AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು…ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್

IPL 2022: 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು...ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್
Dhanashree Verma
TV9 Web
| Updated By: ಝಾಹಿರ್ ಯೂಸುಫ್|

Updated on: Apr 06, 2022 | 6:18 PM

Share

ಐಪಿಎಲ್​ನ 13ನೇ (IPL 2022) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಜಯ ಸಾಧಿಸಿದೆ. ಆರ್​ಆರ್ ತಂಡ ನೀಡಿದ 170 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ 19.1 ಓವರ್​ನಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಗೆಲುವು ತನ್ನದಾಗಿಸಿಕೊಂಡಿತು. ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೂ ಆರ್​ಸಿಬಿ ತಂಡದ ಮಾಜಿ ಸ್ಪಿನ್ನರ್ ಯಜುವೇಂದ್ರ ಚಹಲ್ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

ಇತ್ತ ಚಹಲ್ ವಿಕೆಟ್​ ಪಡೆಯುತ್ತಿದ್ದಂತೆ ಅತ್ತ ಪತ್ನ ಧನಶ್ರೀ ವರ್ಮಾ ಮೈಮರೆತು ಸಂಭ್ರಮಿಸಿದ್ದರು. ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿದ್ದ ಚಹಲ್ ಮರು ಎಸೆತದಲ್ಲೇ ಡೇವಿಡ್ ವಿಲ್ಲಿಯನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ಈ ಖುಷಿಯಲ್ಲಿ ಗ್ಯಾಲರಿಯಲ್ಲಿ ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಕುಣಿದು ಕುಪ್ಪಳಿಸುತ್ತಿರುವ ವಿಡಿಯೋವನ್ನು ಕ್ಯಾಮೆರಾಮ್ಯಾನ್ ಸೆರೆಹಿಡಿದಿದ್ದರು.

ಇದೀಗ ಧನಶ್ರೀ ವರ್ಮಾ ಅವರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ನಾನಾ ಕಾಮೆಂಟ್​ಗಳು ಮೂಡಿಬಂದಿದ್ದು, ಅನೇಕರು ಹೆಂಡತಿ ಅಂದರೆ ಹಿಂಗಿರಬೇಕು ಎಂದಿದ್ದಾರೆ. ಇನ್ನೊಬ್ಬರು ಆರ್​ಸಿಬಿ ಕೈಬಿಟ್ಟಿದ್ದಕ್ಕೆ ಚಹಲ್​ಗಿಂತ ಕೋಪ ಧನಶ್ರೀ ವರ್ಮಾಗೆ ಇರುವಂತಿದೆ. ಅದಕ್ಕೆ ಈ ಸಂಭ್ರಮ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಆರ್​ಸಿಬಿ ವಿರುದ್ದವೇ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಯುಜುವೇಂದ್ರ ಚಹಲ್ ಮಿಂಚಿದ್ದಾರೆ. ಅತ್ತ ಚಹಲ್​ ಅವರನ್ನು ಗ್ಯಾಲರಿಯಲ್ಲಿ ಕೂತು, ಕುಣಿದು ಕುಪ್ಪಳಿಸಿ ಬೆಂಬಲಿಸುವ ಮೂಲಕ ಧನಶ್ರೀ ವರ್ಮಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

(IPL 2022: Dhanashree Verma’s crazy celebration goes VIRAL)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ