AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಅಬ್ಬರಿಸಿದ ಪಡಿಕ್ಕಲ್, ಚಹಲ್ ಮ್ಯಾಜಿಕ್! ರಾಜಸ್ಥಾನ್ ಪರ ಮಿಂಚಿದ ಮಾಜಿ ಆರ್​ಸಿಬಿ ಆಟಗಾರರು

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ರಾಜಸ್ಥಾನಕ್ಕೆ ಬಂದ ಎಡಗೈ ಬ್ಯಾಟ್ಸ್‌ಮನ್ 51 ಎಸೆತಗಳಲ್ಲಿ 67 ರನ್ ಗಳಿಸಿದರು. ಇವರಲ್ಲದೆ ತಂಡಕ್ಕೆ ಮರಳಿದ ಯುವ ಆಲ್ ರೌಂಡರ್ ರಿಯಾನ್ ಪರಾಗ್ ಕೂಡ 27 ಎಸೆತಗಳಲ್ಲಿ ವೇಗದ 49 ರನ್ ಗಳಿಸಿದರು.

IPL 2022: ಅಬ್ಬರಿಸಿದ ಪಡಿಕ್ಕಲ್, ಚಹಲ್ ಮ್ಯಾಜಿಕ್! ರಾಜಸ್ಥಾನ್ ಪರ ಮಿಂಚಿದ ಮಾಜಿ ಆರ್​ಸಿಬಿ ಆಟಗಾರರು
ಹಿಟ್ಮಾಯರ್, ಚಹಲ್, ದೇವದತ್
TV9 Web
| Edited By: |

Updated on: Mar 26, 2022 | 5:30 PM

Share

ಇಂಡಿಯನ್ ಪ್ರೀಮಿಯರ್ ಲೀಗ್ 2022 ಸೀಸನ್ (IPL 2022) ಆರಂಭಕ್ಕೆ ಕೆಲವೇ ಗಂಟೆಗಳು ಉಳಿದಿವೆ. ಮಾರ್ಚ್ 26 ರ ಶನಿವಾರ, ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಮ್ಮ ತಮ್ಮ ಬ್ರಿಗೇಡ್‌ಗಳೊಂದಿಗೆ ಮೈದಾನಕ್ಕಿಳಿದು ಐಪಿಎಲ್ ಆರಂಭಕ್ಕೆ ಶುಭ ಹಾಡಲಿದ್ದಾರೆ. ಎರಡೂ ತಂಡಗಳು ಸಿದ್ಧತೆಗಳನ್ನು ಪೂರ್ಣಗೊಳಿಸಿವೆ. ಅದೇ ಸಮಯದಲ್ಲಿ, ಉಳಿದ ತಂಡಗಳು ತಮ್ಮ ಮೊದಲ ಪಂದ್ಯವನ್ನು ಆಡಲು ಇನ್ನೂ ಒಂದು, ಎರಡು ಅಥವಾ ಮೂರು ದಿನಗಳಿವೆ. ಅಂತಹ ಪರಿಸ್ಥಿತಿಯಲ್ಲಿ, ಎಲ್ಲಾ ತಂಡಗಳು ಸರಿಯಾದ ಪ್ಲೇಯಿಂಗ್ XI ಸಂಯೋಜನೆಯನ್ನು ಹುಡುಕುತ್ತಿದ್ದಾರೆ. ಇವರಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಕೂಡ ಸೇರಿದೆ. ತಂಡವು ಅಭ್ಯಾಸ ಪಂದ್ಯಗಳಲ್ಲಿ ತೊಡಗಿಸಿಕೊಂಡಿದ್ದು ಅದರ ಹೊಸ ಸೇರ್ಪಡೆಯಾದ ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್ ಮತ್ತು ಯುಜ್ವೇಂದ್ರ ಚಾಹಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ

2008ರಲ್ಲಿ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದಿದ್ದ ರಾಜಸ್ಥಾನ್ ರಾಯಲ್ಸ್ ತಂಡ, ಕಳೆದ ಕೆಲವು ಸೀಸನ್‌ಗಳ ಪ್ರದರ್ಶನವನ್ನು ಸುಧಾರಿಸುವ ಮೂಲಕ ಈ ಬಾರಿ ಪ್ರಶಸ್ತಿ ರೇಸ್‌ನಲ್ಲಿ ಪ್ರಬಲ ಸ್ಪರ್ಧಿಯಾಗುವ ನಿರೀಕ್ಷೆಯಲ್ಲಿದೆ ಮತ್ತು ತಂಡವು ಕೆಲವು ಉತ್ತಮ ಆಟಗಾರರನ್ನು ಹೊಂದಿದೆ. ಶುಕ್ರವಾರದ ಅಭ್ಯಾಸ ಪಂದ್ಯದಲ್ಲಿ ತಂಡದಲ್ಲಿದ್ದ ಹೊಸಬರು ತಮ್ಮ ಸಾಮರ್ಥ್ಯ ಪ್ರದರ್ಶಿಸಿ ನಾಯಕ ಹಾಗೂ ತಂಡದ ಆಡಳಿತಕ್ಕೆ ಭರವಸೆಯ ಕಿರಣವನ್ನು ತೋರಿದ ಉದಾಹರಣೆ ಇದಕ್ಕೆ ನಿದರ್ಶನವಾಗಿದೆ.

ಪಡಿಕ್ಕಲ್ ಮತ್ತು ಹೆಟ್ಮೆಯರ್ ಸೂಪರ್ ಶೋ ರಾಯಲ್ಸ್ ಅಭ್ಯಾಸ ಪಂದ್ಯದಲ್ಲಿ ತಂಡವನ್ನು ಟೀಮ್ ಪಿಂಕ್ ಮತ್ತು ಟೀಮ್ ಬ್ಲೂ ಎಂದು ವಿಂಗಡಿಸಿ ಅಭ್ಯಾಸ ಪಂದ್ಯ ಆಡಿತ್ತು. ಇದರಲ್ಲಿ ಪಿಂಕ್ ತಂಡ ಬ್ಲೂ ತಂಡವನ್ನು 15 ರನ್‌ಗಳಿಂದ ಸೋಲಿಸಿತು. ಉಭಯ ತಂಡಗಳಿಂದ ಕೆಲವು ಸ್ಫೋಟಕ ಪ್ರದರ್ಶನಗಳು ಕಂಡುಬಂದವು. ಪಿಂಕ್ ಪರ ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಅರ್ಧಶತಕ ಗಳಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ರಾಜಸ್ಥಾನಕ್ಕೆ ಬಂದ ಎಡಗೈ ಬ್ಯಾಟ್ಸ್‌ಮನ್ 51 ಎಸೆತಗಳಲ್ಲಿ 67 ರನ್ ಗಳಿಸಿದರು. ಇವರಲ್ಲದೆ ತಂಡಕ್ಕೆ ಮರಳಿದ ಯುವ ಆಲ್ ರೌಂಡರ್ ರಿಯಾನ್ ಪರಾಗ್ ಕೂಡ 27 ಎಸೆತಗಳಲ್ಲಿ ವೇಗದ 49 ರನ್ ಗಳಿಸಿದರು.

ಮತ್ತೊಂದೆಡೆ, ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಶಿಮ್ರಾನ್ ಹೆಟ್ಮೆಯರ್ ಅವರನ್ನು 8.50 ಕೋಟಿ ರೂಪಾಯಿಗೆ ಖರೀದಿಸುವ ಮೂಲಕ, ರಾಯಲ್ಸ್‌ನ ಈ ಒಪ್ಪಂದವು ಸರಿಯಾಗಿದೆ ಎಂದು ಸಾಬೀತುಪಡಿಸುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್‌ನ ಈ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಟೀಮ್ ಬ್ಲೂ ಪರ ಕೇವಲ 37 ಎಸೆತಗಳಲ್ಲಿ ಅಜೇಯ 70 ರನ್ ಗಳಿಸಿದರು. ಅಂತಹ ಪರಿಸ್ಥಿತಿಯಲ್ಲಿ, ಹೆಟ್ಮೆಯರ್, ಆಡುವ XI ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸುವುದರ ಜೊತೆಗೆ, ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.

ಕುಲದೀಪ್ ಕಮಾಲ್ ನಾವು ಬೌಲಿಂಗ್ ಬಗ್ಗೆ ಮಾತನಾಡುವುದಾದರೆ, ರಾಜಸ್ಥಾನದಲ್ಲಿ ಹೊಸ ಪ್ರವೇಶ ಪಡೆದ ಭಾರತದ ಅತ್ಯುತ್ತಮ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ತಮ್ಮ ಸಾಮರ್ಥ್ಯವನ್ನು ತೋರಿಸಿದರು. ಟೀಮ್ ಬ್ಲೂ ಪರ ಆಡಿದ ಚಹಾಲ್ 4 ಓವರ್​ಗಳಲ್ಲಿ 30 ರನ್ ನೀಡಿ 2 ವಿಕೆಟ್ ಪಡೆದರು. ಆದರೆ ಹೆಚ್ಚು ಗಮನ ಸೆಳೆದದ್ದು 25 ವರ್ಷದ ಅಪರಿಚಿತ ಬೌಲರ್ ಕುಲದೀಪ್ ಸೇನ್. ಮಧ್ಯಪ್ರದೇಶದ ಈ ಬಲಗೈ ಮಧ್ಯಮ ವೇಗದ ಬೌಲರ್ ಅನ್ನು ರಾಯಲ್ಸ್ 20 ಲಕ್ಷದ ಮೂಲ ಬೆಲೆಗೆ ಖರೀದಿಸಿತು. ಪಿಂಕ್ ತಂಡದ ಪರ ಕುಲದೀಪ್ 3 ಓವರ್​ಗಳಲ್ಲಿ 15 ರನ್ ಮಾತ್ರ ನೀಡಿ 3 ವಿಕೆಟ್ ಪಡೆದರು. ಇದೀಗ ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ನವದೀಪ್ ಸೈನಿ ಅವರಂತಹ ಬೌಲರ್​ಗಳ ಸಮ್ಮುಖದಲ್ಲಿ ಕುಲದೀಪ್​ಗೆ ಅವಕಾಶ ಸಿಗಲಿದೆಯೇ ಎಂಬುದು ಮುಂದಿನ ವಾರಗಳಲ್ಲಿ ಗೊತ್ತಾಗಲಿದೆ. ರಾಯಲ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 29 ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

ಇದನ್ನೂ ಓದಿ:IPL 2022: ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ 23 ಸ್ಟಾರ್ ಆಟಗಾರರು ಅಲಭ್ಯ

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು