IPL 2022: ದಾಖಲೆಯ ಸನಿಹದಲ್ಲಿ ಮಹೇಂದ್ರ ಸಿಂಗ್ ಧೋನಿ
IPL 2022: ಧೋನಿ ಐಪಿಎಲ್ನಲ್ಲಿ ಇದುವರೆಗೆ 4796 ರನ್ ಕಲೆಹಾಕಿದ್ದಾರೆ. ಹಾಗೆಯೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1617 ರನ್ಗಳಿಸಿದ್ದಾರೆ.
ಐಪಿಎಲ್ ಸೀಸನ್ 15ರ ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ್ದ ಮಹೇಂದ್ರ ಸಿಂಗ್ ಧೋನಿ ಇದೀಗ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 38 ಎಸೆತಗಳಲ್ಲಿ ಅಜೇಯ 50 ರನ್ ಗಳಿಸುವ ಮೂಲಕ ಧೋನಿ ಗಮನ ಸೆಳೆದಿದ್ದರು. ಇದೀಗ ಟಿ20 ಕ್ರಿಕೆಟ್‌ನಲ್ಲಿ 7 ಸಾವಿರ ರನ್ ಪೂರೈಸಲು ಧೋನಿಗೆ ಕೇವಲ 15 ರನ್‌ಗಳ ಅವಶ್ಯಕತೆಯಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಧೋನಿ ಈ ಸಾಧನೆ ಮಾಡುವ ನಿರೀಕ್ಷೆಯಿದೆ. ವಿಶೇಷ ಎಂದರೆ ಟಿ20 ಕ್ರಿಕೆಟ್‌ನಲ್ಲಿ ನಾಲ್ವರು ಭಾರತೀಯ ಬ್ಯಾಟ್ಸ್ಮನ್ಗಳು ಮಾತ್ರ ಏಳು ಸಾವಿರಕ್ಕೂ ಅಧಿಕ ರನ್ಗಳಿಸಿದ್ದಾರೆ. ಇದೀಗ ಐದನೇ ಆಟಗಾರನಾಗಿ ಧೋನಿ ಈ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.
ಸದ್ಯ 6985 ರನ್ ಕಲೆಹಾಕಿರುವ ಧೋನಿ ಲಕ್ನೋ ವಿರುದ್ದ 15 ರನ್ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಲ್ಲದೆ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಏಕೆಂದರೆ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ7 ಸಾವಿರ ರನ್ ಪೂರೈಸಿದ ಬ್ಯಾಟ್ಸ್ಮನ್ಗಳಲ್ಲಿ ಎಲ್ಲರೂ ಮೇಲಿನ ಕ್ರಮಾಂಕದಲ್ಲಿ ಆಡಿದ ಆಟಗಾರರಾಗಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಕ್ರಿಕೆಟಿಗರು:
ವಿರಾಟ್ ಕೊಹ್ಲಿ- 10,326 ರನ್ಸ್ ರೋಹಿತ್ ಶರ್ಮಾ- 9,936 ರನ್ಸ್ ಶಿಖರ್ ಧವನ್- 8,818 ರನ್ಸ್ ರಾಬಿನ್ ಉತ್ತಪ್ಪ- 7,070 ರನ್ಸ್ ಎಂಎಸ್ ಧೋನಿ- 6,985 ರನ್ಸ್
ಭಾರತದ ಮಾಜಿ ನಾಯಕ ಟಿ20 ಕ್ರಿಕೆಟ್‌ನಲ್ಲಿ 7 ಸಾವಿರ ರನ್ ಗಳಿಸಲು ಕೇವಲ 15 ರನ್‌ಗಳ ಅಂತರದಲ್ಲಿದ್ದಾರೆ. ಇದೀಗ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್ ಮತ್ತು ರಾಬಿನ್ ಉತ್ತಪ್ಪ ಮಾತ್ರ ಈ ಮಾದರಿಯಲ್ಲಿ 7 ಸಾವಿರಕ್ಕೂ ಹೆಚ್ಚು ರನ್ ಗಳಿಸಲು ಶಕ್ತರಾಗಿದ್ದಾರೆ. ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೀರನ್ ಪೊಲಾರ್ಡ್ ಮತ್ತು ಆರೋನ್ ಫಿಂಚ್ ನಂತರ ಟಿ20 ಮಾದರಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಐದನೇ ಆಟಗಾರ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇನ್ನು ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ಗಳಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ.
ಇದೀಗ ಭಾರತೀಯ ಟಿ20 ದಾಖಲೆಗಳ ಪಟ್ಟಿಗೆ ಧೋನಿ ಎಂಟ್ರಿಯಾಗಲಿದ್ದು, ಧೋನಿ ಐಪಿಎಲ್ನಲ್ಲಿ ಇದುವರೆಗೆ 4796 ರನ್ ಕಲೆಹಾಕಿದ್ದಾರೆ. ಹಾಗೆಯೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1617 ರನ್ಗಳಿಸಿದ್ದಾರೆ. ಈ ಮೂಲಕ ಒಟ್ಟು 6,985 ರನ್ಸ್ ಗಳಿಸಿ ಇದೀಗ 7 ಸಾವಿರ ರನ್ ಪೂರೈಸಲು ಮುಂದಾಗಿದ್ದಾರೆ.
ಇದನ್ನೂ ಓದಿ: Harshal Patel: ಭರ್ಜರಿ ಬೌಲಿಂಗ್ ಮೂಲಕ ದಾಖಲೆ ಬರೆದ ಹರ್ಷಲ್ ಪಟೇಲ್
ಇದನ್ನೂ ಓದಿ: IPL 2022: ವನಿಂದು ಹಸರಂಗ ವಿಭಿನ್ನ ಸಂಭ್ರಮಕ್ಕೆ ಇದುವೇ ಕಾರಣ..!