IPL 2022: ಐಪಿಎಲ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದ ಡೆಲ್ಲಿ , ಲಕ್ನೋ ಸೂಪರ್ ಜೈಂಟ್ಸ್
IPL 2022: ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೆ ಗೌತಮ್, ರವಿ ಬಿಷ್ಣೋಯ್, ಅವೇಶ್ ಖಾನ್.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 (IPL 2022)ಆರಂಭಕ್ಕೂ ಮುನ್ನೇ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಂಕಷ್ಟಕ್ಕೆ ಸಿಲುಕಿದೆ. ಬಲಿಷ್ಠ ತಂಡ ಕಟ್ಟಿದ ಉಭಯ ತಂಡಗಳ ಸ್ಟಾರ್ ಆಟಗಾರರು ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತವಾಗಿದೆ. ಐಪಿಎಲ್ ಸೀಸನ್ 15 ಮಾರ್ಚ್ 26 ರಿಂದ ಶುರುವಾಗಲಿದ್ದು, ಇದೇ ವೇಳೆ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್, ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಬಾಂಗ್ಲಾದೇಶ ತಂಡಗಳು ಸರಣಿ ಆಡಲಿದೆ. ಇದರಿಂದ ಈ ತಂಡಗಳಲ್ಲಿರುವ ಆಟಗಾರರು ಐಪಿಎಲ್ನ ಮೊದಲ ವಾರದಲ್ಲಿ ಕಣಕ್ಕಿಳಿಯಲಾಗುವುದಿಲ್ಲ. ಹೀಗೆ 10 ತಂಡಗಳಲ್ಲಿನ ಒಟ್ಟು 26 ಆಟಗಾರರು ಅಲಭ್ಯರಾಗಲಿದ್ದಾರೆ.
ವಿಶೇಷ ಎಂದರೆ ಇವರಲ್ಲಿ ಬಹುತೇಕ ಆಟಗಾರರು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪ್ಲೇಯರ್ಸ್. ಹೀಗಾಗಿ ಮೊದಲ ವಾರದಲ್ಲಿ ಈ ಎರಡು ತಂಡಗಳಿಗೆ ಸ್ಟಾರ್ ಆಟಗಾರರ ಅಲಭ್ಯತೆ ಕಾಡಲಿದೆ. ಅದರಲ್ಲೂ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಟ್ಟು 7 ವಿದೇಶಿ ಆಟಗಾರರನ್ನು ಹೊಂದಿದೆ. ಅದರಲ್ಲಿ 5 ಆಟಗಾರರು ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ.
ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಡೇವಿಡ್ ವಾರ್ನರ್ ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ), ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ (ದಕ್ಷಿಣ ಆಫ್ರಿಕಾ) ಮುಸ್ತಾಫಿಜುರ್ ರೆಹಮಾನ್ (ಬಾಂಗ್ಲಾದೇಶ) ಐಪಿಎಲ್ನ ಮೊದಲ ವಾರದ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇನ್ನು ಡೆಲ್ಲಿ ಪರ ಮೊದಲ ವಾರದಲ್ಲಿ ಲಭ್ಯರಿರುವ ವಿದೇಶಿ ಆಟಗಾರರೆಂದರೆ ವೆಸ್ಟ್ ಇಂಡಿಯನ್ ಆಲ್-ರೌಂಡರ್ ರೋವ್‌ಮನ್ ಪೊವೆಲ್ ಮತ್ತು ನ್ಯೂಜಿಲೆಂಡ್ ವಿಕೆಟ್ ಕೀಪರ್-ಬ್ಯಾಟರ್ ಟಿಮ್ ಸೀಫರ್ಟ್ ಮಾತ್ರ.
ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ 5 ವಿದೇಶಿ ಆಟಗಾರರು ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ. ಅದರಂತೆ ಮಾರ್ಕಸ್ ಸ್ಟೊಯಿನಿಸ್ (ಆಸ್ಟ್ರೇಲಿಯಾ), ಜೇಸನ್ ಹೋಲ್ಡರ್, ಕೈಲ್ ಮೇಯರ್ಸ್ (ವೆಸ್ಟ್ ಇಂಡೀಸ್), ಮಾರ್ಕ್ ವುಡ್ (ಇಂಗ್ಲೆಂಡ್), ಕ್ವಿಂಟನ್ ಡಿ ಕಾಕ್ (ಸೌತ್ ಆಫ್ರಿಕಾ) ಅವರು ಮೊದಲ ವಾರದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡುವುದಿಲ್ಲ ಎಂದೇ ಹೇಳಬಹುದು.
ಅಂದರೆ ಲಕ್ನೋ ತಂಡದಲ್ಲಿ ಮೊದಲ ವಾರದಲ್ಲಿ ವಿದೇಶಿ ಆಟಗಾರರಾಗಿ ಎವಿನ್ ಲೂಯಿಸ್ (ವೆಸ್ಟ್ ಇಂಡೀಸ್), ದುಷ್ಮಂತ ಚಮೀರ (ಶ್ರೀಲಂಕಾ) ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್ ಆರಂಭಿಕ ಪಂದ್ಯಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಸ್ಟಾರ್ ಆಟಗಾರರ ಅಲಭ್ಯತೆಯು ಹಿನ್ನಡೆಯಾಗಿ ಪರಿಣಮಿಸಲಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೆ ಗೌತಮ್, ರವಿ ಬಿಷ್ಣೋಯ್, ಅವೇಶ್ ಖಾನ್, ಮಾರ್ಕ್ ವುಡ್, ದುಷ್ಮಂತ ಚಮೀರಾ, ಅಂಕಿತ್ ರಾಜ್‌ಪೂತ್, ಶಹಬಾಜ್ ನದೀಮ್, ಮನನ್ ವೋಹ್ರಾ, ಮೊಹ್ಸಿನ್ ಬದೋನಿ, ಕರಣ್ ಶರ್ಮಾ, ಮಯಾಂಕ್ ಯಾದವ್, ಕೈಲ್ ಮೇಯರ್ಸ್, ಕೆ ಗೌತಮ್, ಎವಿನ್ ಲೂಯಿಸ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅಶ್ವಿನ್ ಹೆಬ್ಬಾರ್, ಅಶ್ವಿನ್ ಹೆಬ್ಬಾರ್ , ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಲುಂಗಿ ಎನ್‌ಗಿಡಿ, ಟಿಮ್ ಸೀಫರ್ಟ್, ಪ್ರವೀಣ್ ದುಬೆ, ರೋವ್‌ಮನ್ ಪೊವೆಲ್, ಲಲಿತ್ ಯಾದವ್.
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್