IPL 2022 DC vs RR Live Streaming: ಡೆಲ್ಲಿ-ರಾಜಸ್ಥಾನ ಮುಖಾಮುಖಿ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 DC vs RR Live Streaming: ರಾಜಸ್ಥಾನ್ ರಾಯಲ್ಸ್ ತಂಡ ಕೂಡ ತನ್ನ ಕೊನೆಯ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಏಳು ರನ್‌ಗಳಿಂದ ಸೋಲಿಸಿತು. ರಾಜಸ್ಥಾನ್ ರಾಯಲ್ಸ್ ಆರು ಪಂದ್ಯಗಳಲ್ಲಿ 8 ಅಂಕಗಳನ್ನು ಹೊಂದಿದ್ದರೆ ದೆಹಲಿ ಆರು ಪಂದ್ಯಗಳಲ್ಲಿ ಆರು ಅಂಕಗಳನ್ನು ಹೊಂದಿದೆ.

IPL 2022 DC vs RR Live Streaming: ಡೆಲ್ಲಿ-ರಾಜಸ್ಥಾನ ಮುಖಾಮುಖಿ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
DC vs RR
Follow us
| Edited By: ಪೃಥ್ವಿಶಂಕರ

Updated on: Apr 21, 2022 | 5:50 PM

ಐಪಿಎಲ್ 2022 (IPL 2022)ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಶುಕ್ರವಾರ ರಾಜಸ್ಥಾನ ರಾಯಲ್ಸ್ (Rajasthan Royals) ತಂಡವನ್ನು ಎದುರಿಸಲಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಡೆಲ್ಲಿ ತಂಡ ಕೊರೊನಾ ದಾಳಿಗೆ ತುತ್ತಾಗಿದ್ದರೂ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಪಂದ್ಯವನ್ನಾಡಿದೆ. ಆದರೆ, ಅದರ ಪರಿಣಾಮ ಅವರ ಪ್ರದರ್ಶನದ ಮೇಲೆ ಯಾವುದೇ ಪರಿಣಾಮ ಬೀರದೆ ಪಂಜಾಬ್ ಕಿಂಗ್ಸ್ ತಂಡವನ್ನು ಸುಲಭವಾಗಿ ಮಣಿಸಿತು. ರಾಜಸ್ಥಾನ್ ರಾಯಲ್ಸ್ ತಂಡ ಕೂಡ ತನ್ನ ಕೊನೆಯ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಏಳು ರನ್‌ಗಳಿಂದ ಸೋಲಿಸಿತು. ರಾಜಸ್ಥಾನ್ ರಾಯಲ್ಸ್ ಆರು ಪಂದ್ಯಗಳಲ್ಲಿ 8 ಅಂಕಗಳನ್ನು ಹೊಂದಿದ್ದರೆ ದೆಹಲಿ ಆರು ಪಂದ್ಯಗಳಲ್ಲಿ ಆರು ಅಂಕಗಳನ್ನು ಹೊಂದಿದೆ.

ಕೊರೊನಾ ಬಿಕ್ಕಟ್ಟಿನ ನಡುವೆಯೂ, ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಒಂಬತ್ತು ವಿಕೆಟ್‌ಗಳಿಂದ ಪಂಜಾಬ್ ತಂಡವನ್ನು ಸೋಲಿಸಿತು. ದೆಹಲಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಟಿಮ್ ಸೀಫರ್ಟ್ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದ್ದರಿಂದ ಈ ಪಂದ್ಯ ಪುಣೆ ಬದಲಿಗೆ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಿತು. ಪಂತ್ ತಂಡದ ಮೂವರು ಸ್ಪಿನ್ನರ್‌ಗಳ ಅದ್ಭುತ ಪ್ರದರ್ಶನದಿಂದಾಗಿ ತಂಡವು ಪಂಜಾಬ್ ಕಿಂಗ್ಸ್ ಅನ್ನು 115 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಸಾಧ್ಯವಾಯಿತು. ಆರಂಭಿಕರಾದ ಡೇವಿಡ್ ವಾರ್ನರ್ (ಔಟಾಗದೆ 60) ಮತ್ತು ಪೃಥ್ವಿ ಶಾ ಅವರ ಅಬ್ಬರದ ಇನ್ನಿಂಗ್ಸ್​ನಿಂದ ತಂಡವು 10.3 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗಳ ಆರಾಮದಾಯಕ ಜಯವನ್ನು ದಾಖಲಿಸಿತು.

ರಾಜಸ್ಥಾನ ಕೂಡ ಉತ್ತಮ ಲಯದಲ್ಲಿದೆ ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ ಜೋಸ್ ಬಟ್ಲರ್ ಅವರ ಎರಡನೇ ಶತಕದ ಜೊತೆಗೆ, ಯುಜ್ವೇಂದ್ರ ಚಹಾಲ್ ಐದು ವಿಕೆಟ್ ಕಬಳಿಸುವ ಮೂಲಕ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ಏಳು ರನ್‌ಗಳಿಂದ ಸೋಲಿಸಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ತಲುಪಿತು. ಎರಡು ವಿಕೆಟ್‌ಗೆ 148 ರನ್ ಗಳಿಸಿದ ನಂತರ ನೈಟ್ ರೈಡರ್ಸ್ ಒಂದು ಸಮಯದಲ್ಲಿ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿತ್ತು ಆದರೆ ತಂಡವು 62 ರನ್‌ಗಳಿಗೆ ತಮ್ಮ ಕೊನೆಯ ಎಂಟು ವಿಕೆಟ್‌ಗಳನ್ನು ಕಳೆದುಕೊಂಡಿತು. ರಾಯಲ್ಸ್ ನೀಡಿದ 218 ರನ್​ಗಳ ಗುರಿಯನ್ನು ಬೆನ್ನತ್ತಿದ ನೈಟ್ ರೈಡರ್ಸ್ ತಂಡವು ಚಹಲ್ ಸ್ಪಿನ್ ಮಾಂತ್ರಿಕತೆಯ ಮುಂದೆ ಶ್ರೇಯಸ್ ಮತ್ತು ಫಿಂಚ್ ಎರಡನೇ ವಿಕೆಟ್ ಜೊತೆಯಾಟದಲ್ಲಿ 107 ರನ್​ಗಳ ಜೊತೆಯಾಟದ ಹೊರತಾಗಿಯೂ 19.4 ಓವರ್​ಗಳಲ್ಲಿ 210 ರನ್ ಗಳಿಸಲಷ್ಟೇ ಶಕ್ತವಾಯಿತು. ಉಮೇಶ್ ಯಾದವ್ ಒಂಬತ್ತು ಎಸೆತಗಳಲ್ಲಿ 21 ರನ್ ಗಳಿಸಿದರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.

ಪಂದ್ಯದ ಬಗೆಗಿನ ಪೂರ್ಣ ವಿವರ ಹೀಗಿದೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವು ಶುಕ್ರವಾರ, ಏಪ್ರಿಲ್ 22 ರಂದು ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ? ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ದೆಹಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ನೋಡಬಹುದು.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು? Disney+Hotstar ನಲ್ಲಿ ಚಂದಾದಾರಿಕೆಯೊಂದಿಗೆ ದೆಹಲಿ ಕ್ಯಾಪಿಟಲ್ಸ್ vs ರಾಜಸ್ಥಾನ ರಾಯಲ್ಸ್ ಪಂದ್ಯವನ್ನು ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಇದನ್ನೂ ಓದಿ:IPL 2022: ಕೊಹ್ಲಿ- ರೋಹಿತ್ ಫ್ಲಾಪ್! ವಿದೇಶಿ ಆಟಗಾರರ ಆರ್ಭಟ; ದೇಶಿ ಆಟಗಾರರ ಮೇಲೆ ಫ್ಯಾನ್ಸ್​ ಗರಂ

ತಾಜಾ ಸುದ್ದಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ