AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ತಂದೆ ಮತ್ತು ಮಗ ಮುಖಾಮುಖಿ: ಗೆದ್ದವರು ಯಾರು?

IPL 2022: ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರದರ್ಶನವು ಇಲ್ಲಿಯವರೆಗೆ ಉತ್ತಮವಾಗಿಲ್ಲ. ಡೆಲ್ಲಿ ಆಡಿದ 3 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ.

IPL 2022: ಐಪಿಎಲ್​ನಲ್ಲಿ ತಂದೆ ಮತ್ತು ಮಗ ಮುಖಾಮುಖಿ: ಗೆದ್ದವರು ಯಾರು?
Ricky Ponting
TV9 Web
| Edited By: |

Updated on: Apr 10, 2022 | 4:32 PM

Share

IPL ನಲ್ಲಿ ಸಹೋದರರು ಆಡುತ್ತಿರುವುದು ನೀವು ನೋಡಿರುತ್ತೀರಿ. ಈ ಹಿಂದೆ ಪಠಾಣ್ ಬ್ರದರ್ಸ್, ಮಾರ್ಷ್ ಬ್ರದರ್ಸ್, ಈಗ ಪಾಂಡ್ಯ ಬ್ರದರ್ಸ್​..ಹೀಗೆ ಐಪಿಎಲ್​ನಲ್ಲಿ ಸಹೋದರರ ಸವಾಲ್ ಮುಂದುವರೆಯುತ್ತಿದೆ. ಆದರೆ ಅಪ್ಪ-ಮಗ ಇದುವರೆಗೆ ಕಾಣಿಸಿಕೊಂಡಿಲ್ಲ. ಒಂದಾರ್ಥದಲ್ಲಿ ಅಪ್ಪ-ಮಗ ಒಂದೇ ಸಮಯದಲ್ಲಿ ಆಡುವುದು ಕೂಡ ಕಷ್ಟ ಎಂದೇ ಹೇಳಬಹುದು. ಇದಾಗ್ಯೂ ಅಭ್ಯಾಸದ ವೇಳೆ ಅಪ್ಪ-ಮಗ ಪರಸ್ಪರ ಮುಖಾಮುಖಿಯಾಗಿದ್ದಾರೆ. ಈ ವೇಳೆ ತಂದೆಯ ಕೈಯಲ್ಲಿ ಚೆಂಡು ಇತ್ತು ಮತ್ತು ಮಗನ ಬಳಿ ಬ್ಯಾಟ್ ಇತ್ತು. ಮಗ ತನ್ನ ತಂದೆಯ ಪ್ರತಿಯೊಂದು ಚೆಂಡನ್ನು ಬಾರಿಸುವ ಮೂಲಕ ಗಮನ ಸೆಳೆದನು. ತಂದೆಯೂ ಮಗನ ಬ್ಯಾಟಿಂಗ್​ನಿಂದ ತುಂಬಾ ಸಂತೋಷಪಟ್ಟರು. ಅಪ್ಪ-ಮಗನ ಈ ಕ್ರಿಕೆಟ್ ಪಂದ್ಯ ಮುಗಿದಾಗ ಇಬ್ಬರೂ ಒಬ್ಬರಿಗೊಬ್ಬರು ಹೈ-ಫೈ ಕೂಡ ಕೊಟ್ಟರು. ಇಂತಹ ಕಾಂಬೊ ಕಂಡು ಬಂದಿದ್ದು ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್​ನಲ್ಲಿ. ಅದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ರಿಕಿ ಪಾಂಟಿಂಗ್ ಹಾಗೂ ಮಗ ಫ್ಲೆಚರ್.

ಡೆಲ್ಲಿ ಕ್ಯಾಪಿಟಲ್ಸ್​ನ ಅಭ್ಯಾಸದ ವೇಳೆ ಪಾಂಟಿಂಗ್ ಮತ್ತು ಫ್ಲೆಚರ್ ಕೂಡ ಕ್ರಿಕೆಟ್ ಆಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆಗಿನ ಪಂದ್ಯದ ಮೊದಲು ಅಭ್ಯಾಸ ನಡೆಸುತ್ತಿದ್ದಾಗ ಪಾಂಟಿಂಗ್ ಮತ್ತು ಪುಟ್ಟ ಫ್ಲೆಚರ್ ಕೂಡ ಮುಖಾಮುಖಿಯಾದರು. ತಂದೆ ಪುಟ್ಟ ಮಗನಿಗೆ ಕ್ರಿಕೆಟ್ ಪಾಠ ಹೇಳಿಕೊಟ್ಟರು. ಈ ವಿಡಿಯೋವನ್ನು ಡೆಲ್ಲಿ ಕ್ಯಾಪಿಟಲ್ಸ್​ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಫ್ಲೆಚರ್ ತನ್ನ ತಂದೆಯ ಚೆಂಡುಗಳನ್ನು ಮ್ಯಾಶ್ ಮಾಡುತ್ತಿರುವುದನ್ನು ನೀವು ನೋಡಬಹುದು.

ಡೆಲ್ಲಿ ಕ್ಯಾಪಿಟಲ್ಸ್​ಗೆ ಸತತ ಸೋಲು: ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರದರ್ಶನವು ಇಲ್ಲಿಯವರೆಗೆ ಉತ್ತಮವಾಗಿಲ್ಲ. ಡೆಲ್ಲಿ ಆಡಿದ 3 ಪಂದ್ಯಗಳಲ್ಲಿ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದ 2 ರಲ್ಲಿ ಸೋತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಸೋಲಿಸಿತು. ಆದರೆ ಆ ಬಳಿಕ ಎರಡು ಹೊಸ ತಂಡಗಳಾದ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿದ್ದಾರೆ.

ಇದನ್ನೂ ಓದಿ: Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​