IPL 2022: ಮುಂದಿನ ಗುರಿ ಬಗ್ಗೆ ಮನಬಿಚ್ಚಿ ಮಾತನಾಡಿದ DK

IPL 2022: ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ.

IPL 2022: ಮುಂದಿನ ಗುರಿ ಬಗ್ಗೆ ಮನಬಿಚ್ಚಿ ಮಾತನಾಡಿದ DK
Dinesh Karthik
Follow us
TV9 Web
| Updated By: ಝಾಹಿರ್ ಯೂಸುಫ್

Updated on:Apr 18, 2022 | 3:01 PM

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ಗೆಲ್ಲುವ ಮೂಲಕ ಆರ್​ಸಿಬಿ ಮತ್ತೊಂದು ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವಿನ ರೂವಾರಿ ದಿನೇಶ್ ಕಾರ್ತಿಕ್. ಏಕೆಂದರೆ ಕೇವಲ 34 ಎಸೆತಗಳಲ್ಲಿ 5 ಸಿಕ್ಸ್ 5 ಫೋರ್​ನೊಂದಿಗೆ ಡಿಕೆ 66 ರನ್ ಬಾರಿಸಿದ್ದರು. ಅಂತಿಮ ಹಂತದಲ್ಲಿ ಮೂಡಿಬಂದ ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದಾಗಿ ಆರ್​ಸಿಬಿ ಡೆಲ್ಲಿ ವಿರುದ್ದ 16 ರನ್​ಗಳಿಂದ ಜಯ ಸಾಧಿಸಿತು. ಈ ಬಗ್ಗೆ ಮಾತನಾಡಿದ ಡಿಕೆ, ತಂಡದ ಪ್ರದರ್ಶನಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ತುಂಬಾ ಕಠಿಣ ಅಭ್ಯಾಸ ಮಾಡುತ್ತಿದ್ದೇನೆ. ಅದರ ಪ್ರತಿಫಲ ಜಯ ರೂಪದಲ್ಲಿ ಸಿಗುತ್ತಿದೆ ಎಂದಿದ್ದಾರೆ.

ಆದರೆ ನನ್ನ ಗುರಿ ಇರುವುದು ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವುದು. ನಾನು ಭಾರತ ತಂಡದಲ್ಲಿ ಮತ್ತೆ ಆಡ ಬೇಕೆಂದು ಬಯಸಿದ್ದೇನೆ. ಅದಕ್ಕಾಗಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇನೆ. ಏಕೆಂದರೆ ಟೀಮ್ ಇಂಡಿಯಾದಲ್ಲಿ ನಾನು ಇದುವರೆಗೆ ಏನೂ ಮಾಡಿಲ್ಲ. ಹೀಗಾಗಿ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಬೇಕೆಂದು ಬಯಸುತ್ತಿದ್ದೇನೆ. ಇದಕ್ಕಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದೇನೆ. ಇದರಿಂದ ನನ್ನ ಬ್ಯಾಟಿಂಗ್ ಕೂಡ ಉತ್ತಮಗೊಂಡಿದೆ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ ಡಿಕೆ. 36 ವರ್ಷದ ದಿನೇಶ್ ಕಾರ್ತಿಕ್​ಗೆ ಟೀಮ್ ಇಂಡಿಯಾದಲ್ಲಿ ಮತ್ತೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅನೂಜ್ ರಾವತ್ ಶೂನ್ಯಕ್ಕೆ ಔಟಾದರೆ, ಫಾಫ್ ಡುಪ್ಲೆಸಿಸ್​ 8 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ರನೌಟ್ ಆಗಿ ಹೊರನಡೆದಿದ್ದರು. ಈ ಹಂತದಲ್ಲಿ ಅಬ್ಬರಿಸಿದ ಗ್ಲೆನ್ ಮ್ಯಾಕ್ಸ್​ವೆಲ್ 34 ಎಸೆತಗಳಲ್ಲಿ 55 ರನ್ ಬಾರಿಸಿ ನಿರ್ಗಮಿಸಿದರು.

ತಂಡದ ಮೊತ್ತ 95 ಕ್ಕೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್​ಸಿಬಿಗೆ ಈ ಹಂತದಲ್ಲಿ ಆಸರೆಯಾಗಿದ್ದು ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅಹ್ಮದ್. 6ನೇ ವಿಕೆಟ್​ಗೆ ಅತ್ಯುತ್ತಮ ಜೊತೆಯಾಟವಾಡಿದ ಈ ಜೋಡಿ ತಂಡದ ರನ್​ಗತಿಯನ್ನು ಹೆಚ್ಚಿಸಿದರು. ಅದರಲ್ಲೂ ದಿನೇಶ್ ಕಾರ್ತಿಕ್ ಅಕ್ಷರಶಃ ಅಬ್ಬರಿಸಿದರು. ಮುಸ್ತಫಿಜುರ್ ರೆಹಮಾನ್ ಎಸೆದ 18ನೇ ಓವರ್​ನಲ್ಲಿ 28 ರನ್​ ಬಾರಿಸುವ ಮೂಲಕ ಡಿಕೆ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಅಂತಿಮ ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಶಹಬಾಜ್ ಹಾಗೂ ದಿನೇಶ್ ಕಾರ್ತಿಕ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 189 ಕ್ಕೆ ತಂದು ನಿಲ್ಲಿಸಿದರು.

190 ರನ್​ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 38 ಎಸೆತಗಳಲ್ಲಿ 66 ರನ್ ಬಾರಿಸಿ ಅಬ್ಬರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ 17 ಎಸೆತಗಳಲ್ಲಿ 34 ರನ್ ಬಾರಿಸಿ ರಿಷಭ್ ಪಂತ್ ಪಂದ್ಯ ಗೆಲ್ಲಿಸುವ ಭರವಸೆಯನ್ನು ಹುಟ್ಟುಹಾಕಿದ್ದರು. ಆದರೆ ಪಂತ್ ಔಟ್ ಆಗುತ್ತಿದ್ದಂತೆ ಡೆಲ್ಲಿ ತಂಡವು ದಿಢೀರ್ ಕುಸಿತಕ್ಕೊಳಗಾಯಿತು. ತಂಡದ ಪರ ಪೃಥ್ವಿ ಶಾ 16, ಮಿಚೆಲ್ ಮಾರ್ಷ್ 14, ರೋವ್ಮನ್ ಪೊವೆಲ್ 0, ಲಲಿತ್ ಯಾದವ್ 1 ವಿಫಲರಾಗಿದ್ದರು. ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 173 ರನ್​ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 16 ರನ್​ಗಳಿಂದ ಸೋಲೋಪ್ಪಿಕೊಂಡಿತು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 2:59 pm, Mon, 18 April 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ