AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ RCB ಮಾಜಿ ನಾಯಕ

IPL 2022: ಕಳೆದ 8 ಪಂದ್ಯಗಳಿಂದ ವಿರಾಟ್ ಕೊಹ್ಲಿ ಕಲೆಹಾಕಿದ್ದು ಕೇವಲ 119 ರನ್ ಮಾತ್ರ. ಅಂದರೆ ಎರಡು ಇನಿಂಗ್ಸ್​ಗಳಲ್ಲಿ 40 ಕ್ಕಿಂತ ಅಧಿಕ ರನ್​ಗಳಿಸಿದ ಬಳಿಕ ಕೊಹ್ಲಿ ಸತತವಾಗಿ ವಿಫಲರಾಗಿದ್ದಾರೆ. ಅಲ್ಲದೆ ಎರಡು ಇನಿಂಗ್ಸ್​ನಲ್ಲಿ ಬ್ಯಾಕ್ ಟು ಬ್ಯಾಕ್ ಗೋಲ್ಡನ್ ಡಕ್ ಔಟ್ ಆಗಿದ್ದಾರೆ.

Virat Kohli: ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ RCB ಮಾಜಿ ನಾಯಕ
Virat Kohli
TV9 Web
| Edited By: |

Updated on: Apr 24, 2022 | 3:50 PM

Share

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್‌ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೇವಲ ಆಟಗಾರನಾಗಿ ಮಾತ್ರ ಕಾಣಿಸಿಕೊಂಡಿರುವ ಕೊಹ್ಲಿ ರನ್​ಗಳಿಸಲು ಪರದಾಡುತ್ತಿರುವುದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತಿದೆ. ಏಕೆಂದರೆ ಕಳೆದ 8 ಪಂದ್ಯಗಳಿಂದ ವಿರಾಟ್ ಕೊಹ್ಲಿ ಕಲೆಹಾಕಿದ್ದು ಕೇವಲ 119 ರನ್ ಮಾತ್ರ. ಅಂದರೆ ಎರಡು ಇನಿಂಗ್ಸ್​ಗಳಲ್ಲಿ 40 ಕ್ಕಿಂತ ಅಧಿಕ ರನ್​ಗಳಿಸಿದ ಬಳಿಕ ಕೊಹ್ಲಿ ಸತತವಾಗಿ ವಿಫಲರಾಗಿದ್ದಾರೆ. ಅಲ್ಲದೆ ಎರಡು ಇನಿಂಗ್ಸ್​ನಲ್ಲಿ ಬ್ಯಾಕ್ ಟು ಬ್ಯಾಕ್ ಗೋಲ್ಡನ್ ಡಕ್ ಔಟ್ ಆಗಿದ್ದಾರೆ. ಹೀಗಾಗಿಯೇ ವಿರಾಟ್ ಕೊಹ್ಲಿಯ ಫಾರ್ಮ್​ ಇದೀಗ ಭಾರೀ ಚರ್ಚಗೆ ಗ್ರಾಸವಾಗಿದೆ. ಆದರೆ ಕೊಹ್ಲಿಯ ಕೆಟ್ಟ ಪ್ರದರ್ಶನದ ಬಗ್ಗೆ ಆರ್​ಸಿಬಿ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ ನಿಜ. ಆದರೆ ಅವರಿಗೆ ಆರ್​ಸಿಬಿ ಟೀಮ್ ಮ್ಯಾನೇಜ್‌ಮೆಂಟ್ ಯಾವುದೇ ಸಲಹೆ ನೀಡಬಾರದು. ಅವರ ಫಾರ್ಮ್​ ಬಗ್ಗೆ ಅವರೇ ಯೋಚಿಸಲಿ. ಈ ಮೂಲಕ ಖುದ್ದು ಕೊಹ್ಲಿಯೇ ತಮ್ಮ ತಪ್ಪುಗಳನ್ನು ತಿದ್ದಿ ಕಂಬ್ಯಾಕ್ ಮಾಡಲಿ ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಕಳಪೆ ಫಾರ್ಮ್‌ನಿಂದ ಹೊರಬರಲು ವಿರಾಟ್ ಕೊಹ್ಲಿ ತಮ್ಮದೇ ಆದ ಮಾರ್ಗವನ್ನು ಕಂಡುಕೊಳ್ಳಬೇಕು. ಏಕೆಂದರೆ ಕೊಹ್ಲಿಗೆ ಯಾರ ಸಲಹೆಯೂ ಬೇಕಾಗಿಲ್ಲ. ಅವರು ಕೂಡ ಅನುಭವಿ ಆಟಗಾರ. ಹೀಗಾಗಿ ಅವರ ತಪ್ಪುಗಳು ಅವರಿಗೂ ಕೂಡ ಗೊತ್ತಿರುತ್ತದೆ. ಅದರಂತೆ ಅವರು ಮುಂದಿನ ಪಂದ್ಯಗಳಲ್ಲಿ ತಮ್ಮ ತಪ್ಪುಗಳನ್ನು ಸರಿಪಡಿಸಲಿದ್ದಾರೆ ಎಂಬುದರ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ವೆಟ್ಟೋರಿ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕೊಹ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ ಎಂದು ಅವರಿಗೆ ಸಲಹೆಗಳನ್ನು ನೀಡಲು ಹೋದರೆ ಅದು ದೊಡ್ಡ ತಪ್ಪಾಗುತ್ತದೆ. ಇದರಿಂದ ಅವರ ಬ್ಯಾಟಿಂಗ್ ಮೇಲೆ ಮತ್ತಷ್ಟು ಪರಿಣಾಮ ಬೀರಬಹುದು. ಹೀಗಾಗಿ ಅವರ ತಪ್ಪುಗಳನ್ನು ಅವರೇ ತಿದ್ದಿಕೊಳ್ಳುವುದು ಉತ್ತಮ. ಹಾಗಾಗಿ ಆರ್​ಸಿಬಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಆಗಲಿ ಅಥವಾ ಇನ್ನಿತರರಾಗಲಿ ಯಾರು ಕೂಡ ಸಲಹೆ ನೀಡಬೇಡಿ ಎಂದು ವೆಟ್ಟೋರಿ ಇದೇ ವೇಳೆ ತಿಳಿಸಿದರು.

ಅಲ್ಲದೆ ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ. ನೀವು ಪಂದ್ಯಗಳನ್ನು ಗೆಲ್ಲುವಂತೆ ಮಾಡುತ್ತೀರಿ ಎಂದು ಈ ಸಮಯದಲ್ಲಿ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಹೇಳಬೇಕಿದೆ. ಈ ಮೂಲಕ ಅವರರಲ್ಲಿ ಆತ್ಮವಿಶ್ವಾಸ ಮೂಡುವಂತೆ ಮಾಡಬೇಕಿದೆ ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಇದನ್ನೂ ಓದಿ: Virat Kohli: IPL ನಲ್ಲಿ ವಿರಾಟ್ ಕೊಹ್ಲಿ ಎಷ್ಟು ಬಾರಿ ಝೀರೊಗೆ ಔಟಾಗಿದ್ದಾರೆ ಗೊತ್ತಾ?

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

Follow Us
TV9 Web
TV9 Web

TV9 Kannada

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’