IPL 2022: ಐಪಿಎಲ್ ಸೀಸನ್ 15 ನ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ (RCB vs LSG) ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಸೋತ ತಂಡ ಐಪಿಎಲ್ನಿಂದ ಹೊರಬೀಳಲಿದೆ. ಹೀಗಾಗಿ ಇದು ಉಭಯ ತಂಡಗಳಿಗೂ ನಿರ್ಣಾಯಕ ಪಂದ್ಯ. ಹಾಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ. ಏಕೆಂದರೆ ಆರ್ಸಿಬಿ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ದ ಗೆದ್ದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ಕೆಕೆಆರ್ ವಿರುದ್ದ ಜಯ ಸಾಧಿಸಿತ್ತು. ಅಂದರೆ ಎರಡೂ ತಂಡಗಳು ಗೆಲುವಿನ ಲಯದಲ್ಲಿರುವ ಕಾರಣ ಕೊನೆಯ ಪಂದ್ಯದಲ್ಲಿ ಆಡಿದ ಬಳಗವನ್ನೇ ಎಲಿಮಿನೇಟರ್ ಪಂದ್ಯದಲ್ಲೂ ಕಣಕ್ಕಿಳಿಸಬಹುದು.
ಇದಾಗ್ಯೂ ಆರ್ಸಿಬಿ ತಂಡದಲ್ಲಿ ಒಂದು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಪಂದ್ಯದಲ್ಲಿ ಆರ್ಸಿಬಿ ಪರ ಸಿರಾಜ್ ಆಡಿರಲಿಲ್ಲ. ಬದಲಿಗೆ ಸಿದ್ದಾರ್ಥ್ ಕೌಲ್ ಪದಾರ್ಪಣೆ ಮಾಡಿದ್ದರು. ಆದರೆ ಸಿದ್ದಾರ್ಥ್ ಕೌಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಲ್ಲೂ 4 ಓವರ್ಗಳಲ್ಲಿ 43 ರನ್ ನೀಡಿ ದುಬಾರಿ ಎನಿಸಿಕೊಂಡಿದ್ದರು. ಇನ್ನು ವಿಕೆಟ್ ಕೂಡ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಹೀಗಾಗಿ ಲಕ್ನೋ ವಿರುದ್ದದ ಪಂದ್ಯದಲ್ಲಿ ಮತ್ತೆ ಸಿರಾಜ್ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.
ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಲೀಗ್ ಹಂತದಲ್ಲಿ ಆಡಿದ ಪಂದ್ಯದಲ್ಲಿ ಸಿರಾಜ್ ಉತ್ತಮವಾಗಿ ಬೌಲಿಂಗ್ ಮಾಡಿದ್ದರು. ಸಿರಾಜ್ 4 ಓವರ್ಗಳಲ್ಲಿ 31 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಅದರಲ್ಲೂ ಪವರ್ಪ್ಲೇನಲ್ಲಿ ಸಿರಾಜ್ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದರು. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಅನುಭವಿ ವೇಗಿಗೆ ಮತ್ತೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚು. ಅದರಂತೆ ಆರ್ಸಿಬಿ ತಂಡವು ಸಿದ್ದಾರ್ಥ್ ಕೌಲ್ ಬದಲಿಗೆ ಮೊಹಮ್ಮದ್ ಸಿರಾಜ್ಗೆ ಚಾನ್ಸ್ ನೀಡಬಹುದು. ಇದರ ಹೊರತಾಗಿ ಆರ್ಸಿಬಿ ತಂಡದಲ್ಲಿ ಬದಲಾವಣೆ ಕಂಡು ಬರುವುದಿಲ್ಲ ಎಂದೇ ಹೇಳಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.