿಶಾಂತ್, ಎನ್. ಜಗದೀಶ, ಕೆ. ಭಗತ್ ವರ್ಮಾ.

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ