AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಕೊನೆಗೂ ಅಬ್ಬರಿಸಿದ ಡೇವಿಡ್ ವಾರ್ನರ್

IPL 2022: ಭಾರತದ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ವಾರ್ನರ್ ಪವರ್​ಪ್ಲೇನಲ್ಲಿ 68 ರನ್ ಕಲೆಹಾಕಿದ್ದರು.

David Warner: ಕೊನೆಗೂ ಅಬ್ಬರಿಸಿದ ಡೇವಿಡ್ ವಾರ್ನರ್
david warner
TV9 Web
| Updated By: ಝಾಹಿರ್ ಯೂಸುಫ್|

Updated on: Apr 10, 2022 | 6:01 PM

Share

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯನ್ನು ನೋಡಿದರೆ ಅಗ್ರ-5ರಲ್ಲಿ ಒಬ್ಬ ವಿದೇಶಿ ಆಟಗಾರ ಮಾತ್ರ ಇದ್ದಾರೆ. ಹೌದು, ಅದು ಡೇವಿಡ್ ವಾರ್ನರ್ . ವಾರ್ನರ್ ಐಪಿಎಲ್‌ನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಅವರು ತಮ್ಮ ಐಪಿಎಲ್ ವೃತ್ತಿಜೀವನವನ್ನು ಡೆಲ್ಲಿ ಫ್ರಾಂಚೈಸ್‌ನೊಂದಿಗೆ ಇನಿಂಗ್ಸ್​ ಪ್ರಾರಂಭಿಸಿದರು. ಆ ಬಳಿಕ ಸನ್‌ರೈಸರ್ಸ್ ಹೈದರಾಬಾದ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಡೇವಿಡ್ ವಾರ್ನರ್ ನಾಯಕತ್ವದಲ್ಲಿ 2016 ರಲ್ಲಿ ಎಸ್​ಆರ್​ಹೆಚ್​ ಚಾಂಪಿಯನ್ ಪಟ್ಟ ಅಲಂಕರಿಸಿತು. ಇದೀಗ ವಾರ್ನರ್ ಮತ್ತೆ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದ್ದಾರೆ. ಅಷ್ಟೇ ಅಲ್ಲದೆ ಹಳೆಯ ತಂಡದ ಪರ 2ನೇ ಪಂದ್ಯದಲ್ಲೇ ಅಬ್ಬರಿಸಿದ್ದಾರೆ.

ಕಳೆದ ಸೀಸನ್​ನಲ್ಲಿ ಸನ್‌ರೈಸರ್ಸ್ ವಾರ್ನರ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿತು. ಬ್ಯಾಟಿಂಗ್​ನಲ್ಲಿ ವಿಫಲವಾಗಿದ್ದ ಕಾರಣ ಅವರನ್ನು ತಂಡದಿಂದ ಕೂಡ ಕೈಬಿಡಲಾಗಿತ್ತು. ಪ್ಲೇಯಿಂಗ್ 11 ನಲ್ಲೂ ಸ್ಥಾನ ಪಡೆಯಲು ವಿಫಲರಾಗಿದ್ದ ವಾರ್ನರ್ ಅವರನ್ನು ನಿರೀಕ್ಷೆಯಂತೆ ಎಸ್​ಆರ್​ಹೆಚ್ ಫ್ರಾಂಚೈಸ್ ಉಳಿಸಿಕೊಳ್ಳಲಿಲ್ಲ. ಹೀಗಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದರು.

ಅದರಂತೆ ಈ ಬಾರಿ ಡೆಲ್ಲಿ ಪರ ಹೊಸ ಇನಿಂಗ್ಸ್ ಆರಂಭಿಸಿದ್ದ ವಾರ್ನರ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಹೀಗಾಗಿ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ಮೊದಲ ಪಂದ್ಯವಾಡಿದ್ದರೂ ಕೇವಲ ನಾಲ್ಕು ರನ್ ಗಳಿಸಿ ಔಟಾಗಿದ್ದರು. ಆದರೆ ಕೋಲ್ಕತ್ತಾ ವಿರುದ್ಧ ಮಾತ್ರ ತಮ್ಮ ಎಂದಿನ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಾರ್ನರ್ ತಮ್ಮ ಎಂಟ್ರಿಯನ್ನು ಸಾರಿದ್ದಾರೆ.

ಭಾರತದ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ವಾರ್ನರ್ ಪವರ್​ಪ್ಲೇನಲ್ಲಿ 68 ರನ್ ಕಲೆಹಾಕಿದ್ದರು. ಅಲ್ಲದೆ ಮೊದಲ ವಿಕೆಟ್​ಗೆ 93 ರನ್​ಗಳ ಜೊತೆಯಾಟವಾಡಿದ್ದರು. ಇದಾದ ನಂತರವೂ ವಾರ್ನರ್ ರನ್ ಗಳಿಸುತ್ತಲೇ ಸಾಗಿದರು. ಅಲ್ಲದೆ 13ನೇ ಓವರ್‌ನ ಎರಡನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಈ ಸೀಸನ್​ನ ಮೊದಲ ಅರ್ಧಶತಕ ಮತ್ತು ಐಪಿಎಲ್ ವೃತ್ತಿಜೀವನದ 51ನೇ ಅರ್ಧಶತಕವನ್ನು ಪೂರ್ಣಗೊಳಿಸಿದರು. ಕೊನೆಯ ಓವರ್‌ನಲ್ಲಿ ಇನ್ನಿಂಗ್ಸ್ ಅನ್ನು ವೇಗಗೊಳಿಸುವ ಪ್ರಯತ್ನದಲ್ಲಿ ವಾರ್ನರ್ ಔಟಾದರು. ಕೇವಲ 45 ಎಸೆತಗಳನ್ನು ಎದುರಿಸಿದ್ದ 2 ಸಿಕ್ಸ್​, 6 ಬೌಂಡರಿಯೊಂದಿಗೆ 61 ರನ್ ಗಳಿಸಿ ಮಿಂಚಿದ್ದಾರೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ ಪರ ಮತ್ತೆ ಅಬ್ಬರಿಸಲಾರಂಭಿಸಿದ್ದಾರೆ.

ಇದನ್ನೂ ಓದಿ: Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ