IPL 2022: ಇಬ್ಬರು ಆಟಗಾರರು ಆಯ್ಕೆಗೆ ಲಭ್ಯ: ಡೆಲ್ಲಿ ಕ್ಯಾಪಿಟಲ್ಸ್ ಈಗ ಮತ್ತಷ್ಟು ಬಲಿಷ್ಠ
Delhi Capitals: ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಹೀಗಿದೆ: ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2022) ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ಗೆ ಸೋಲುಣಿಸಿ ಶುಭಾರಂಭ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 2ನೇ ಪಂದ್ಯದಲ್ಲಿ ಸೋಲನುಭವಿಸಿತ್ತು. ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ ರಿಷಭ್ ಪಂತ್ ಪಡೆ ಉತ್ತಮ ಹೋರಾಟ ನಡೆಸಿದರೂ ಅಂತಿಮವಾಗಿ 14 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿಗೆ ಮುಖ್ಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಸ್ಟಾರ್ ಆಟಗಾರರ ಅನುಪಸ್ಥಿತಿ. ಏಕೆಂದರೆ ಈ ಬಾರಿ ತಂಡದಲ್ಲಿರುವ ಅನ್ರಿಕ್ ನೋಕಿಯಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಲುಂಗಿ ಎನ್‌ಗಿಡಿ ಇನ್ನೂ ಕೂಡ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿಯೇ ಮೊದಲೆರಡು ಪಂದ್ಯಗಳಲ್ಲಿ ಡೆಲ್ಲಿಗೆ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ಸಾಧ್ಯವಾಗಿರಲಿಲ್ಲ.
ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯಕ್ಕೂ ಮುನ್ನ ಸ್ಟಾರ್ ಆಟಗಾರರ ಆಗಮನವಾಗಿದೆ. ಅನುಭವಿ ಆಟಗಾರ ಡೇವಿಡ್ ವಾರ್ನರ್ ಈಗಾಗಲೇ ಮುಂಬೈಗೆ ಬಂದಿಳಿದಿದ್ದಾರೆ. ಅಷ್ಟೇ ಅಲ್ಲದೆ ಲಕ್ನೋ ವಿರುದ್ಧದ ಪಂದ್ಯಕ್ಕೆ ಆಯ್ಕೆಗೆ ಲಭ್ಯರಿರಲಿದ್ದಾರೆ. ಇನ್ನು ಗಾಯಗೊಂಡಿದ್ದ ವೇಗಿ ಅನ್ರಿಕ್ ನೋಕಿಯಾ ಕೂಡ ಇದೀಗ ಚೇತರಿಸಿಕೊಂಡಿದ್ದು, ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಆಡಲಿದ್ದಾರೆ.
ಡೇವಿಡ್ ವಾರ್ನರ್ ಹಾಗೂ ಅನ್ರಿಕ್ ನೋಕಿಯಾ ಮುಂದಿನ ಪಂದ್ಯದ ಆಯ್ಕೆಗೆ ಲಭ್ಯವಿರುತ್ತಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದಾರೆ. ಇದರೊಂದಿಗೆ ಈ ಇಬ್ಬರು ಆಟಗಾರರನ್ನು ಲಕ್ನೋ ವಿರುದ್ದದ ಪಂದ್ಯದಲ್ಲಿ ಪಾಂಟಿಂಗ್ ಕಣಕ್ಕಿಳಿಸುವುದು ಬಹುತೇಕ ಖಚಿತ ಎನ್ನಬಹುದು. ಇತ್ತ ವಾರ್ನರ್ ಆರಂಭಿಕನಾಗಿ ಕಣಕ್ಕಿಳಿದರೆ, ಅನ್ರಿಕ್ ನೋಕಿಯಾ ಮೊದಲ ಓವರ್ ಎಸೆಯಲಿದ್ದಾರೆ. ಇದರೊಂದಿಗೆ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿನ ಆರಂಭಿಕ ಸಮಸ್ಯೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಸರಿದೂಗಿಸಲಿದೆ.
ಈ ಮೂಲಕ ಕಳೆದ ಬಾರಿಯಂತೆ ಮತ್ತೊಮ್ಮೆ ಬಲಿಷ್ಠ ಪಡೆಯಾಗಿ ಎದುರಾಳಿಗೆ ಕಠಿಣ ಸವಾಲೊಡ್ಡುವ ವಿಶ್ವಾಸದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್ ತಂಡ. ಇದಾಗ್ಯೂ ಗಾಯಗೊಂಡಿರುವ ಮತ್ತೋರ್ವ ಆಸ್ಟ್ರೇಲಿಯಾ ಆಟಗಾರ ಮಿಚೆಲ್ ಮಾರ್ಷ್ ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ಸೇರಿದ್ದಾರೆ. ಇದಾಗ್ಯೂ ಚೇತರಿಸಿಕೊಳ್ಳದ ಕಾರಣ ಒಂದೆರೆಡು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ.
ಸದ್ಯ ಗೆಲುವಿನ ಖಾತೆ ತೆರೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ನಿರೀಕ್ಷೆಯಿದೆ. ಏಕೆಂದರೆ ಅನುಭವಿಗಳಾದ ಡೇವಿಡ್ ವಾರ್ನರ್ ಹಾಗೂ ಅನ್ರಿಕ್ ನೋಕಿಯಾ ಅವರ ಲಭ್ಯತೆಯು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಲವನ್ನು ಹೆಚ್ಚಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ ಹೀಗಿದೆ: ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅಶ್ವಿನ್ ಹೆಬ್ಬಾರ್, ಅಶ್ವಿನ್ ಹೆಬ್ಬಾರ್ , ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಲುಂಗಿ ಎನ್‌ಗಿಡಿ, ಟಿಮ್ ಸೀಫರ್ಟ್, ಪ್ರವೀಣ್ ದುಬೆ, ರೋವ್‌ಮನ್ ಪೊವೆಲ್, ಲಲಿತ್ ಯಾದವ್.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು