IPL 2022 DC vs RCB playing XI: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11

DC vs RCB playing XI: ಉಭಯ ತಂಡಗಳು ಇದುವರೆಗೆ 26 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ತಂಡವು 15 ಬಾರಿ ಗೆದ್ದಿದೆ. ಇನ್ನು ಡೆಲ್ಲಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ.

IPL 2022 DC vs RCB playing XI: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11
IPL 2022 DC vs RCB playing XI
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2022 | 7:08 PM

ಐಪಿಎಲ್​ನ 27ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಡೆಲ್ಲಿ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಈಗಾಗಲೇ ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಕೂಡ ಗೆಲ್ಲುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಆರ್​ಸಿಬಿ 5 ಪಂದ್ಯಗಳಲ್ಲಿ 3 ಜಯ ಸಾಧಿಸಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಸಿಎಸ್​​ಕೆ ವಿರುದ್ದ ಸೋತಿತ್ತು. ಇನ್ನು ಡೆಲ್ಲಿ ತಂಡವು ಕಳೆದ ಪಂದ್ಯದಲ್ಲಿ ಬಲಿಷ್ಠ ಕೆಕೆಆರ್ ತಂಡಕ್ಕೆ ಸೋಲುಣಿಸಿತ್ತು. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇನ್ನು ಉಭಯ ತಂಡಗಳು ಇದುವರೆಗೆ 26 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ತಂಡವು 15 ಬಾರಿ ಗೆದ್ದಿದೆ. ಇನ್ನು ಡೆಲ್ಲಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಕಳೆದ ಸೀಸನ್​ನಲ್ಲಿ 2 ಪಂದ್ಯಗಳಲ್ಲೂ ಆರ್​ಸಿಬಿ ತಂಡವೇ ಗೆದ್ದಿದೆ. ಅಂದರೆ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆರ್​ಸಿಬಿ ಮೇಲುಗೈ ಸಾಧಿಸುತ್ತಾ ಬಂದಿದೆ.

ಈ ಬಾರಿ ಎರಡೂ ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ. ಅದರಂತೆ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಎಂಟ್ರಿ ಕೊಟ್ಟಿದ್ದರೆ, ಡೆಲ್ಲಿ ತಂಡದಲ್ಲಿ ಡೇವಿಡ್ ವಾರ್ನರ್ ಇದ್ದಾರೆ. ಹಾಗೆಯೇ ಇತ್ತ ವಿರಾಟ್ ಕೊಹ್ಲಿ ಇದ್ದರೆ, ಅತ್ತ ರಿಷಭ್ ಪಂತ್ ಇದ್ದಾರೆ. ಸ್ಪೋಟಕ ಬ್ಯಾಟ್ಸ್​ಮನ್ ಆಗಿ ಪೃಥ್ವಿ ಶಾ ಇದ್ದರೆ, ಆರ್​ಸಿಬಿ ತಂಡದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್ ಇದ್ದಾರೆ. ಇನ್ನು ಬೌಲಿಂಗ್​ನಲ್ಲಿ ಆರ್​ಸಿಬಿ ಪರ ಜೋಶ್ ಹ್ಯಾಝಲ್​ವುಡ್ ಇದ್ದರೆ, ಡೆಲ್ಲಿ ತಂಡದಲ್ಲಿ ಅನ್ರಿಕ್ ನೋಕಿಯಾ ಇದ್ದಾರೆ. ಹೀಗಾಗಿ ಎರಡೂ ತಂಡಗಳು ಸಮಬಲ ಹೊಂದಿದೆ ಎಂದೇ ಹೇಳಬಹುದು.

ಆರ್​ಸಿಬಿ ತಂಡದಲ್ಲಿ ಒಂದು ಬದಲಾವಣೆ: ಈ ಪಂದ್ಯಕ್ಕಾಗಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅದರಂತೆ ಮಿಚೆಲ್ ಮಾರ್ಷ್ ಡೆಲ್ಲಿ ಕ್ಯಾಪಿಟಲ್ಸ್ ಪರ ಇಂದಿನ ಪಂದ್ಯದಲ್ಲಿ ಪಾದರ್ಪಣೆ ಮಾಡಿದ್ದಾರೆ. ಹಾಗೆಯೇ ಆರ್​ಸಿಬಿ ತಂಡಕ್ಕೆ ಹರ್ಷಲ್ ಪಟೇಲ್ ವಾಪಾಸಾಗಿದ್ದು, ಹೀಗಾಗಿ ಆಕಾಶ್ ದೀಪ್ ಹೊರಗುಳಿದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಮೊಹಮ್ಮದ್ ಸಿರಾಜ್

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ನಾಯಕ), ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ