Ipl 2022: CSK ತಂಡಕ್ಕೆ 17 ವರ್ಷದ ಯುವ ವಿಕೆಟ್ ಕೀಪರ್ ಎಂಟ್ರಿ

Dinesh Bana: ಏಕೆಂದರೆ ಅಂಡರ್ 19 ಕ್ರಿಕೆಟ್​ನಲ್ಲಿ ಬಾನಾ ಪವರ್​ ಹಿಟ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಹರಿಯಾಣದ ಈ ಆಟಗಾರ ಬೌಂಡರಿಗಿಂತಲೂ ಹೆಚ್ಚು ಸಿಕ್ಸರ್ ಬಾರಿಸುತ್ತಾರೆ.

Ipl 2022: CSK ತಂಡಕ್ಕೆ 17 ವರ್ಷದ ಯುವ ವಿಕೆಟ್ ಕೀಪರ್ ಎಂಟ್ರಿ
Dinesh Bana
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 17, 2022 | 3:51 PM

ಇಂಡಿಯನ್ ಪ್ರೀಮಿಯರ್ ಲೀಗ್ 2022 (Ipl 2022) ಟೂರ್ನಿ ಮಾರ್ಚ್ 26ರಿಂದ ಮುಂಬೈನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಈಗಾಗಲೇ ಟೂರ್ನಿಯ ಸಿದ್ದತೆಗಾಗಿ ಸಿಎಸ್​ಕೆ ತಂಡವು ಸೂರತ್‌ನಲ್ಲಿ ಶಿಬಿರ ಆರಂಭಿಸಿದೆ., ಧೋನಿ ನೇತೃತ್ವದಲ್ಲಿ ಚೆನ್ನೈ ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ. ಇವರ ಜೊತೆ ಐಪಿಎಲ್​ನಲ್ಲಿ ಅವಕಾಶ ಪಡೆಯದ ಆಟಗಾರನೂ ಕೂಡ ಕಾಣಿಸಿಕೊಂಡಿದ್ದಾರೆ. ಹೌದು, ಈ ಬಾರಿ ಐಪಿಎಲ್​ನಲ್ಲಿ ಹರಿಯಾಣದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಬನಾ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ಚೆನ್ನೈ ಸೂಪರ್ ಕಿಂಗ್ಸ್​ ಕಿಂಗ್ಸ್ ಯುವ ಆಟಗಾರನನ್ನು ಅಭ್ಯಾಸ ಕ್ಯಾಂಪ್​ಗೆ ಕರೆಸಿಕೊಂಡಿದೆ.

ದಿನೇಶ್ ಬಾನಾ ಇತ್ತೀಚೆಗೆ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಆಡಿದ್ದರು. ದಿನೇಶ್ ಬಾನಾ ಅವರು ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಿಕ್ಸರ್ ಬಾರಿಸುವ ಮೂಲಕ ಭಾರತಕ್ಕೆ ಜಯ ತಂದುಕೊಟ್ಟಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಸಿಎಸ್​ಕೆ ತಂಡವು ನೆಟ್ ವಿಕೆಟ್ ಕೀಪರ್ ಆಗಿ ದಿನೇಶ್ ಬಾನಾ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಬಲಗೈ ಸ್ಫೋಟಕ ಬ್ಯಾಟ್ಸ್‌ಮನ್ ದಿನೇಶ್ ಬಾನಾ ಅವರು ಐಪಿಎಲ್ 2022 ಹರಾಜಿನಲ್ಲಿ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಏಕೆಂದರೆ ಐಪಿಎಲ್‌ನ ನಿಯಮಗಳ ಪ್ರಕಾರ, ಆಟಗಾರನು ಹರಾಜಿನಲ್ಲಿ ಪ್ರವೇಶಿಸಲು ಕನಿಷ್ಠ ಒಂದು ಪ್ರಥಮ ದರ್ಜೆ ಪಂದ್ಯ ಅಥವಾ ಲಿಸ್ಟ್-ಎ ಪಂದ್ಯವನ್ನು ಆಡಬೇಕಾಗಿತ್ತು. ಆದರೆ ದಿನೇಶ್ ಬಾನಾ ಇದುವರೆಗೆ ಪ್ರಥಮ ದರ್ಜೆ ಅಥವಾ ಲೀಸ್ಟ್ ಎ ಪಂದ್ಯವಾಡಿಲ್ಲ. ಹೀಗಾಗಿ ಅವರು ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿಲ್ಲ. ಇದಾಗ್ಯೂ ಇದೀಗ ಸಿಎಸ್​ಕೆ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ದಿನೇಶ್ ಬಾನಾ ಕೇವಲ ವಿಕೆಟ್ ಕೀಪರ್ ಅಲ್ಲ ಎಂಬುದು ವಿಶೇಷ. ಏಕೆಂದರೆ ಅಂಡರ್ 19 ಕ್ರಿಕೆಟ್​ನಲ್ಲಿ ಬಾನಾ ಪವರ್​ ಹಿಟ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಹರಿಯಾಣದ ಈ ಆಟಗಾರ ಬೌಂಡರಿಗಿಂತಲೂ ಹೆಚ್ಚು ಸಿಕ್ಸರ್ ಬಾರಿಸುತ್ತಾರೆ. ಅಂಡರ್-19 ವಿಶ್ವಕಪ್‌ನಲ್ಲೂ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. 17 ವರ್ಷದ ಬಾಬಾ ಇಡೀ ಅಂಡರ್-19 ವಿಶ್ವಕಪ್‌ನಲ್ಲಿ ಕೇವಲ 33 ಎಸೆತಗಳನ್ನು ಎದುರಿಸಿದ್ದರು. ಈ ವೇಳೆ 63 ರನ್ ಬಾರಿಸಿದ್ದರು. ಇದೇ ವೇಳೆ ದಿನೇಶ್ ಬಾನಾ ಅವರ ಸ್ಟ್ರೈಕ್ ರೇಟ್ 190ಕ್ಕಿಂತ ಹೆಚ್ಚಿತ್ತು ಎಂಬುದು ವಿಶೇಷ. ಇನ್ನು ಬನಾ ಟೂರ್ನಿಯಲ್ಲಿ 5 ಸಿಕ್ಸರ್ ಹಾಗೂ 3 ಬೌಂಡರಿ ಬಾರಿಸಿದ್ದರು. ಅಂಡರ್ 19 ತಂಡದಲ್ಲಿ ಕೆಳ ಕ್ರಮಾಂಕದಲ್ಲಿ ಫಿನಿಶರ್ ರೂಪದಲ್ಲಿ ಕಾಣಿಸಿಕೊಂಡ ಬಾನಾ ಇದೀಗ ಧೋನಿ ಗರಡಿಗೆ ಸೇರಿದ್ದಾರೆ. ಹೀಗಾಗಿ ಮುಂದೊಂದು ದಿನ ಪವರ್ ಹಿಟ್ಟರ್​ ಆಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(Ipl 2022: Dinesh Bana joins ms dhoni Chennai super kings camp in Surat)

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್